AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Statue of Equality: ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತ; ವಿವರ ಇಲ್ಲಿದೆ

ಶ್ರೀರಾಮಾನುಜಾಚಾರ್ಯರ ಸಮಾನತೆಯ ಮೂರ್ತಿ (The Statue of Equality) ಹಾಗೂ 108 ದೇಗುಲಗಳ ದಿವ್ಯ ದೇಶಂ (Divya Saketam) ಅಧಿಕೃತವಾಗಿ ಸಾರ್ವಜನಿಕರ ವೀಕ್ಷಣೆಗೆ ತೆರೆದುಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಲು ಇಚ್ಛಿಸುವವರು ಸಂಜೆ 3 ರಿಂದ 6.30 ಗಂಟೆಯ ಒಳಗಾಗಿ ಆಗಮಿಸಬಹುದು.

Statue of Equality: ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತ; ವಿವರ ಇಲ್ಲಿದೆ
ಸಮಾನತೆಯ ಮೂರ್ತಿ
TV9 Web
| Updated By: ganapathi bhat|

Updated on:Feb 15, 2022 | 9:11 PM

Share

ಹೈದರಾಬಾದ್: ಇಲ್ಲಿನ ರಂಗಾರೆಡ್ಡಿಯ ಜಿಲ್ಲೆಯ ಮುಚ್ಚಿಂತಲ್​ನಲ್ಲಿ ಶ್ರೀರಾಮಾನುಜಾಚಾರ್ಯರ ಸಹಸ್ರಾಬ್ದಿ ಸಮಾರಂಭ ಸೋಮವಾರ (ಫೆಬ್ರವರಿ 14) ಸಂಪನ್ನಗೊಂಡಿದೆ. ಇಲ್ಲಿ ಅನಾವರಣಗೊಂಡಿರುವ ಶ್ರೀರಾಮಾನುಜಾಚಾರ್ಯರ ಸಮಾನತೆಯ ಮೂರ್ತಿ (The Statue of Equality) ಹಾಗೂ 108 ದೇಗುಲಗಳ ದಿವ್ಯ ದೇಶಂ (Divya Saketam) ಅಧಿಕೃತವಾಗಿ ಸಾರ್ವಜನಿಕರ ವೀಕ್ಷಣೆಗೆ ತೆರೆದುಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಲು ಇಚ್ಛಿಸುವವರು ಸಂಜೆ 3 ರಿಂದ 6.30 ಗಂಟೆಯ ಒಳಗಾಗಿ ಆಗಮಿಸಬಹುದು ಎಂದು ತಿಳಿಸಲಾಗಿದೆ. ಪ್ರತಿಮೆ ವೀಕ್ಷಣೆಗೆ ಎಂಟ್ರಿ ಫೀಸ್ ಇರಲಿದೆ.

ಆದರೆ, ಪ್ರಸ್ತುತ ಶ್ರೀರಾಮಾನುಜಾಚಾರ್ಯರ ಚಿನ್ನದ ಪ್ರತಿಮೆ ಹಾಗೂ 3ಡಿ ಮ್ಯಾಪಿಂಗ್ ಶೋ (light and sound laser show) ತಾಂತ್ರಿಕ ಕಾರಣಗಳಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುವುದಿಲ್ಲ ಎಂದು ತಿಳಿಸಲಾಗಿದೆ. ಈ ವ್ಯವಸ್ಥೆಗಳು ಆರಂಭವಾದ ಬಳಿಕ ಮತ್ತೆ ಸಾರ್ವಜನಿಕ ಪ್ರಕಟಣೆಯ ಹೊರಡಿಸಲಾಗುವುದು ಎಂದು ಹೇಳಲಾಗಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕಾಗಿ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಯನ್ನು ಸಂಪರ್ಕಿಸಬಹುದು: +91 790 142 2022

ಸಮಾನತೆಗಾಗಿ ರಾಮಾನುಜರು ಶ್ರಮಿಸಿದ್ದರು: ರಾಮನಾಥ್ ಕೋವಿಂದ್

ಶ್ರೀರಾಮಾನುಜರ ಪ್ರತಿಮೆ ಸ್ಥಾಪನೆ ಐತಿಹಾಸಿಕ ನಿರ್ಧಾರವಾಗಿದೆ. ಪ್ರತಿಮೆ ಸ್ಥಾಪನೆಯಿಂದ ಹೊಸ ಆಧ್ಯಾಯ ಆರಂಭವಾಗಿದೆ. ಭಕ್ತಿ ಮಾರ್ಗ, ಸಮಾನತ್ವವನ್ನು ರಾಮಾನುಜರು ಬೋಧಿಸಿದ್ದರು. ಸಮಾನತೆಗಾಗಿ ಶ್ರೀರಾಮಾನುಜರು ಶ್ರಮಿಸಿದ್ದರು. ಭಕ್ತಿಯಿಂದ ಮುಕ್ತಿ ಸಿಗುತ್ತದೆ ಎಂದು ರಾಮಾನುಜರು ನಿರೂಪಿಸಿದ್ದರು. ದಕ್ಷಿಣ ಭಾರತಕ್ಕೆ ಭಕ್ತಿ ಮಾರ್ಗವನ್ನು ಪರಿಚಯಿಸಿದ ಕೀರ್ತಿ ರಾಮಾನುಜರಿಗೆ ಸಲ್ಲುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದರು. ಶ್ರೀರಾಮಾನುಜಾಚಾರ್ಯರ ಸಹಸ್ರಮಾನೋತ್ಸವ ಕಾರ್ಯಕ್ರಮದಲ್ಲಿ ಭಾನುವಾರ (ಫೆಬ್ರವರಿ 13) ಅವರು ಪಾಲ್ಗೊಂಡು ಮಾತನಾಡಿದ್ದರು.

ಜಾತಿ ವ್ಯವಸ್ಥೆ ತೊಡೆದುಹಾಕಿದ ಸಂತ ರಾಮಾನುಜಾಚಾರ್ಯ: ನರೇಂದ್ರ ಮೋದಿ

ಡಾ.ಬಿ.ಆರ್.ಅಂಬೇಡ್ಕರ್ ಕೂಡ ರಾಮಾನುಜರನ್ನು ಪ್ರಶಂಸಿಸುತ್ತಿದ್ದರು. ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಪ್ರತಿಪಾದಿಸಿದ್ದರು. ಕನಕದಾಸರು ಕನ್ನಡದಲ್ಲಿ ರಾಮಾನುಜರನ್ನು ಪ್ರಶಂಸಿಸಿದ್ದಾರೆ ಎಂದು ಮೋದಿ ನೆನಪಿಸಿಕೊಂಡಿದ್ದಾರೆ. ಭಾರತ ಸ್ವಾತಂತ್ರ್ಯ ಹೋರಾಟ ಅಧಿಕಾರಕ್ಕಾಗಿ ನಡೆದದ್ದಲ್ಲ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಾನವತೆ, ಆಧ್ಯಾತ್ಮಿಕತೆ ಇತ್ತು ಎಂದು ಮೋದಿ ಸ್ಮರಿಸಿಕೊಂಡಿದ್ದಾರೆ.

ಇದನ್ನೂ ಓದಿ: Statue of Equality: ರಾಮಾನುಜರ ಪ್ರತಿಮೆ ದೇಶದ ಮಹಾನ್ ಆಸ್ತಿ: ಅನುರಾಗ್ ಠಾಕೂರ್ ಹೇಳಿಕೆ

ಇದನ್ನೂ ಓದಿ: Ramanujacharya Sahasrabdi: ರಾಮಾನುಜಾಚಾರ್ಯರ ಬೋಧನೆಗಳು ಎಲ್ಲರಿಗೂ ಆದರ್ಶ: ಅಮಿತ್ ಶಾ

Published On - 9:06 pm, Tue, 15 February 22

‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್