ಜೈಪುರ: ಬಿಎಸ್‌ಎಫ್ ಮೂವರು ಸಿಬ್ಬಂದಿಗಳು ಸೇರಿದಂತೆ 5 ಜನ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಬಂಧಸಿಲಾಗಿದೆ. ಮೂವರು ಬಿಎಸ್‌ಎಫ್ ಸಿಬ್ಬಂದಿ ಸೇರಿದಂತೆ ಐವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ನಡೆದಿದೆ ಎನ್ನಲಾದ ಘಟನೆಯ ಬಗ್ಗೆ ಸಂತ್ರಸ್ತೆ ರಾಯಸಿಂಗ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಎಫ್‌ಐಆರ್ ದಾಖಲಿಸಿಕೊಂಡು ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.
ಮಹಿಳೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿದ ನಂತರ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಹೆಡ್ ಕಾನ್‌ಸ್ಟೆಬಲ್ ಮತ್ತು ಸ್ಥಳೀಯ ಬೆಟಾಲಿಯನ್‌ನಲ್ಲಿ ನಿಯೋಜಿಸಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಇಬ್ಬರು ಕಾನ್‌ಸ್ಟೆಬಲ್‌ಗಳು ಎಂದು ಎಸ್‌ಪಿ ಶ್ರೀ ಗಂಗಾನಗರ ಆನಂದ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.
ಮಹಿಳೆಯು ಮಾರುಕಟ್ಟೆಗೆ ಬರುವುದನ್ನು ಗಮನಿಸಿದ ಪರಿಚಿತ ವ್ಯಕ್ತಿಗಳು ಆಕೆಯನ್ನು ಮಾರುಕಟ್ಟೆಯಿಂದ ಕಿಡ್ನಾಪ್ ಮಾಡಿದ್ದಾರೆ. ಮಹಿಳೆಯನ್ನು ಬಿಎಸ್‌ಎಫ್ ಸಿಬ್ಬಂದಿ ಇರುವ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಮಹಿಳೆ ತಿಳಿಸಿರುವಂತೆ ಅಲ್ಲಿ ಇಬ್ಬರು ಮೊದಲಿಗೆ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಸೇರಿದಂತೆ ಇನ್ನೂ ಮೂವರು ಜನರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿದ್ದಾಳೆ.
ಇದನ್ನು ಓದಿ: ಚಲಿಸುತ್ತಿದ್ದ ಕಾರಿನಲ್ಲೇ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ; ಕೊಚ್ಚಿಯಲ್ಲಿ ನಾಲ್ವರ ಬಂಧನ
ಪ್ರಕರಣದ ಸೂಕ್ಷ್ಮತೆಯನ್ನು ನೋಡಿದಾಗ, ಪೊಲೀಸ್ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿತು. ಇಂದು (ನ.19 ಶನಿವಾರ) ಮ್ಯಾಜಿಸ್ಟ್ರೇಟ್ ಅವರ ಹೇಳಿಕೆಯನ್ನು ಸಹ ದಾಖಲಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರಕರಣವು ನಿಜವೆಂದು ಕಂಡುಬಂದಿದೆ ಮತ್ತು ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ಈ ಕೃತ್ಯದಲ್ಲಿ ಸಿಬ್ಬಂದಿ ಭಾಗಿಯಾಗಿರುವುದು ಸ್ಪಷ್ಟವಾದ ನಂತರ ಬಿಎಸ್‌ಎಫ್ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಬಿಎಸ್‌ಎಫ್ ಅಧಿಕಾರಿಗಳು ಸಹಕರಿಸಿದ್ದು, ಮೂವರು ಸಿಬ್ಬಂದಿಯನ್ನು ಅವರ ಕ್ಯಾಂಪಸ್‌ನಲ್ಲಿ ಬಂಧಿಸಿದ್ದಾರೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:59 pm, Sat, 19 November 22