Viral News: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ!

ಕೇರಳದಲ್ಲಿ ಅತ್ಯಂತ ಅಮಾನವೀಯ ಘಟನೆಯೊಂದು ನಡೆದಿದೆ. ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಐದು ವರ್ಷದ ಬಾಲಕಿಯೊಬ್ಬಳು ಮಲತಾಯಿಯನ್ನು ಕ್ರೂರವಾಗಿ ಥಳಿಸಿದ್ದಾಳೆ. ಬಳಿಕ ಆ ಮಗುವಿನ ಖಾಸಗಿ ಭಾಗಗಳನ್ನು ಬಿಸಿ ಮಾಡಿದ ಸ್ಟೀಲ್ ಸೌಟಿನಿಂದ ಸುಟ್ಟಿದ್ದಾಳೆ. ಪಾಲಕ್ಕಾಡ್‌ ಬಳಿ ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಮಲತಾಯಿಯನ್ನು ಬಂಧಿಸಿದ್ದಾರೆ.

Viral News: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ!
Kerala Mother Burns Child Private Part

Updated on: Jan 09, 2026 | 10:10 PM

ಪಾಲಕ್ಕಾಡ್, ಜನವರಿ 9: 5 ವರ್ಷದ ಪುಟ್ಟ ಬಾಲಕಿ ಮಲಗಿದ್ದಾಗ ಹಾಸಿಗೆಯಲ್ಲಿ ಮೂತ್ರ ಮಾಡಿದ್ದಾಳೆಂಬ ಕಾರಣಕ್ಕೆ ಆಕೆಯ ಮಲತಾಯಿ ಆ ಮಗುವಿನ ಗುಪ್ತಾಂಗವನ್ನೇ (Private Part) ಸುಟ್ಟಿದ್ದಾಳೆ. ಕಳೆದ ವಾರ ಉತ್ತರ ಕೇರಳ ಜಿಲ್ಲೆಯ ಕಾಂಜಿಕೋಡ್ ಬಳಿ ಈ ಘಟನೆ ನಡೆದಿದೆ. ಆ ಮಗು ಅಂಗನವಾಡಿಯಲ್ಲಿ ಕುಳಿತುಕೊಳ್ಳಲು ಕಷ್ಟಪಡುತ್ತಿರುವುದನ್ನು ಗಮನಿಸಿ ಶಿಕ್ಷಕಿ ಏನಾಯಿತು ಎಂದು ವಿಚಾರಿಸಿದಾಗ ಆ ಮಗು ಈ ವಿಷಯವನ್ನು ಹೇಳಿದೆ.

ಬಳಿಕ ಆ ಮಗುವಿನ ಗುಪ್ತಾಂಗವನ್ನು ಪರೀಕ್ಷಿಸಿದ ಅಂಗನವಾಡಿ ಶಿಕ್ಷಕಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಿಹಾರ ಮೂಲದ ಮಲತಾಯಿಯನ್ನು ಬಂಧಿಸಲಾಗಿದೆ. ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆ ಮಹಿಳೆಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಬಾಲ ನ್ಯಾಯ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯಕ್ಕೆ ಆ ಮಗು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಆರೈಕೆಯಲ್ಲಿದೆ.

ಇದನ್ನೂ ಓದಿ: ಅಮ್ಮನ ಎದೆಹಾಲು ಕುಡಿಯುವಾಗ ಮಗು ಸಾವು!

ಆ ಮಹಿಳೆ ಇದಕ್ಕೂ ಮುಂಚೆ ಕೂಡ ಮಗುವಿನ ಮೇಲೆ ಇದೇ ರೀತಿ ಹಲ್ಲೆ ನಡೆಸಿದ್ದಾಳೆ ಎಂದು ಅಕ್ಕಪಕ್ಕದವರು ಹೇಳಿದ್ದಾರೆ. ಈ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸಿ, ಸಾಕ್ಷಿಗಳನ್ನು ಕಲೆಹಾಕುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Fri, 9 January 26