Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಆರ್ಥಿಕ ಬಿಕ್ಕಟ್ಟಿನಲ್ಲಿದೆ, ಹೈಕೋರ್ಟ್​ಗೆ ಸರ್ಕಾರದಿಂದ ಮಾಹಿತಿ

ಕೇರಳವು ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಕೇರಳ ಸರ್ಕಾರವು ಹೈಕೋರ್ಟ್​ಗೆ ತಿಳಿಸಿದೆ. ಕೇರಳ ಟ್ರಾನ್ಸ್‌ಪೋರ್ಟ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ (ಕೆಟಿಡಿಎಫ್‌ಸಿ) ಲಿಮಿಟೆಡ್‌ನ ಠೇವಣಿದಾರರಿಗೆ ಮರುಪಾವತಿ ಮಾಡುವ ವಿಷಯದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸರ್ಕಾರವು ಈ ಹೇಳಿಕೆ ನೀಡಿದೆ.

ಕೇರಳ ಆರ್ಥಿಕ ಬಿಕ್ಕಟ್ಟಿನಲ್ಲಿದೆ, ಹೈಕೋರ್ಟ್​ಗೆ ಸರ್ಕಾರದಿಂದ ಮಾಹಿತಿ
ಪಿಣರಾಯಿ ವಿಜಯನ್Image Credit source: Telegraph India
Follow us
ನಯನಾ ರಾಜೀವ್
|

Updated on: Nov 02, 2023 | 10:57 AM

ತಿರುವನಂತಪುರಂ, ನವೆಂಬರ್ 02:  ಕೇರಳವು ದೊಡ್ಡ ಆರ್ಥಿಕ ಬಿಕ್ಕಟ್ಟು(Financial Crisis) ಎದುರಿಸುತ್ತಿದೆ ಎಂದು ಕೇರಳ ಸರ್ಕಾರವು ಹೈಕೋರ್ಟ್​ಗೆ ತಿಳಿಸಿದೆ. ಕೇರಳ ಟ್ರಾನ್ಸ್‌ಪೋರ್ಟ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ (ಕೆಟಿಡಿಎಫ್‌ಸಿ) ಲಿಮಿಟೆಡ್‌ನ ಠೇವಣಿದಾರರಿಗೆ ಮರುಪಾವತಿ ಮಾಡುವ ವಿಷಯದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸರ್ಕಾರವು ಈ ಹೇಳಿಕೆ ನೀಡಿದೆ.

ನಮ್ಮ ರಾಜ್ಯವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ, KTDFC ಮತ್ತು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಆಸ್ತಿಯನ್ನು ಅಡಮಾನ ಇಡಬಹುದು,ಸರ್ಕಾರಿ ಸಂಸ್ಥೆಗಳಿಗೆ ತಮ್ಮ ಹಣಕಾಸಿನ ಸಮಸ್ಯೆಗಳನ್ನು ಪರಿಹರಿಸಲು ಮಾರಾಟ ಮಾಡಬಹುದು ಎಂದು ರಾಜ್ಯವು ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.

ದುರದೃಷ್ಟವಶಾತ್, ಕೆಟಿಡಿಎಫ್‌ಸಿ ಅಥವಾ ಕೆಎಸ್‌ಆರ್‌ಟಿಸಿ ಯಾವುದೇ ಸಕಾರಾತ್ಮಕ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅದು ನ್ಯಾಯಾಲಯಕ್ಕೆ ತಿಳಿಸಿತು. ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ 2018-19 ರಿಂದ 2023 ರ ಅಕ್ಟೋಬರ್ 15 ರವರೆಗಿನ ವಿವಿಧ ವೆಚ್ಚಗಳಿಗಾಗಿ ಕೆಎಸ್‌ಆರ್‌ಟಿಸಿಗೆ 8,440.02 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸರ್ಕಾರ ಹೇಳಿದೆ.

ಮತ್ತಷ್ಟು ಓದಿ: ಕೇರಳ: ಇಂದಿನಿಂದ ಭಾರಿ ವಾಹನಗಳಲ್ಲಿ ಸೀಟ್​ಬೆಲ್ಟ್​, ಕ್ಯಾಮೆರಾ ಕಡ್ಡಾಯ

ಸರ್ಕಾರವು ಕೆಎಸ್‌ಆರ್‌ಟಿಸಿ ಸೇರಿದಂತೆ ಸಾರ್ವಜನಿಕ ವಲಯದ ಉದ್ಯಮಗಳಿಗೆ ವಿವಿಧ ರೀತಿಯಲ್ಲಿ ಬೆಂಬಲ ನೀಡುತ್ತಿದ್ದರೂ, ಅದರ ದೈನಂದಿನ ವ್ಯವಹಾರಗಳನ್ನು ಪೂರೈಸಲು ಸರ್ಕಾರವು ಹಣಕಾಸಿನ ನೆರವು ನೀಡಲು ಕಾನೂನುಬದ್ಧವಾಗಿ ಬದ್ಧವಾಗಿಲ್ಲ ಎಂಬುದು ಸ್ಪಷ್ಟವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ