AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 21ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ

ಕಳೆದ ವರ್ಷ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತವು ಶ್ರೀಲಂಕಾಕ್ಕೆ ತುರ್ತು ಸಹಾಯದ ಪ್ಯಾಕೇಜ್ ಅನ್ನು ನೀಡಿತು. ಅದರಲ್ಲಿ 3 ಬಿಲಿಯನ್ ಅಮೆರಿಕನ್ ಡಾಲರ್ ಈ ಹಿಂದೆ ನೀಡಲಾದ ದ್ವಿಪಕ್ಷೀಯ ನೆರವಿನ ಹೊರತಾಗಿ ಇನ್ನೂ ಒಂದು ಬಿಲಿಯನ್ ಡಾಲರ್‌ಗಳಷ್ಟು ಬಾಕಿ ಉಳಿದಿದೆ.

ಜುಲೈ 21ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಶ್ರೀಲಂಕಾದ ಅಧ್ಯಕ್ಷ ರನಿಲ್  ವಿಕ್ರಮಸಿಂಘೆ
ರನಿಲ್ ವಿಕ್ರಮಸಿಂಘೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 17, 2023 | 1:15 PM

Share

ಭಾರತದೊಂದಿಗೆ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಶ್ರೀಲಂಕಾ (Srilanka) ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರು ಜುಲೈ 21 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ರಾಜಕೀಯ ಅವ್ಯವಸ್ಥೆ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ (economic crisis) ಶ್ರೀಲಂಕಾ ಬಳಲುತ್ತಿದ್ದಾಗ ಭಾರತ 3.5 ಬಿಲಿಯನ್ ಅಮೆರಿಕನ್ ಡಾಲರ್ ತುರ್ತು ನೆರವು ನೀಡಿ ಸಹಾಯ ಮಾಡಿತ್ತು. ಕೋವಿಡ್ ನಂತರದ ಪ್ರವಾಸಿಗರ ವಾಪಸಾತಿ ಮತ್ತು ಶ್ರೀಲಂಕಾದ ವಲಸೆಗಾರರಿಂದ ಹೆಚ್ಚಿದ ಯುಎಸ್ ಡಾಲರ್ ವಹಿವಾಟಿನೊಂದಿಗೆ ದೇಶದ ಆರ್ಥಿಕ ಮತ್ತು ರಾಜಕೀಯ ಪರಿಸ್ಥಿತಿಯು ಸ್ಥಿರತೆಯತ್ತ ಸಾಗುತ್ತಿದೆ. ತಮ್ಮ ಭೇಟಿಯ ಸಮಯದಲ್ಲಿ, ಅಧ್ಯಕ್ಷ ವಿಕ್ರಮಸಿಂಘೆ ಅವರು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸುವುದರ ಜತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.

ಶ್ರೀಲಂಕಾದಲ್ಲಿ ರಾಜಕೀಯ ಪರಿಸ್ಥಿತಿ ಸುಸ್ಥಿತಿಯಲ್ಲಿ ಇಲ್ಲದೇ ಇದ್ದರೂ ಅಧ್ಯಕ್ಷ ವಿಕ್ರಮಸಿಂಘೆ ಅವರು ಸಾರ್ವತ್ರಿಕ ಚುನಾವಣೆ ನಡೆಸಲುಮತ್ತು ನವೆಂಬರ್ 2024 ರವರೆಗೆ ಗೋಟಾಬಯ ರಾಜಪಕ್ಸೆಗೆ ನೀಡಿದ ಜನಾದೇಶವನ್ನು ಪೂರೈಸಲು ಯಾವುದೇ ಆತುರ ತೋರಿಸುತ್ತಿಲ್ಲ. ಶ್ರೀಲಂಕಾದ ಪರಿಸ್ಥಿತಿಯು ಈ ವರ್ಷದ ಕೊನೆಯಲ್ಲಿ ಬಾಕಿ ಇರುವ USD 2.9 ಶತಕೋಟಿಯ ಒಟ್ಟು ಪ್ಯಾಕೇಜ್‌ನಲ್ಲಿ ಐಎಂಎಫ್ ಎರಡನೇ ಸಾಲದ ಮೂಲಕ ಸುಧಾರಿಸಲು ಸಮಯ ತೆಗೆದುಕೊಳ್ಳುತ್ತದೆ.

ಕಳೆದ ವರ್ಷ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತವು ಶ್ರೀಲಂಕಾಕ್ಕೆ ತುರ್ತು ಸಹಾಯದ ಪ್ಯಾಕೇಜ್ ಅನ್ನು ನೀಡಿತು. ಅದರಲ್ಲಿ 3 ಬಿಲಿಯನ್ ಅಮೆರಿಕನ್ ಡಾಲರ್ ಈ ಹಿಂದೆ ನೀಡಲಾದ ದ್ವಿಪಕ್ಷೀಯ ನೆರವಿನ ಹೊರತಾಗಿ ಇನ್ನೂ ಒಂದು ಬಿಲಿಯನ್ ಡಾಲರ್‌ಗಳಷ್ಟು ಬಾಕಿ ಉಳಿದಿದೆ.

ಇದನ್ನೂ ಓದಿ: Credit Suisse: ದಿವಾಳಿಯಾದ ಕ್ರೆಡಿಟ್ ಸ್ವೀಸ್ ಬ್ಯಾಂಕ್ ಯುಬಿಎಸ್ ತೆಕ್ಕೆಗೆ; ಶ್ರೀಲಂಕಾ, ರಷ್ಯಾ ಸೇರಿದಂತೆ ಹಲವು ದೇಶಗಳಿಂದ ಹೊಸ ಗ್ರಾಹಕರು ಬೇಡ ಎಂದ ಯುಬಿಎಸ್

ಅಧ್ಯಕ್ಷ ವಿಕ್ರಮಸಿಂಘೆ ಅವರು ಬೆಲ್ಟ್-ರೋಡ್ ಉಪಕ್ರಮದಲ್ಲಿ ಪಾಲ್ಗೊಳ್ಳಲು ಅಕ್ಟೋಬರ್‌ನಲ್ಲಿ ಚೀನಾಕ್ಕೆ ಪ್ರಯಾಣಿಸಲಿದ್ದಾರೆ. ಶ್ರೀಲಂಕಾ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?