ದೆಹಲಿ ಜುಲೈ 02: ಮಂಗಳವಾರ ಉತ್ತರ ಪ್ರದೇಶದ (Uttar Pradesh) ಹಾಥರಸ್ನಲ್ಲಿ (Hathras stampede) ಸಂಭವಿಸಿದ ಕಾಲ್ತುಳಿತದಲ್ಲಿ 107 ಮಂದಿ ಸಾವಿಗೀಡಾಗಿದ್ದಾರೆ. ಈ ಘಟನೆಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತ್ರಸ್ತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಮೋದಿ, “ನಾನು ಮಾತನಾಡುತ್ತಿದ್ದಂತೆ, ಉತ್ತರ ಪ್ರದೇಶದ ಹಾಥರಸ್ನಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಉತ್ತರ ಪ್ರದೇಶ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಲಾಗುವುದು ಎಂದು ನಾನು ಈ ಸದನದ ಮೂಲಕ ಎಲ್ಲರಿಗೂ ಭರವಸೆ ನೀಡುತ್ತೇನೆ ಎಂದಿದ್ದಾರೆ.
ಏತನ್ಮಧ್ಯೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವಂತೆ ಸೂಚನೆ ನೀಡಿದರು.
#WATCH | Prime Minister Narendra Modi says, “There are reports of many people dying in the stampede in Hathras, Uttar Pradesh. I express my condolences to those who lost their lives in this accident. I wish for the speedy recovery of all the injured. The administration is engaged… pic.twitter.com/UasFmME0br
— ANI (@ANI) July 2, 2024
ಹಾಥರಸ್ ಜಿಲ್ಲೆಯ ಸಿಕಂದರಾ ರಾವು ತಹಸಿಲ್‌ನ ರತಿಭಾನ್‌ಪುರ ಗ್ರಾಮದಲ್ಲಿ ಧಾರ್ಮಿಕ ಬೋಧಕ ಮತ್ತು ಅವರ ಪತ್ನಿ ಉದ್ದೇಶಿಸಿ ಮಾತನಾಡುತ್ತಿದ್ದ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು ನೂರಕ್ಕಿಂತಲೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಮಹಿಳೆಯರು.
ಶೀಘ್ರದಲ್ಲೇ ಎಫ್‌ಐಆರ್ ದಾಖಲಿಸಲಾಗುವುದು ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಆದಿತ್ಯನಾಥ್ ಕೂಡ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಇದನ್ನೂ ಓದಿ: Hathras Stampede: ಉತ್ತರ ಪ್ರದೇಶದ ಹಾಥರಸ್ನಲ್ಲಿ ಸತ್ಸಂಗ ವೇಳೆ ಕಾಲ್ತುಳಿತ: 107 ಮಂದಿ ಸಾವು
जनपद हाथरस की दुर्भाग्यपूर्ण दुर्घटना में हुई जनहानि अत्यंत दुःखद एवं हृदय विदारक है।
मेरी संवेदनाएं शोक संतप्त परिजनों के साथ हैं।
संबंधित अधिकारियों को राहत एवं बचाव कार्यों के युद्ध स्तर पर संचालन और घायलों के समुचित उपचार हेतु निर्देश दिए हैं।
उत्तर प्रदेश सरकार में मा.…
— Yogi Adityanath (@myogiadityanath) July 2, 2024
“ಉತ್ತರ ಪ್ರದೇಶ ಸರ್ಕಾರದ ಗೌರವಾನ್ವಿತ ಸಚಿವರಾದ ಲಕ್ಷ್ಮೀ ನಾರಾಯಣ ಚೌಧರಿ ಜಿ, ಸಂದೀಪ್ ಸಿಂಗ್ ಜಿ ಅವರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಘಟನಾ ಸ್ಥಳಕ್ಕೆ ತಲುಪಲು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. ಎಡಿಜಿ, ಆಗ್ರಾ ಮತ್ತು ಅಲಿಘರ್ ಆಯುಕ್ತರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಅಪಘಾತದ ಕಾರಣಗಳನ್ನು ತನಿಖೆ ಮಾಡಲು ಸೂಚನೆಗಳನ್ನು ಸಹ ನೀಡಲಾಗಿದೆ. ಅಗಲಿದ ಆತ್ಮಗಳಿಗೆ ಮೋಕ್ಷ ಸಿಗಲಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಭಗವಂತ ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:01 pm, Tue, 2 July 24