ಕೊಲ್ಕತ್ತಾದ ಕಾಲ್ತುಳಿತದಲ್ಲಿ 17 ಭಕ್ತರು ಸಾವು; ಪ್ರಧಾನಿ ಮೋದಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾಣ ಘೋಷಣೆ

ಪಶ್ಚಿಮ ಬಂಗಾಳದ ಕೊಲ್ಕತ್ತಾದ ದುರ್ಗಾ ಪೂಜೆಯ ಸಂಭ್ರಮದ ನಡುವೆಯೇ ಅನಾಹುತವೊಂದು ಸಂಭವಿಸಿದೆ. ಇಂದು ಸಂಜೆ ಜನದಟ್ಟಣೆಯ ಅಧಿಕ ಒತ್ತಡದಿಂದಾಗಿ ಮಧ್ಯ ಕೋಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ಸಾರ್ವಜನಿಕ ಪೂಜಾ ಪೆಂಡಾಲ್‌ನ ಒಂದು ಭಾಗ ಕುಸಿದು ಬಿದ್ದಿದೆ. ಈ ದುರ್ಘಟನೆಯಿಂದಾಗಿ ಸ್ಥಳದಲ್ಲಿ ಕಾಲ್ತುಳಿತದಂತಹ ಆತಂಕದ ವಾತಾವರಣ ನಿರ್ಮಾಣವಾಯಿತು. ಈಗಾಗಲೇ 17 ಜನ ಮೃತಪಟ್ಟಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಗಾ ಪೂಜಾ ಪೆಂಡಾಲ್‌ ಕುಸಿದುಬಿದ್ದ ಪರಿಣಾಮವಾಗಿ ಭಕ್ತರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೆಂಡಾಲ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕೊಲ್ಕತ್ತಾದ ಕಾಲ್ತುಳಿತದಲ್ಲಿ 17 ಭಕ್ತರು ಸಾವು; ಪ್ರಧಾನಿ ಮೋದಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾಣ ಘೋಷಣೆ
Kolkata Durga Puja Pendal Collapsed

Updated on: Oct 17, 2026 | 11:14 PM

ಮುಖ್ಯಾಂಶಗಳು

  • ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಯ 7ನೇ ದಿನದಂದು, ಚೋರ್ಬಗನ್ ಸಾರ್ವಜನಿಕ ದುರ್ಗೋತ್ಸವ ಸಮಿತಿ ಪಂಡಾಲ್‌ನಲ್ಲಿ ಕಾಲ್ತುಳಿತ
  • ಮಳೆಯಿಂದ ಇಂದು ಸಂಜೆ 7.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ
  • ಗಾಯಗೊಂಡವರು ಆಸ್ಪತ್ರೆಗೆ ದಾಖಲು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

ಕೊಲ್ಕತ್ತಾ, ಅಕ್ಟೋಬರ್ 17: ಇಂದು (ಶನಿವಾರ) ಸಂಜೆ ಕೊಲ್ಕತ್ತಾದ ಚೋರ್‌ಬಾಗನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ ಪೂಜಾ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 17 ಜನ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ವಿಪರೀತ ಜನದಟ್ಟಣೆಯಿಂದ ಅದು ಕುಸಿದಿದ್ದು, ಭಕ್ತರಲ್ಲಿ ಆತಂಕ ಉಂಟಾಗಿ, ನೂಕುನುಗ್ಗಲು ಸಂಭವಿಸಿದ ಪರಿಣಾಮವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಸ್ಥಿತಿ ವಿಚಾರಿಸಿದರು.

ಈ ದುರ್ಘಟನೆಯ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತೀವ್ರ ಆಘಾತ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. “ಚೋರ್‌ಬಾಗನ್ ಪೂಜಾ ಪೆಂಡಾಲ್‌ನಲ್ಲಿ ನಡೆದ ಕಾಲ್ತುಳಿತದ ಘಟನೆಯು ನನಗೆ ತೀವ್ರ ಆಘಾತ ಹಾಗೂ ದುಃಖವನ್ನುಂಟು ಮಾಡಿದೆ” ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಪರಿಹಾರ ಘೋಷಣೆ:

ಈ ಘಟನೆಗೆ ಸಂತಾಪ ಸೂಚಿಸಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.


ಇದನ್ನೂ ಓದಿ: ದುರ್ಗಾ ದೇವಿಯ ಕೈಯಲ್ಲಿರುವ ಆಯುಧಗಳ ರಹಸ್ಯವೇನು? ತ್ರಿಶೂಲದಿಂದ ಚಕ್ರದವರೆಗೆ ಎಲ್ಲದರ ಮಹತ್ವ ಇಲ್ಲಿದೆ!


ಈ ಘಟನೆಯಲ್ಲಿ ಗಾಯಗೊಂಡ ಹಾಗೂ ಅಸ್ವಸ್ಥಗೊಂಡ ಎಲ್ಲರನ್ನೂ ತಕ್ಷಣವೇ ರಕ್ಷಿಸಿ, ಕೊಲ್ಕತ್ತಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅನಿರೀಕ್ಷಿತ ಘಟನೆಯು ಪೂಜಾ ಆಯೋಜಕರಲ್ಲಿ ತೀವ್ರ ಆತಂಕ ಮೂಡಿಸಿದೆ. ವಿಷಯ ತಿಳಿದ ತಕ್ಷಣವೇ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ನಡೆದ ಸಂಜೆಯ ವೇಳೆ ಕೊಲ್ಕತ್ತಾದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯೂ ಸುರಿದಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಹರಸಾಹಸ ಪಡಬೇಕಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 pm, Sat, 17 October 26

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us