Vaishno Devi Temple Stampede: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು

ಜಮ್ಮು: ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತ ಉಂಟಾಗಿದ್ದು, 6 ಜನರು ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.

Vaishno Devi Temple Stampede: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು
Stampede at vaishno devi Temple: ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತ, 6 ಜನರ ಸಾವು
Follow us
| Updated By: ಸಾಧು ಶ್ರೀನಾಥ್​

Updated on:Jan 01, 2022 | 7:59 AM

ಜಮ್ಮು: ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ ಉಂಟಾಗಿದ್ದು, 12 ಭಕ್ತರು ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ (Mata Vaishno Devi Narayana Superspeciality hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸ ವರ್ಷಾಚಣೆಗೆಂದು ಭಕ್ತರು ಭಾರೀ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಜಮಾವಣೆಗೊಂಡಿದ್ದರು. ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರದತ್ತ ನುಗ್ಗಿ ಬಂದಾಗ ಈ ಕಾಲ್ತುಳಿತ ಸಂಭವಿಸಿದೆ.

ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರುವ ಸಂಭವವಿದೆ. ಜಮ್ಮು ಕಾಶ್ಮೀರದಲ್ಲಿರುವ ತ್ರಿಕೂಟ ಬೆಟ್ಟಗಳಲ್ಲಿ ಮಾತಾ ವೈಷ್ಣೋದೇವಿ ಮಂದಿರವಿದ್ದು (Mata Vaishno Devi shrine atop Trikuta hills) ಅಲ್ಲಿ ಈ ಅವಘಡ ಸಂಭವಿಸಿದೆ.

ಜಮ್ಮು-ಕಾಶ್ಮೀರ ಸರ್ಕಾರವು ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರಾರ್ಥವಾಗಿ ತಲಾ 10 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ. ಜೊತೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಇನ್ನು ಗಾಯಾಳುಗಳಿಗೆ ಜಮ್ಮು-ಕಾಶ್ಮೀರ ಸರ್ಕಾರದಿಂದ ₹ 2 ಲಕ್ಷ ರೂಪಾಯಿ ಮತ್ತು PMNRFನಿಂದ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಪ್ರಕಟಿಸಲಾಗಿದೆ.

ಒಂದು ಮಾಹಿತಿಯ ಪ್ರಕಾರ ವೈಷ್ಣೋದೇವಿ ಪುಣ್ಯಕ್ಷೇತ್ರದಲ್ಲಿ ಮಾತಾ ವೈಷ್ಣೋದೇವಿ ಭವನದ ಬಳಿ ಬೆಳಗಿನ ಜಾವ 2.45ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಭವನದಲ್ಲಿ ಜಮಾಯಿಸಿದ್ದ ಜನರ ನಡುವೆ ಗಲಾಟೆ ಶುರುವಾಗಿದೆ. ಮಾತಿಗೆ ಮಾತು ಬೆಳೆದು ತಳ್ಳಾಟ ಜೋರಾಗಿದೆ. ಮುಂದೆ ಅದು ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅತೀವ ದುಃಖ ವ್ಯಕ್ತಪಡಿಸಿದ್ದು, ಟ್ವೀಟ್​ ಮಾಡಿದ್ದಾರೆ ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಲ್ಲಿ ಭಕ್ತರ ಸಾವಿನ ಸುದ್ದಿ ಕೇಳಿ ಅತೀವ ದುಃಖವಾಗಿದೆ ಎಂದು ಮೃತರಿಗೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

Published On - 6:51 am, Sat, 1 January 22

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!