ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ ಇಬ್ಬರನ್ನು ಬಂಧಿಸಿದ ಎಸ್‌ಟಿಎಫ್

uttar pradesh: ಇಬ್ಬರು ವ್ಯಕ್ತಿಗಳು ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು, ಅವರ ಸಂಚನ್ನು ಎಸ್‌ಟಿಎಫ್ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾವೇದ್​​​ ಶೇಖ್​​​ ಹಾಗೂ ಮಜೀದ್​​​​ನ್ನು ಬಂಧಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಎಸ್‌ಟಿಎಫ್ ಹಾಗೂ ಅಧಿಕಾರಿಗಳು ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ಹೇಳಲಾಗಿದೆ.

ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ ಇಬ್ಬರನ್ನು ಬಂಧಿಸಿದ ಎಸ್‌ಟಿಎಫ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Feb 17, 2024 | 12:19 PM

ಮುಜಾಫರ್‌ನಗರ, ಫೆ.17: ಉತ್ತರ ಪ್ರದೇಶದ (uttar pradesh) ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಒಂದು ಮಹತ್ವದ ಕಾರ್ಯಚರಣೆಯನ್ನು ನಡೆಸಿದೆ. ಮುಜಾಫರ್‌ನಗರದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಲು ಮುಂದಾಗಿದ್ದ ವ್ಯಕ್ತಿಯ ಸಂಚನ್ನು ಎಸ್‌ಟಿಎಫ್ ವಿಫಲಗೊಳಿಸಿದೆ. ಭಯೋತ್ಪಾದಕ ಜಾವೇದ್​​​ ಶೇಖ್​​​ ಹಾಗೂ ಆತನ ಸಹಚರ ಮಜೀದ್​​​​ನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಮುಜಾಫರ್‌ನಗರದಲ್ಲಿ ಭಯ ವಾತಾವರಣವನ್ನು ಮಜೀದ್​​​​ ಸೃಷ್ಟಿಸಿದ್ದ ಎಂದು ಹೇಳಲಾಗಿದೆ.

ಮಜೀದ್​​ನ್ನು ಮುಜಾಫರ್‌ನಗರ ಖಲಾಪರ್​​​​​ನಲ್ಲಿ ಬಂಧಿಸಲಾಗಿದೆ. ಜತೆಗೆ ಇತನಿಂದ 4 ಬಾಂಬ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂಲಗಳ ಪ್ರಕಾರ ಈ ಪ್ರಕರಣದಲ್ಲಿ ಫೆ.16ರಂದು ಇಬ್ಬರನ್ನು ಬಂಧಿಸಲಾಗಿತ್ತು ಎಂದು ಹೇಳಲಾಗಿದೆ. ಇನ್ನು ಪೊಲೀಸ್​​ ಅಧಿಕಾರಿಗಳು ನೀಡಿರುವ ವರದಿ ಪ್ರಕಾರ ಜಾವೇದ್​​​​​ ಮತ್ತು ಮಜೀದ್​​​ 2013ರಲ್ಲಿ ಮುಜಾಫರ್‌ನಗರದಲ್ಲಿ ಬಾಂಬ್​​​ ಸ್ಫೋಟ ಮಾಡಲು ಸಂಚು ರೂಪಿಸಿದರು. ಅದಕ್ಕಾಗಿ ಅಲ್ಲಿ ಬಾಂಬ್​​​ಗಳ ವಿತರಣೆಯನ್ನು ಕೂಡ ಮಾಡಿದರು. ಮುಜಾಫರ್‌ನಗರನ್ನು ಸ್ಫೋಟಿಸುವ ಬಗ್ಗೆ ಇಬ್ಬರು ಕೂಡ ಒಪ್ಪಿಕೊಂಡಿದ್ದಾರೆ.

ಇನ್ನು ಪೊಲೀಸರ ವಿಚಾರಣೆ ವೇಳೆ ಜಾವೇದ್​​​​​​​ ಒಬ್ಬ ಮಹಿಳೆಯ ಸೂಚನೆ ಮೇರೆಗೆ ಬಾಂಬ್​​​​​ ಉತ್ಪಾದನೆ ಮಾಡಲಾಗಿದೆ. ಇದೀಗ ಆಕೆಯನ್ನು ಪತ್ತೆ ಮಾಡಲು ಹಾಗೂ ಈ ಪ್ರಕರಣದಲ್ಲಿ ಆಕೆಯ ಪಾತ್ರವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಮಧ್ಯಪ್ರದೇಶದಲ್ಲಿಯು ಈ ಸ್ಫೋಟವನ್ನು ಮಾಡಲು ಸಂಚು ರೂಪಿಸಲಾಗಿತ್ತು. ಆದರೆ ಎಸ್‌ಟಿಎಫ್ ಮತ್ತು ಪೊಲೀಸ್​​​​ ಅಧಿಕಾರಿಗಳ ಜಂಟಿ ಕಾರ್ಯಚರಣೆಯಿಂದ ಈ ಸಂಚನ್ನು ವಿಫಲಗೊಳಿಸಲಾಗಿದೆ.

ಇನ್ನು ಸ್ಫೋಟಕ ತಯಾರಿಗೆ ಕಚ್ಚಾವಸ್ತುಗಳನ್ನು ಎಲ್ಲಿಂದ ಪಡೆಯಲಾಗಿದೆ ಎಂಬ ಮಾಹಿತಿಯನ್ನು ಕೂಡ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಗ್ಲೂಕೋಸ್ ಬಾಟಲಿಗಳು, ಕಬ್ಬಿಣದ ಮೊಳೆಗಳು ಮತ್ತು ವಾಚ್ ಯಂತ್ರಗಳಂತಹ ಸುಲಭವಾಗಿ ಲಭ್ಯವಿರುವ ವಸ್ತುಗಳನ್ನು ಬಳಸಿದ್ದಾಗಿ ಜಾವೇದ್ ತನಿಖೆಯಲ್ಲಿ ತಿಳಿಸಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಉತ್ತರಪ್ರದೇಶ ಮಹಾನಿರ್ದೇಶಕ ಅಮಿತಾಬ್ ಯಶ್​​​ ಅವರು ಈ ಸ್ಫೋಟದ ಸಂಚಿನ ಗಂಭೀರತೆಯನ್ನು ವಿವರಿಸಿದ್ದಾರೆ. ನಾನು ಈಗಾಗಲೇ ಇಬ್ಬರನ್ನು ಬಂಧಿಸಿದ್ದೇವೆ. ದೊಡ್ಡ ಅನಾಹುತವನ್ನು ನಮ್ಮ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಇನ್ನು ಆರೋಪಿಗಳನ್ನು ಭಯೋತ್ಪಾದನಾ ನಿಗ್ರಹ ದಳ ಮತ್ತು ಗುಪ್ತಚರ ಬ್ಯೂರೋ ಸೇರಿದಂತೆ ಕಾನೂನು ಜಾರಿ ಸಂಸ್ಥೆಗಳಿಂದ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ 6 ತಿಂಗಳ ಕಾಲ ಮುಷ್ಕರ, ಪ್ರತಿಭಟನೆ ನಿಷೇಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ

ಜಾವೇದ್, ರಾಮಲೀಲಾ ತಿಲ್ಲಾದ ಮಿಮ್ಲಾನ್ ಪ್ರದೇಶದ ನಿವಾಸಿ, ಆತ ರೇಡಿಯೋ ರಿಪೇರಿ ಅಂಗಡಿಯನ್ನು ಹೊಂದಿದ್ದ ಎಂದು ಹೇಳಲಾಗಿದೆ. ಮತ್ತು ಇತನ ಕುಟುಂಬಸ್ಥರು ಪಟಾಕಿ ತಯಾರಕರು ಎಂದು ಹೇಳಲಾಗಿದೆ. ಈ ಬಾಂಬ್​​​ ತಯಾರಿಕೆ ಪರಿಣಿತಿ ಇದರಿಂದಲ್ಲೇ ಬಂದಿದೆ ಎಂದು ತನಿಖೆಯಲ್ಲಿ ಹೇಳಲಾಗಿದೆ. ಜತೆಗೆ ಭಯೋತ್ಪಾದಕರ ಜತೆಗೆ ಸಂಪರ್ಕವನ್ನು ಕೂಡ ಹೊಂದಿದರು ಎಂದು ಹೇಳಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ಈ ಅಧಿಕಾರಿಗಳು ಕಾರ್ಯಚರಣೆಗೆ ಉತ್ತರ ಪ್ರದೇಶದ ಸಿಎಂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ