AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಕಚೇರಿಯಿಂದ ಆಕ್ಷೇಪ: ಪುಣೆಯ ಮೋದಿ ದೇಗುಲದಲ್ಲಿರುವ ನರೇಂದ್ರ ಮೋದಿ ಪ್ರತಿಮೆ ತೆರವು

37 ವರ್ಷದ ಬಿಜೆಪಿ ಕಾರ್ಯಕರ್ತ ಮತ್ತು ಪ್ರಧಾನಿ ಮೋದಿ ಅವರ ಬೆಂಬಲಿಗ ಮಯೂರ್ ಮುಂಡೆ ಈ ದೇವಸ್ಥಾನವನ್ನು ಪುಣೆಯ ಔಂಧ್ ನಲ್ಲಿ 1,60,000 ರೂ ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಇಲ್ಲಿರುವ ವಿಗ್ರಹ ಮತ್ತು ದೇವಾಲಯದ ನಿರ್ಮಾಣಕ್ಕಾಗಿ ಜೈಪುರದ ಕೆಂಪು ಅಮೃತಶಿಲೆಯನ್ನು ಬಳಸಲಾಗಿದೆ

ಪ್ರಧಾನಿ ಕಚೇರಿಯಿಂದ ಆಕ್ಷೇಪ: ಪುಣೆಯ ಮೋದಿ ದೇಗುಲದಲ್ಲಿರುವ ನರೇಂದ್ರ ಮೋದಿ ಪ್ರತಿಮೆ ತೆರವು
ಮೋದಿ ಪ್ರತಿಮೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 19, 2021 | 5:11 PM

Share

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿ ಮೇಲಿನ ಅಭಿಮಾನದಿಂದ ನಿರ್ಮಿಸಿದ ದೇವಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಮೆಯನ್ನು  ರಾತ್ರೋರಾತ್ರಿ ತೆಗೆಯಲಾಗಿದೆ. ಪ್ರಧಾನಿ ಕಚೇರಿಯಿಂದ ತೀವ್ರ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಮೆಯನ್ನು ತೆರವು ಮಾಡಲಾಗಿದೆ. 37 ವರ್ಷದ ಬಿಜೆಪಿ ಕಾರ್ಯಕರ್ತ ಮತ್ತು ಪ್ರಧಾನಿ ಮೋದಿ ಅವರ ಬೆಂಬಲಿಗ ಮಯೂರ್ ಮುಂಡೆ ಈ ದೇವಸ್ಥಾನವನ್ನು ಪುಣೆಯ ಔಂಧ್ ನಲ್ಲಿ 1,60,000 ರೂ ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಇಲ್ಲಿರುವ ವಿಗ್ರಹ ಮತ್ತು ದೇವಾಲಯದ ನಿರ್ಮಾಣಕ್ಕಾಗಿ ಜೈಪುರದ ಕೆಂಪು ಅಮೃತಶಿಲೆಯನ್ನು ಬಳಸಲಾಗಿದೆ. ರಿಯಲ್ ಎಸ್ಟೇಟ್ ಜೊತೆ ಸಂಬಂಧ ಹೊಂದಿರುವ ಮುಂಡೆ “ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಿದ ವ್ಯಕ್ತಿಗೆ ಒಂದು ದೇವಸ್ಥಾನ ಇರಬೇಕು ಎಂದು ನನಗೆ ಅನಿಸಿತು. ಹಾಗಾಗಿ ನಾನು ಈ ದೇವಸ್ಥಾನವನ್ನು ನನ್ನ ನಿರ್ಮಿಸಲು ನಿರ್ಧರಿಸಿದೆ ಎಂದಿದ್ದಾರೆ.

ಸ್ಥಳೀಯ ಪತ್ರಕರ್ತರೊಂದಿಗೆ ಮಾತನಾಡಿದ ಮುಂಡೆ, ತ್ರಿವಳಿ ತಲಾಖ್, ಕಾಶ್ಮೀರದಲ್ಲಿ 370 ನೇ ವಿಧಿಯ ರದ್ಧತಿ ಮೊದಲಾದ  ನಿರ್ಧಾರಗಳಿಂದಾಗಿಯೇ ಮೋದಿಯವರಿಗಾಗಿ ದೇವಸ್ಥಾನವನ್ನು ನಿರ್ಮಿಸಿದೆ. ಈ ದೇವಾಲಯದಲ್ಲಿ ಪ್ರಧಾನಿ ಮೋದಿಯವರ ಬಗ್ಗೆ ಒಂದು ಕವಿತೆಯನ್ನು ಬರೆಯಲಾಗಿದೆ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರ ಪ್ರಧಾನಮಂತ್ರಿ ಕಾರ್ಯಾಲಯವು ದೇವಾಲಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಗುರುವಾರ ಬೆಳಿಗ್ಗೆ ಅಲ್ಲಿದ್ದ ಪ್ರಧಾನಿಯವರ ಪ್ರತಿಮೆ ಕಾಣೆಯಾಗಿದೆ. ಬುಧವಾರ ತಡರಾತ್ರಿ ಈ ವಿಗ್ರಹವನ್ನು ತೆರವು ಮಾಡಿದ್ದು ಅದೀಗ ಸಮೀಪದಲ್ಲಿ ವಾಸಿಸುತ್ತಿರುವ ಬಿಜೆಪಿ ಕೌನ್ಸಿಲರ್ ಮನೆಯಲ್ಲಿ ಇರಿಸಲಾಗಿದೆ ಎಂದು ನ್ಯೂಸ್ 18 ವರದಿ ಮಾಡಿದೆ.

ಪುಣೆಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಪುರಸಭೆಯ ಚುನಾವಣೆ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಎನ್‌ಸಿಪಿ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ದೇವಸ್ಥಾನವನ್ನು ತಲುಪುವುದಾಗಿ ಮತ್ತು ಅಲ್ಲಿ ‘ಭೋಗ್’ ನೀಡುವುದಾಗಿ ಘೋಷಿಸಿದ್ದರು. ಈ ವಿಚಾರದಲ್ಲಿ ರಾಜಕೀಯ ತಿಕ್ಕಾಟ  ತೀವ್ರಗೊಳ್ಳುವ ಮುನ್ನವೇ ಪ್ರತಿಮೆಯನ್ನು ತೆಗೆಯಲಾಯಿತು.

ಇದನ್ನೂ ಓದಿ:  ಪುಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನ ಕಟ್ಟಿಸಿದ ಬಿಜೆಪಿ ಕಾರ್ಯಕರ್ತ ಮಯೂರ್ ಮುಂಡೆ

ಇದನ್ನೂ ಓದಿ: Haiti Earthquake: ಹೈಟಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2189ಕ್ಕೆ ಏರಿಕೆ; 300ಕ್ಕೂ ಹೆಚ್ಚು ಮಂದಿ ನಾಪತ್ತೆ

(Statue of Prime Minister Narendra Modi in a temple removed overnight after strong objections raised by PMO )

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ