ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್ ಓಪನ್! ರಾಜ್ಯದಲ್ಲಿ ಯಾವಾಗ?

ಮುಂಬೈ: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದಾಗಿ ದೇಶಾದ್ಯಂತ ಎಲ್ಲಾ ಜಿಮ್​ಗಳನ್ನು ಮುಚ್ಚಲಾಗಿತ್ತು. ಇದೀಗ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಆದ್ರೆ ಜಿಮ್​ಗಳ ಪುನರಾರಂಭಕ್ಕೆ ಮಾತ್ರ ಅವಕಾಶ ನೀಡಿಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಕಳೆದ ವಾರ ಎಲ್ಲಾ ಜಿಮ್ ಮಾಲೀಕರು ಹಾಗೂ ಟ್ರೈನರ್ಸ್​ ಭಾರಿ ಪ್ರತಿಭಟನೆ ನಡೆಸಿದ್ದರು. ಉಳಿದೆಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿರುವಾಗ ನಮಗೆ ಯಾಕೆ ನೀಡಿಲ್ಲ ಎಂದು ಆಕ್ರೋಶ ಭರಿತರಾಗಿ ರಾಜ್ಯ ಸರ್ಕಾರದ […]

ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್ ಓಪನ್! ರಾಜ್ಯದಲ್ಲಿ ಯಾವಾಗ?

Updated on: Jun 25, 2020 | 7:01 PM

ಮುಂಬೈ: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದಾಗಿ ದೇಶಾದ್ಯಂತ ಎಲ್ಲಾ ಜಿಮ್​ಗಳನ್ನು ಮುಚ್ಚಲಾಗಿತ್ತು. ಇದೀಗ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಆದ್ರೆ ಜಿಮ್​ಗಳ ಪುನರಾರಂಭಕ್ಕೆ ಮಾತ್ರ ಅವಕಾಶ ನೀಡಿಲ್ಲ. ಆದ್ರೆ, ಮಹಾರಾಷ್ಟ್ರದಲ್ಲಿ ಮುಂದಿನ ವಾರದಿಂದ ಜಿಮ್​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಕಳೆದ ವಾರ ಎಲ್ಲಾ ಜಿಮ್ ಮಾಲೀಕರು ಹಾಗೂ ಟ್ರೈನರ್ಸ್​ ಭಾರಿ ಪ್ರತಿಭಟನೆ ನಡೆಸಿದ್ದರು. ಉಳಿದೆಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿರುವಾಗ ನಮಗೆ ಯಾಕೆ ನೀಡಿಲ್ಲ ಎಂದು ಆಕ್ರೋಶ ಭರಿತರಾಗಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು.

ಕೊರೊನಾ ಸಂಕಷ್ಟ ಕಾಲದಲ್ಲಿ ಜಿಮ್ ಕೇಂದ್ರಗಳ ಆರ್ಥಿಕ ಆರೋಗ್ಯ ಮತ್ತು ಜನರ ದೈಹಿಕ ಆರೋಗ್ಯ ಕಾಪಾಡುವುದು ಅತ್ಯವಶವಾಗಿದೆ. ಈ ಹಿನ್ನೆಲೆಯಲ್ಲಿ ಜಿಮ್ ಕೇಂದ್ರಗಳ ಪುನಾರಂಭಕ್ಕೆ ಒತ್ತಾಯಿಸುತ್ತಾ ಬಂದಿದ್ದಾರೆ.

ಆದ್ರೆ, ಇದೀಗ ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಅತ್ಯಧಿಕ ಮಟ್ಟದಲ್ಲಿ ಭಯಂಕರವಾಗಿದ್ದರೂ ಜಿಮ್​ಗಳನ್ನು ಮುಂದಿನ ವಾರದಿಂದ ತೆರೆಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಕಾದುನೋಡಬೇಕಿದೆ.