AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ದಾಳಿಯ ನಂತರ ಶ್ರೀನಗರದಲ್ಲಿ ಡ್ರೋನ್‌, ಮಾನವರಹಿತ ವಾಹನಗಳಿಗ ನಿಷೇಧ

"ಕೃಷಿ, ಪರಿಸರ ಸಂರಕ್ಷಣೆ ಮತ್ತು ವಿಪತ್ತು ತಗ್ಗಿಸುವಿಕೆ" ಕ್ಷೇತ್ರಗಳಲ್ಲಿ ಮ್ಯಾಪಿಂಗ್, ಸಮೀಕ್ಷೆಗಳು ಮತ್ತು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಬಳಸುವ ಸರ್ಕಾರಿ ಇಲಾಖೆಗಳು ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವ ಮೊದಲು ಸ್ಥಳೀಯ ಪೊಲೀಸರಿಗೆ ತಿಳಿಸಬೇಕಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಜಮ್ಮು ದಾಳಿಯ ನಂತರ ಶ್ರೀನಗರದಲ್ಲಿ ಡ್ರೋನ್‌, ಮಾನವರಹಿತ ವಾಹನಗಳಿಗ ನಿಷೇಧ
ಜಮ್ಮುವಿನಲ್ಲಿ ಭದ್ರತಾ ಪಡೆ ಸಿಬ್ಬಂದಿ ಹೈ ಅಲರ್ಟ್​​
TV9 Web
| Edited By: |

Updated on:Jul 04, 2021 | 5:00 PM

Share

ಶ್ರೀನಗರ: ಜಮ್ಮು ವಾಯುಪಡೆ ನೆಲೆ ಮೇಲೆ ಡ್ರೋನ್‌ಗಳನ್ನು ಬಳಸಿ ದಾಳಿ ನಡೆಸಿದ ಕೆಲ ದಿನಗಳ ನಂತರ ಶ್ರೀನಗರ ಜಿಲ್ಲಾಡಳಿತವು ಡ್ರೋನ್‌ಗಳು ಮತ್ತು ಅಂತಹುದೇ ಮಾನವರಹಿತ ವೈಮಾನಿಕ ವಾಹನಗಳ ಮೇಲೆ ನಿರ್ಬಂಧ ಹೇರಿದೆ. ಶ್ರೀನಗರದ ಜಿಲ್ಲಾಧಿಕಾರಿ ಮೊಹಮ್ಮದ್ ಅಜಾಜ್ ಅವರು ಶನಿವಾರ ” ಶ್ರೀನಗರ ಜಿಲ್ಲಾ ಪ್ರಾದೇಶಿಕ ವ್ಯಾಪ್ತಿಯಲ್ಲಿ ಡ್ರೋನ್‌ಗಳು ಮತ್ತು ಅಂತಹುದೇ ಮಾನವರಹಿತ ವೈಮಾನಿಕ ವಾಹನಗಳನ್ನು ಸಂಗ್ರಹಿಸುವುದು, ಮಾರಾಟ ಮಾಡುವುದು, ಸ್ವಾಧೀನಪಡಿಸಿಕೊಳ್ಳುವುದು, ಬಳಸುವುದು ಮತ್ತು ಸಾಗಿಸುವುದನ್ನು” ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. “ಈಗಾಗಲೇ ಡ್ರೋನ್ ಕ್ಯಾಮೆರಾಗಳು / ಅಂತಹುದೇ ಮಾನವರಹಿತ ವೈಮಾನಿಕ ವಾಹನಗಳನ್ನು ಹೊಂದಿರುವ ವ್ಯಕ್ತಿಗಳು ಸರಿಯಾದ ರಶೀದಿಯಡಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರುಪಡಿಸಬೇಕೆಂದು ಆದೇಶಿಸಲಾಗಿದೆ” ಎಂದು ಅಜಾಜ್ ಆದೇಶದಲ್ಲಿ ತಿಳಿಸಿದ್ದಾರೆ.

“ಕೃಷಿ, ಪರಿಸರ ಸಂರಕ್ಷಣೆ ಮತ್ತು ವಿಪತ್ತು ತಗ್ಗಿಸುವಿಕೆ” ಕ್ಷೇತ್ರಗಳಲ್ಲಿ ಮ್ಯಾಪಿಂಗ್, ಸಮೀಕ್ಷೆಗಳು ಮತ್ತು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಬಳಸುವ ಸರ್ಕಾರಿ ಇಲಾಖೆಗಳು ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವ ಮೊದಲು ಸ್ಥಳೀಯ ಪೊಲೀಸರಿಗೆ ತಿಳಿಸಬೇಕಾಗುತ್ತದೆ ಎಂದು ಅದು ಹೇಳಿದೆ. “ಈ ಆದೇಶದ ಯಾವುದೇ ಉಲ್ಲಂಘನೆಯು ಸಂಬಂಧಿತ ಕಾನೂನುಗಳ ಪ್ರಕಾರ ಶಿಕ್ಷಾರ್ಹ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

ಈ ವಾರದ ಆರಂಭದಲ್ಲಿ ಗಡಿ ಜಿಲ್ಲೆಯಾದ ರಾಜೌರಿ ಮತ್ತು ಕಥುವಾ ಕೂಡಾ ಇದೇ ರೀತಿಯ ಆದೇಶಗಳನ್ನು ಹೊರಡಿಸಿದವು.ತಮ್ಮ ಪ್ರದೇಶಗಳಲ್ಲಿ ಡ್ರೋನ್‌ಗಳು ಮತ್ತು ಕಡಿಮೆ ಹಾರುವ ವಸ್ತುಗಳ ಕಾರ್ಯಾಚರಣೆಯನ್ನು ನಿಷೇಧಿಸಿದವು.

ಭಾನುವಾರ, ಜಮ್ಮುವಿನ ಭಾರತೀಯ ವಾಯುಪಡೆಯ ನೆಲೆಯಲ್ಲಿ ಎರಡು ಸ್ಫೋಟಗಳು ವರದಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡು ಕಟ್ಟಡಕ್ಕೆ ಹಾನಿಯಾಗಿದೆ. ಜಮ್ಮುವಿನ ಕಲುಚಕ್ ಮಿಲಿಟರಿ ನೆಲೆಯ ಮೇಲೆ ಸುಳಿದಾಡುತ್ತಿರುವ ಅಪರಿಚಿತ ಡ್ರೋನ್‌ಗಳ ಮೇಲೆ ಗುಂಡು ಹಾರಿಸಿದ್ದರಿಂದ ಭದ್ರತಾ ಪಡೆಗಳು 24 ಗಂಟೆಗಳ ಒಳಗೆ ಇದೇ ರೀತಿಯ ದಾಳಿಯನ್ನು ತಡೆದವು. ಈ ಪ್ರದೇಶದ ಮಿಲಿಟರಿ ನೆಲೆಗಳ ಮೇಲೆ ಇಂತಹ ಹಲವಾರು ವೀಕ್ಷಣೆಗಳು ವರದಿಯಾಗಿವೆ.

ಭಾನುವಾರದ ದಾಳಿಯ ಪ್ರಾಥಮಿಕ ತನಿಖೆಗಳು ಜಮ್ಮು ವಾಯುಪಡೆಯ ನಿಲ್ದಾಣದಲ್ಲಿ ಡ್ರೋನ್ ದಾಳಿಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ಕೈವಾಡವನ್ನು ಸೂಚಿಸಿವೆ. ತಜ್ಞರ ಪ್ರಕಾರ, ದೇಶದ ಪ್ರಮುಖ ರಕ್ಷಣಾ ಸ್ಥಾಪನೆಯ ಮೇಲಿನ ದಾಳಿಯಲ್ಲಿ ಡ್ರೋನ್‌ಗಳನ್ನು ಬಳಸುತ್ತಿರುವುದು ಇದೇ ಮೊದಲು.

ಗುರುವಾರ, ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ಡ್ರೋನ್‌ಗಳ ಸುಲಭ ಲಭ್ಯತೆಯು ರಾಜ್ಯ ಮತ್ತು ರಾಜ್ಯೇತರ ಜನರಿಗೆ ಅವುಗಳನ್ನು ಬಳಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಅವುಗಳನ್ನು ನಿರ್ಮಿಸುವುದು “ಮನೆಯಲ್ಲಿ ನಿಭಾಯಿಸಬಹುದಾದ DIY ಯೋಜನೆಗೆ” ಹೋಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಮಾಬಾದ್‌ನಲ್ಲಿ ಭಾರತೀಯ ಹೈಕಮಿಷನ್ ಮೇಲೆ ಡ್ರೋನ್ ಹಾರಾಟ; ಪ್ರತಿಭಟಿಸಿದ ಭಾರತ

ಇದನ್ನೂ ಓದಿ:  ಜಮ್ಮುವಿನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಇಂದು ಮುಂಜಾನೆ ಮತ್ತೆ 3 ಡ್ರೋನ್​​ಗಳ ಹಾರಾಟ; ಭದ್ರತಾ ಪಡೆಗಳು ಹೈ ಅಲರ್ಟ್​

(Srinagar district administration imposed restrictions on drones and similar unmanned aerial vehicles )

Published On - 4:59 pm, Sun, 4 July 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ