SSC CPO ನೇಮಕಾತಿ: 1,871 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ಪೊಲೀಸ್ ಸಂಸ್ಥೆ 2026 ರ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಒಟ್ಟು 1,871 ಸಬ್-ಇನ್ಸ್‌ಪೆಕ್ಟರ್ (SI) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪದವೀಧರ ಅಭ್ಯರ್ಥಿಗಳು ಸೆಪ್ಟೆಂಬರ್ 30 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ ಮತ್ತು ಇತರ ಪ್ರಮುಖ ದಿನಾಂಕಗಳ ವಿವರಗಳನ್ನು ಪರಿಶೀಲಿಸಿ.

SSC CPO ನೇಮಕಾತಿ: 1,871 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC CPO ನೇಮಕಾತಿ

Updated on: Sep 11, 2026 | 2:38 PM

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕೇಂದ್ರ ಪೊಲೀಸ್ ಸಂಸ್ಥೆ (CPO) 2026 ರ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಮೂಲಕ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಒಟ್ಟು 1,871 ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 30 ರವರೆಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ ಹಾಗೂ ವರ್ಗೀಕರಣ:

SSC CPO 2026 ನೇಮಕಾತಿಯಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು 1,871 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ದೆಹಲಿ ಪೊಲೀಸ್ ಪುರುಷರ SI (ಕಾರ್ಯನಿರ್ವಾಹಕ) ವಿಭಾಗದಲ್ಲಿ 205 ಹುದ್ದೆಗಳು ಮತ್ತು ಮಹಿಳಾ ವಿಭಾಗದಲ್ಲಿ 112 ಹುದ್ದೆಗಳು ಖಾಲಿ ಇವೆ. ಹಾಗೆಯೇ, CAPF ನಲ್ಲಿ 1,320 SI (ಜನರಲ್ ಡ್ಯೂಟಿ) ಹುದ್ದೆಗಳು ಮತ್ತು CISF ನಲ್ಲಿ 234 SI (ಅಗ್ನಿಶಾಮಕ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ:

ಸಿಪಿಒ ನೇಮಕಾತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ರ ರಾತ್ರಿ 11 ಗಂಟೆಯವರೆಗೆ ಅವಕಾಶವಿರುತ್ತದೆ. ಆನ್‌ಲೈನ್ ಪರೀಕ್ಷಾ ಶುಲ್ಕವನ್ನು ಅಕ್ಟೋಬರ್ 1 ರಂದು ರಾತ್ರಿ 11 ಗಂಟೆಯವರೆಗೆ ಪಾವತಿಸಬಹುದು. ಒಂದು ವೇಳೆ ಅರ್ಜಿಯಲ್ಲಿ ಯಾವುದೇ ತಪ್ಪುಗಳಿದ್ದರೆ, ಅವುಗಳನ್ನು ಸರಿಪಡಿಸಲು ಅಕ್ಟೋಬರ್ 8 ರಿಂದ 10 ರವರೆಗೆ ಅರ್ಜಿ ತಿದ್ದುಪಡಿ ವಿಂಡೋ (Correction Window) ತೆರೆದಿರುತ್ತದೆ.

ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!

ಅರ್ಜಿ ಸಲ್ಲಿಸಲು ಬೇಕಾದ ವಯೋಮಿತಿ

ಅಭ್ಯರ್ಥಿಗಳ ವಯೋಮಿತಿಯನ್ನು ಆಗಸ್ಟ್ 1, 2026 ರ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ. CISF ನಲ್ಲಿ SI (ಅಗ್ನಿಶಾಮಕ) ಹುದ್ದೆಗೆ 18 ರಿಂದ 30 ವರ್ಷದೊಳಗಿನವರು ಮತ್ತು ಇತರ ಎಲ್ಲಾ SI ಹುದ್ದೆಗಳಿಗೆ 20 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಮಾಜಿ ಸೈನಿಕರಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆ ಮತ್ತು ಇತರೆ ಕಡ್ಡಾಯ ನಿಯಮಗಳು

ದೆಹಲಿ ಪೊಲೀಸ್ ಹಾಗೂ CAPF ನಲ್ಲಿ SI (GD) ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ (Graduation) ಹೊಂದಿರಬೇಕು. ಅಂತಿಮ ವರ್ಷದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದ್ದು, ನಿಗದಿತ ಗಡುವಿನೊಳಗೆ ಪದವಿ ಪೂರ್ಣಗೊಳಿಸಿರಬೇಕು. ಆದರೆ CISF SI (ಅಗ್ನಿಶಾಮಕ) ಹುದ್ದೆಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ (PCM) ವಿಷಯಗಳೊಂದಿಗೆ ವಿಜ್ಞಾನ ಪದವಿ ಅಥವಾ 3 ವರ್ಷಗಳ ಎಂಜಿನಿಯರಿಂಗ್ ಡಿಪ್ಲೊಮಾ ಹೊಂದಿರಬೇಕಾಗುತ್ತದೆ. ದೆಹಲಿ ಪೊಲೀಸ್ ಪುರುಷ SI ಹುದ್ದೆಗೆ ದೈಹಿಕ ಪರೀಕ್ಷೆಯ ದಿನದಂದು ಮಾನ್ಯ ಚಾಲನಾ ಪರವಾನಗಿ (LMV) ಹೊಂದಿರುವುದು ಕಡ್ಡಾಯ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us