ಮೂರನೇ ಶಕ್ತಿಯೊಂದಿಗೆ ಸಹಕರಿಸುವ ಮೊದಲು ಭಾರತದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳಲು ಒಪ್ಪಿದ ಶ್ರೀಲಂಕಾ ಅಧ್ಯಕ್ಷ

2022 ರ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಚೀನಾ ಸೇರಿದಂತೆ ಜಗತ್ತು ಹಿಂಜರಿಯುತ್ತಿರುವಾಗ,  ರಾಜಕೀಯ ಬಿಕ್ಕಟ್ಟಿನಿಂದ ದ್ವೀಪ ರಾಷ್ಟ್ರವನ್ನು ರಕ್ಷಿಸಲು ಭಾರತವು ಸಂಪೂರ್ಣ ಆರ್ಥಿಕ, ಆಹಾರ ಮತ್ತು ತೈಲ ಬೆಂಬಲವನ್ನು ನೀಡಿತ್ತು.

ಮೂರನೇ ಶಕ್ತಿಯೊಂದಿಗೆ ಸಹಕರಿಸುವ ಮೊದಲು ಭಾರತದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳಲು ಒಪ್ಪಿದ ಶ್ರೀಲಂಕಾ ಅಧ್ಯಕ್ಷ
ಶ್ರೀಲಂಕಾ ಅಧ್ಯಕ್ಷರ ಜತೆ ಪ್ರಧಾನಿ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Jul 22, 2023 | 7:56 PM

ದೆಹಲಿ ಜುಲೈ 22: ಶುಕ್ರವಾರ ಶ್ರೀಲಂಕಾ (Srilanka) ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರೊಂದಿಗಿನ ಚರ್ಚೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 2022 ರಲ್ಲಿ ದ್ವೀಪ ರಾಷ್ಟ್ರವನ್ನು ನಾಶಪಡಿಸಿದ ಆರ್ಥಿಕ ಬಿಕ್ಕಟ್ಟಿಗೆ ಮೊದಲ ಪ್ರತಿಸ್ಪಂದಕರಲ್ಲಿ ಭಾರತವೂ ಸೇರಿದೆ ಎಂದು ನೆನಪಿಸಿದ್ದಾರೆ. ಅದೇ ವೇಳೆ ಕೊಲಂಬೊ ಮೂರನೇ ಶಕ್ತಿಯೊಂದಿಗೆ ಸಹಕರಿಸುವ ಮೊದಲು ಭಾರತದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ. ಭಾರತದ ಕಾರ್ಯತಂತ್ರ ಮತ್ತು ಭದ್ರತಾ ಕಾಳಜಿಗಳಿಗೆ ಶ್ರೀಲಂಕಾ ಸಂವೇದನಾಶೀಲವಾಗಿರುತ್ತದೆ ಎಂದು ಅಧ್ಯಕ್ಷ ವಿಕ್ರಮಸಿಂಘೆ ಒಪ್ಪಿಕೊಂಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ವಿಕ್ರಮಸಿಂಘೆ ಅವರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

2022 ರ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಚೀನಾ ಸೇರಿದಂತೆ ಜಗತ್ತು ಹಿಂಜರಿಯುತ್ತಿರುವಾಗ,  ರಾಜಕೀಯ ಬಿಕ್ಕಟ್ಟಿನಿಂದ ದ್ವೀಪ ರಾಷ್ಟ್ರವನ್ನು ರಕ್ಷಿಸಲು ಭಾರತವು ಸಂಪೂರ್ಣ ಆರ್ಥಿಕ, ಆಹಾರ ಮತ್ತು ತೈಲ ಬೆಂಬಲವನ್ನು ನೀಡಿತ್ತು.

ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡುವಲ್ಲಿ ಭಾರತ ಇದ್ದೇ ಇರುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದು, ಉಭಯ ನಾಯಕರು ಭವಿಷ್ಯದಲ್ಲಿ ಡಿಜಿಟಲ್, ತೈಲ, ವಿದ್ಯುತ್, ರಸ್ತೆ ಮತ್ತು ಬಹುಶಃ ರೈಲ್ರೋಡ್ ಸಂಪರ್ಕದ ಮೇಲೆ ಕೇಂದ್ರೀಕರಿಸುವ ಮೂಲಕ ದ್ವಿಪಕ್ಷೀಯ ಸಂಬಂಧದ ದೀರ್ಘಾವಧಿಯ ದೃಷ್ಟಿಕೋನವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಅಧ್ಯಕ್ಷ ವಿಕ್ರಮಸಿಂಘೆ ಅವರು ಭಾರತ ಮತ್ತು ಶ್ರೀಲಂಕಾ ನಡುವೆ 27 ಕಿಲೋಮೀಟರ್ ಉದ್ದದ ಸಂಭವನೀಯ ರಾಮೇಶ್ವರಂ-ತಲೈ ಮನ್ನಾರ್ ಜೋಡಣೆಯ ಮೇಲೆ ಸೇತುವೆಯನ್ನು ಸೂಚಿಸಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ತಕ್ಷಣವೇ ಒಪ್ಪಿದರು. ಪಾಕ್ ಜಲಸಂಧಿಯ ಈ ನಿರ್ದಿಷ್ಟ ಪ್ರದೇಶದಲ್ಲಿ ಸಮುದ್ರದ ಆಳವು ಸಹ ಅನುಕೂಲಕರವಾಗಿದೆ. ಏಕೆಂದರೆ ಇಲ್ಲಿ ಕೇವಲ ಒಂದರಿಂದ ಮೂರು ಮೀಟರ್ ನೀರು ಇದ್ದು ಸೇತುವೆಯನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ.

ಕಡಲ ಸಂಪರ್ಕದ ಭಾಗವಾಗಿ ಪರಸ್ಪರ ತಿಳುವಳಿಕೆಯೊಂದಿಗೆ ಕೊಲಂಬೊ, ಟ್ರಿಂಕೋಮಲಿ ಮತ್ತು ಕಂಕಸಂತುರೈಗಳಲ್ಲಿ ಬಂದರುಗಳು ಮತ್ತು ಲಾಜಿಸ್ಟಿಕ್ಸ್ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಸಹಕರಿಸಲು ಉಭಯ ದೇಶಗಳು ನಿರ್ಧರಿಸಿವೆ. ಇದಲ್ಲದೇ ವಾಯು ಸಂಪರ್ಕ, ಇಂಧನ ಮತ್ತು ವಿದ್ಯುತ್ ಸಂಪರ್ಕ ಹಾಗೂ ನವೀಕರಿಸಬಹುದಾದ ಇಂಧನದ ಬಗ್ಗೆ ಒಪ್ಪಂದವಿತ್ತು.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಫೇಲ್ ಎಂದು ರಿಪೋರ್ಟ್ ಕಾರ್ಡ್ ನೀಡಿದ ಕಾಂಗ್ರೆಸ್; ಈ ಎರಡರಲ್ಲಿ ನೀವು ಸ್ಕೋರ್ ಮಾಡುತ್ತೀರಿ ಎಂದು ಕೇಂದ್ರ ಸಚಿವೆ ತಿರುಗೇಟು

ಭೂಸೇತುವೆ ಪ್ರಸ್ತಾವನೆಯನ್ನು ಮೊದಲ ಬಾರಿಗೆ ಪ್ರಸ್ತಾಪಿಸಲಾಗಿದ್ದು, ಎರಡು ದೇಶಗಳನ್ನು ಸಂಪರ್ಕಿಸುವ ಸೇತುವೆಯೊಂದಿಗೆ ತೈಲ, ಅನಿಲ, ವಿದ್ಯುತ್ ಪೈಪ್‌ಲೈನ್ ಹೊಂದುವ ಬಲವಾದ ಸಾಧ್ಯತೆಯಿದೆ. ಶ್ರೀಲಂಕಾದ ಭಾಗದಲ್ಲಿ ತಲೈ ಮನ್ನಾರ್ ಇರುವಂತೆಯೇ ರಾಮೇಶ್ವರಂ ರೈಲುಮಾರ್ಗದೊಂದಿಗೆ ಸಂಪರ್ಕ ಹೊಂದಿರುವುದರಿಂದ ಉಭಯ ದೇಶಗಳ ನಡುವೆ ರೈಲು ಸೇತುವೆಯನ್ನು ಹೊಂದುವ ಸಾಧ್ಯತೆಯೂ ಇದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್