AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSI Mantra: ಬೀದರ್​ ಮಗುವಿಗೆ ಮೇಡ್ ಇನ್ ಇಂಡಿಯಾ ರೋಬೋಟ್​ನಿಂದ ಶಸ್ತ್ರಚಿಕಿತ್ಸೆ: ದೇಶದ ವೈದ್ಯಕೀಯ ಇತಿಹಾಸದಲ್ಲೇ ಮೊದಲು

SSI Mantra Surgical Robotic System: ದೇಶದ ವೈದ್ಯಕೀಯ ಇತಿಹಾಸದಲ್ಲಿ ಹೈದರಾಬಾದ್​​ನ ಆಸ್ಪತ್ರೆ ಮತ್ತು ದೇಶದ ಮೊದಲ ಸರ್ಜಿಕಲ್ ರೋಬೋಟಿಕ್ ಸಿಸ್ಟಂ ಅಭಿವೃದ್ಧಿಪಡಿಸಿರುವ ಎಸ್​ಎಸ್​​ ಇನ್ನೊವೇಷನ್ಸ್ ಮಹತ್ವದ ಮೈಲಿಗಲ್ಲು ಸಾಧಿಸಿವೆ. ಕರ್ನಾಟಕದ ಬೀದರ್​​ ಜಿಲ್ಲೆಯ ಒಂದು ವರ್ಷದ ಮಗುವಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಆ ಕುರಿತ ಹೆಚ್ಚಿನ ವಿವರ ಇಲ್ಲಿದೆ.

SSI Mantra: ಬೀದರ್​ ಮಗುವಿಗೆ ಮೇಡ್ ಇನ್ ಇಂಡಿಯಾ ರೋಬೋಟ್​ನಿಂದ ಶಸ್ತ್ರಚಿಕಿತ್ಸೆ: ದೇಶದ ವೈದ್ಯಕೀಯ ಇತಿಹಾಸದಲ್ಲೇ ಮೊದಲು
ಎಸ್​ಎಸ್​ಐ ಮಂತ್ರImage Credit source: SS Innovations
Ganapathi Sharma
|

Updated on:May 02, 2024 | 10:19 AM

Share

ಹೈದರಾಬಾದ್, ಮೇ 2: ಕರ್ನಾಟಕದ ಬೀದರ್​ (Bidar) ಜಿಲ್ಲೆಯ 1 ವರ್ಷದ ಮಗುವಿಗೆ ಹೈದರಾಬಾದ್​ನಲ್ಲಿ (Hyderabad) ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆ (Robotic Surgery) ನೆರವೇರಿಸಲಾಗಿದ್ದು, ದೇಶದ ವೈದ್ಯಕೀಯ ಇತಿಹಾಸದಲ್ಲೇ ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ. ದೇಶದ ಮೊದಲ ಸರ್ಜಿಕಲ್ ರೋಬೋಟಿಕ್ ಸಿಸ್ಟಂ (Surgical Robotic System) ಅಭಿವೃದ್ಧಿಪಡಿಸಿರುವ ಎಸ್​ಎಸ್​​ ಇನ್ನೊವೇಷನ್ಸ್​​ನ (SS Innovations) ‘ಎಸ್​ಎಸ್​ಐ ಮಂತ್ರ (SSI Mantra)’ ಶಸ್ತ್ರಚಿಕಿತ್ಸೆ ನೆರವೇರಿಸಿದೆ. ಕಡಿಮೆ ವೆಚ್ಚದಲ್ಲಿ ಜನಸಾಮಾನ್ಯರಿಗೂ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯುವಂತಾಗಬೇಕು ಎಂಬ ಉದ್ದೇಶದೊಂದಿಗೆ ಎಸ್​ಎಸ್​​ ಇನ್ನೊವೇಷನ್ಸ್ ಈ ರೋಬೋಟಿಕ್ ಸಿಸ್ಟಂ ಅಭಿವೃದ್ಧಿಪಡಿಸಿದೆ.

ಹೈದರಾಬಾದ್​​ನ ಪ್ರೀತಿ ಯುರಾಲಜಿ ಆ್ಯಂಡ್ ಕಿಡ್ನಿ ಹಾಸ್ಪಿಟಲ್ಸ್​​​ನ ಎಂಡಿಯೂ ಆಗಿರುವ ಹಿರಿಯ ಯುರಾಲಜಿಸ್ಟ್ (ಮೂತ್ರಶಾಸ್ತ್ರಜ್ಞ) ಡಾ. ಚಂದ್ರಮೋಹನ್ ವಡ್ಡಿ ಮೇಲುಸ್ತುವಾರಿಯಲ್ಲಿ ಎಸ್​ಎಸ್​ಐ ಮಂತ್ರ ಸರ್ಜಿಕಲ್ ರೋಬೋಟಿಕ್ ಸಿಸ್ಟಂ ಬಳಸಿಕೊಂಡು ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ.

ಈ ಶಸ್ತ್ರಚಿಕಿತ್ಸೆಯು ಮಕ್ಕಳ ರೊಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಗಮನಾರ್ಹ ಪ್ರಗತಿಯನ್ನು ಸೂಚಿಸುತ್ತದೆ ಮತ್ತು ಎಸ್​ಎಸ್​ಐ ಮಂತ್ರಾ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಪ್ರೀತಿ ಯುರಾಲಜಿ ಆ್ಯಂಡ್ ಕಿಡ್ನಿ ಹಾಸ್ಪಿಟಲ್ಸ್​​​ ತಿಳಿಸಿದೆ.

ಬೀದರ್​ ಮಗುವಿಗೆ ಏನಾಗಿತ್ತು?

ಬೀದರ್​​ನ ಒಂದು ವರ್ಷದ ಮಗು ಎಡ ಕಿಡ್ನಿಯಲ್ಲಿ ಊತ ಮತ್ತು ಬ್ಲಾಕ್​ ಸಮಸ್ಯೆಯನ್ನು ಎದುರಿಸುತ್ತಿತ್ತು. ಹೀಗಾಗಿ ಮಗುವಿನ ಪಾಲಕರು ಪ್ರೀತಿ ಯುರಾಲಜಿ ಆ್ಯಂಡ್ ಕಿಡ್ನಿ ಹಾಸ್ಪಿಟಲ್ಸ್​ಗೆ ಕರೆತಂದಿದ್ದರು. ಮೂತ್ರಪಿಂಡದಲ್ಲಿ ತೀವ್ರವಾದ ಅಡಚಣೆ ಇರುವುದು ನ್ಯೂಕ್ಲಿಯರ್ ಸ್ಕ್ಯಾನಿಂಗ್​ನಲ್ಲಿಯೂ ದೃಢಪಟ್ಟ ಕಾರಣ ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದೇ ವೈದ್ಯರು ಹೇಳಿದ್ದರು. ಇದನ್ನು ತೆರೆದ ಶಸ್ತ್ರಚಿಕಿತ್ಸೆ, ಲ್ಯಾಪ್ರೊಸ್ಕೋಪಿಕ್ ಅಥವಾ ರೊಬೋಟಿಕ್ ವಿಧಾನದಿಂದ ಮಾಡಬಹುದಾಗಿತ್ತು. ನಂತರ ರೊಬೋಟಿಕ್ ವಿಧಾನದಿಂದ ಮಾಡಲು ವೈದ್ಯರು ನಿರ್ಧರಿಸಿದರು.

ಭಾರದತ ಅತಿ ಕಿರಿಯ ರೋಗಿ!

ಇದೀಗ ದೇಶೀಯ ತಂತ್ರಜ್ಞಾನದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾದ ಅತ್ಯಂತ ಕಿರಿಯ ರೋಗಿ ಎಂಬ ಹೆಗ್ಗಳಿಕೆಯೂ ಬೀದರ್​​ನ ಮಗುವಿನದ್ದಾಗಿದೆ. ಮಗುವಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ ಬಗ್ಗೆ ಹಾಗೂ ನೂತನ ತಂತ್ರಜ್ಞಾನದ ಕುರಿತು ಸರ್ಜಿಕಲ್ ರೋಬೋಟಿಕ್ ಸಿಸ್ಟಂ ಅಭಿವೃದ್ಧಿಪಡಿಸಿರುವ ಎಸ್​ಎಸ್​​ ಇನ್ನೊವೇಷನ್ಸ್​​ನ ಸ್ಥಾಪಕ, ಅಧ್ಯಕ್ಷ, ಸಿಇಒ ಡಾ. ಸುಧೀರ್ ಶ್ರೀವಾಸ್ತವ ಅವರ ಒಳನೋಟಕ್ಕೆ ಸಂಬಂಧಿಸಿದ ವಿಡಿಯೋವನ್ನು ‘ಸಿಎನ್​ಎನ್ ನ್ಯೂಸ್18’ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: ಭೇದಿ, ಅತಿಸಾರದಂತಹ ಸಮಸ್ಯೆ ಈ ರೋಗದ ಲಕ್ಷಣವಾಗಿರಬಹುದು ಎಚ್ಚರ!

ವೈದ್ಯರು ಹೇಳುವುದೇನು?

‘ಎಲ್ಲಾ ರೀತಿಯಲ್ಲೂ ತಪಾಸಣೆ ಮಾಡಿದ ನಂತರ, ಪೋಷಕರ ಒಪ್ಪಿಗೆಯೊಂದಿಗೆ ನಾವು ಮೇಡ್ ಇನ್ ಇಂಡಿಯಾ ಸರ್ಜಿಕಲ್ ರೊಬೊಟಿಕ್ ಸಿಸ್ಟಮ್ – ಎಸ್‌ಎಸ್‌ಐ ಮಂತ್ರದೊಂದಿಗೆ ರೋಬೋಟಿಕ್ ಪೈಲೋಪ್ಲ್ಯಾಸ್ಟಿ ಮಾಡಿದ್ದೇವೆ. ಈ ವ್ಯವಸ್ಥೆಯು ಅತ್ಯಂತ ಸ್ಪಷ್ಟವಾದ 3D 4K ಚಿತ್ರಣವನ್ನು ಒದಗಿಸುತ್ತದೆ. ಈ ಅತ್ಯಂತ ನಿರೀಕ್ಷಿತ ಯಶಸ್ವಿ ಶಸ್ತ್ರಚಿಕಿತ್ಸೆಯು ಭಾರತೀಯ ವೈದ್ಯಕೀಯ ಶಸ್ತ್ರಚಿಕಿತ್ಸೆಯಲ್ಲಿ ಹೊಸ ಯುಗದ ಉದಯವನ್ನು ಸೂಚಿಸುತ್ತದೆ. ಕಾರ್ಯಾಚರಣೆಯ ಯಶಸ್ವಿ ಫಲಿತಾಂಶವು ಶಸ್ತ್ರಚಿಕಿತ್ಸಾ ಕ್ಷೇತ್ರದಲ್ಲಿ ದೇಶದಲ್ಲಿ ಕ್ರಾಂತಿಯನ್ನುಂಟುಮಾಡಲು ಸಾಧ್ಯವಿದೆ ಎಂಬುದನ್ನು ಒತ್ತಿಹೇಳಿದೆ ಎಂದು ಡಾ. ಚಂದ್ರಮೋಹನ್ ವಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:02 am, Thu, 2 May 24

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ