ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ
ಬುರ್ಖಾ ಧರಿಸದಿದ್ದಕ್ಕಾಗಿ ಉತ್ತರ ಪ್ರದೇಶದ ವ್ಯಕ್ತಿ ತನ್ನ ಪತ್ನಿ ಮತ್ತು ಹೆಣ್ಣುಮಕ್ಕಳನ್ನು ಕೊಂದಿದ್ದಾನೆ. ಅವರ ಕಣ್ಣುಗಳನ್ನು ಕಿತ್ತುಹಾಕಿದ್ದಾನೆ. ಮದುವೆ ಸಮಾರಂಭಗಳಲ್ಲಿ ಅಡುಗೆಯವನಾಗಿ ಕೆಲಸ ಮಾಡುತ್ತಿದ್ದ ಫಾರೂಕ್, ತನ್ನ ಹೆತ್ತವರಿಂದ ದೂರವಾಗಿ ಅದೇ ಗ್ರಾಮದಲ್ಲಿ ಬೇರೆ ಮನೆಯಲ್ಲಿ ತನ್ನ ಹೆಂಡತಿ ತಾಹಿರಾ ಮತ್ತು ಅವರ ಐದು ಮಕ್ಕಳೊಂದಿಗೆ ವಾಸಿಸುತ್ತಿದ್ದ. ಆದರೂ ತನ್ನ ಸೊಸೆ, ಮೊಮ್ಮಕ್ಕಳು 6 ದಿನಗಳಾದರೂ ಕಾಣದಿದ್ದಾಗ ಆತನ ತಂದೆಯೇ ಮೊದಲು ಅನುಮಾನ ವ್ಯಕ್ತಪಡಿಸಿದ್ದ ಎನ್ನಲಾಗಿದೆ.

ನವದೆಹಲಿ, ಡಿಸೆಂಬರ್ 18: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ಪತ್ನಿ ಮತ್ತು ಇಬ್ಬರು ಮಕ್ಕಳ ಕೊಲೆಗೆ (Murder) ಸಂಬಂಧಿಸಿದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರ, ಆ ಆರೋಪಿಯ ತಪ್ಪೊಪ್ಪಿಗೆಯ ವೇಳೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಡಿಸೆಂಬರ್ 10ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 33 ವರ್ಷದ ಫಾರೂಕ್ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೂಡ ಕೊಂದಿದ್ದ. ಬಳಿಕ ಆತ ತನ್ನ ಮನೆಯೊಳಗೆ 3 ಶವಗಳನ್ನು ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯ ಬಗ್ಗೆ ತಪ್ಪೊಪ್ಪಿಕೊಂಡಿರುವ ಫಾರೂಕ್ ತನ್ನ ಪತ್ನಿ ತಾಹಿರಾ (32) ಬುರ್ಖಾ ಹಾಕದೆ ಹೊರಗೆ ಹೋಗಬಾರದು ಎಂದು ಕಟ್ಟುನಿಟ್ಟಾಗಿ ಆದೇಶಿಸಿದ್ದ. ಬುರ್ಖಾ ಧರಿಸದೆ ಮನೆಯಿಂದ ಹೊರಗೆ ಹೋಗಲು ಬಿಡುತ್ತಿರಲಿಲ್ಲ. 1 ತಿಂಗಳ ಹಿಂದೆ ಮನೆಯ ಖರ್ಚಿನ ಬಗ್ಗೆ ತನ್ನ ಪತ್ನಿಯೊಂದಿಗೆ ತೀವ್ರ ಜಗಳವಾಡಿದ್ದಾಗಿ ಆತ ಬಹಿರಂಗಪಡಿಸಿದ್ದಾನೆ. ಫಾರೂಕ್ ಮನೆಯ ಖರ್ಚುಗಳಿಗೆ ಸಾಕಷ್ಟು ಹಣವನ್ನು ನೀಡಲಿಲ್ಲ ಎಂದು ತಾಹಿರಾ ಜಗಳವಾಡುತ್ತಿದ್ದಳು. ಈ ವಿವಾದದ ನಂತರ, ಬುರ್ಖಾ ಧರಿಸದೆ ಮುಜಫರ್ ನಗರದ ನಾರಾ ಗ್ರಾಮದಲ್ಲಿರುವ ತನ್ನ ಹೆತ್ತವರ ಮನೆಗೆ ಹೋಗಿದ್ದಳು.
ಇದನ್ನೂ ಓದಿ: ಇವ್ನೆಂಥಾ ಮಗ, ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು, ದೇಹಗಳನ್ನು ಕತ್ತರಿಸಿ ನದಿಗೆಸೆದ ಮಗ
ಆಕೆಯ ನಿರ್ಧಾರದಿಂದ ಕೋಪಗೊಂಡ ಫಾರೂಕ್ ಆಕೆ ಮನೆಗೆ ವಾಪಾಸ್ ಬಂದ ನಂತರ ಡಿಸೆಂಬರ್ 10ರ ರಾತ್ರಿ ಆಕೆಯನ್ನು ಗುಂಡಿಕ್ಕಿ ಕೊಂದಿದ್ದಾನೆ. ನಂತರ ಆ ಕೊಲೆಯನ್ನು ಕಂಡಿದ್ದ ಇಬ್ಬರು ಹೆಣ್ಣುಮಕ್ಕಳನ್ನು ಸಹ ಕೊಂದು, ನಂತರ ಮೂರು ಶವಗಳನ್ನು ಮನೆಯಲ್ಲಿಯೇ ಹೂತು ಹಾಕಿದ್ದಾನೆ. ಈ ಬಗ್ಗೆ ಆತನೇ ಒಪ್ಪಿಕೊಂಡಿದ್ದಾನೆ. ತನ್ನ ಹೆಣ್ಣುಮಕ್ಕಳಲ್ಲಿ ಒಬ್ಬಳ ಕಣ್ಣುಗಳನ್ನು ಕೂಡ ಕಿತ್ತುಹಾಕಿದ್ದಾಗಿ ಆತ ಹೇಳಿದ್ದಾನೆ.
ಇದನ್ನೂ ಓದಿ: 1 ಕೋಟಿ ರೂ. ಹಣಕ್ಕಾಗಿ ತನ್ನ ಕಾರಿನಲ್ಲಿ ಬೇರೆಯವನಿಗೆ ಬೆಂಕಿ ಹಚ್ಚಿ ಸಾವಿನ ಕತೆ ಕಟ್ಟಿದ ವ್ಯಕ್ತಿ!
ಶವವನ್ನು ಹೊರಗೆ ತೆಗೆದಾಗ ಅಪ್ರಾಪ್ತ ಹೆಣ್ಣುಮಕ್ಕಳ ದೇಹದಲ್ಲಿ ಒಬ್ಬರ ದೇಹದ ಒಂದು ಕಣ್ಣು ಕಿತ್ತು ಹೋಗಿದ್ದು, ಕೊಲೆ ನಡೆದ ಸ್ಥಳದಿಂದ ರಕ್ತಸಿಕ್ತವಾದ ಮರದ ಕೋಲನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮಕ್ಕಳನ್ನು ಹೊಡೆಯಲು ಅದನ್ನು ಬಳಸಿದ್ದಾನೆ ಎಂದು ಶಂಕಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




