ಟಿಪ್ಪು ಸುಲ್ತಾನ್ ಬಗ್ಗೆ ಪೋಸ್ಟ್ ವಿವಾದ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಂಘರ್ಷ, ಕಲ್ಲು ತೂರಾಟ
ಜನರು ಶಾಂತವಾಗಿರುವಂತೆ ಮನವಿ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಜನರು ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಒತ್ತಾಯಿಸಿದರು. ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಯಾರನ್ನೂ ಬಿಡಲಾಗುವುದಿಲ್ಲ. ನಾನು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದ ಶಿಂಧೆ
ಟಿಪ್ಪು ಸುಲ್ತಾನ್ (Tipu Sultan) ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ವಿಚಾರದಲ್ಲಿ ಮಹಾರಾಷ್ಟ್ರದ (Maharashtra) ಕೊಲ್ಹಾಪುರದಲ್ಲಿ (Kolhapur) ಉದ್ವಿಗ್ನತೆ ಉಂಟಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಟಿಪ್ಪು ಸುಲ್ತಾನ್ ಚಿತ್ರವನ್ನು ಆಕ್ಷೇಪಾರ್ಹ ‘ಆಡಿಯೋ’ ಸಂದೇಶದೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳಲ್ಲಿ ಬಳಸಿರುವ ಸ್ಥಳೀಯರ ವಿರುದ್ಧ ಪ್ರತಿಭಟಿಸಿ ಕೆಲವು ಸಂಘಟನೆಗಳು ‘ಕೊಲ್ಹಾಪುರ ಬಂದ್’ಗೆ ಕರೆ ನೀಡಿದ್ದವು. ಲೈವ್ ಹಿಂದೂಸ್ತಾನ್‌ನ ವರದಿಯ ಪ್ರಕಾರ ಸ್ಥಳೀಯರು ಮೊಘಲ್ ಚಕ್ರವರ್ತಿ ಔರಂಗಜೇಬ್ ಅನ್ನು ಬೆಂಬಲಿಸುವ ಪೋಸ್ಟ್‌ಗಳನ್ನು ಹಾಕಿದ್ದಾರೆ. ಈ ಬಗ್ಗೆ ಕೆಲವು ಬಲಪಂಥೀಯ ಕಾರ್ಯಕರ್ತರು ಈ ಬಗ್ಗೆ ಪ್ರತಿಭಟನೆ ನಡೆಸಲು ಶಿವಾಜಿ ಚೌಕ್‌ನಲ್ಲಿ ಜಮಾಯಿಸಿದ್ದರು. ಪೊಲೀಸರ ಪ್ರಕಾರ, ಪ್ರತಿಭಟನೆ ಮುಗಿದ ನಂತರ ಗುಂಪು ಚದುರಿತು. ಆದರೆ, ಅವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕೊಲ್ಹಾಪುರ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ್ ಪಿಟಿಐಗೆ ತಿಳಿಸಿದ್ದಾರೆ.
ಪಿಟಿಐ ಹಂಚಿಕೊಂಡ ವೀಡಿಯೊದಲ್ಲಿ, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಸುಲ್ತಾನ್ ಚಿತ್ರವನ್ನು ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಉಸ್ತುವಾರಿ ಸಚಿವ ದೀಪಕ್ ಕೇಸರ್ಕರ್ ತಿಳಿಸಿದ್ದಾರೆ.
ಹೆಚ್ಚುವರಿ ಪಡೆ ನಿಯೋಜನೆ ಮಾಡಲಾಗಿದೆ. ಈವರೆಗೆ 21 ಮಂದಿಯನ್ನು ಬಂಧಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಂಡಿತ್ ಎಎನ್‌ಐಗೆ ತಿಳಿಸಿದ್ದಾರೆ.
Clash breaks out between two groups in Maharashtra’s Kolhapur. More details are awaited. pic.twitter.com/JmZxHPOKpi
— Press Trust of India (@PTI_News) June 7, 2023
ಜನರು ಶಾಂತವಾಗಿರುವಂತೆ ಮನವಿ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಜನರು ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಒತ್ತಾಯಿಸಿದರು. ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಯಾರನ್ನೂ ಬಿಡಲಾಗುವುದಿಲ್ಲ. ನಾನು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಸಾಮಾನ್ಯ ಜನರ ಕಲ್ಯಾಣವು ನಮ್ಮ ಮೊದಲ ಆದ್ಯತೆಯಾಗಿದೆ. ಜನರು ಸಹಕರಿಸಬೇಕು ಎಂದು ಶಿಂಧೆ ಒತ್ತಾಯಿಸಿದ್ದಾರೆ.
ಹಿಂಸಾಚಾರದಲ್ಲಿಯೂ ರಾಜಕೀಯ
ಕೆಲವು ರಾಜಕಾರಣಿಗಳು ಗಲಭೆಯಂತಹ ಪರಿಸ್ಥಿತಿಗೆ ಹೆದರುತ್ತಾರೆ. ನಿರ್ದಿಷ್ಟ ಸಮುದಾಯದ ಒಂದು ವರ್ಗದ ಜನರು ಮೊಘಲ್ ಚಕ್ರವರ್ತಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅವರನ್ನು ವೈಭವೀಕರಿಸುವುದು ಕೇವಲ ಕಾಕತಾಳೀಯವಾಗಿರಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಈ ವಾರದ ಆರಂಭದಲ್ಲಿ ಅಹ್ಮದ್‌ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಔರಂಗಜೇಬ್‌ನ ಫೋಟೋಗಳನ್ನು ಪ್ರದರ್ಶಿಸಿದ ಕೆಲವು ಯುವಕರ ವಿರುದ್ಧ ಪೊಲೀಸ್ ಕ್ರಮವನ್ನು ಫಡ್ನವಿಸ್ ಉಲ್ಲೇಖಿಸಿದ್ದಾರೆ. ಈ ನಾಯಕರ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ನಿರ್ದಿಷ್ಟ ಸಮುದಾಯದ ಯುವಕರು ಔರಂಗಜೇಬನ ಚಿತ್ರಗಳನ್ನು ಪ್ರದರ್ಶಿಸಿದರು. ಅವರು ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸಿದರು. ಇದು ಕೇವಲ ಕಾಕತಾಳೀಯವಾಗಿರಲು ಸಾಧ್ಯವಿಲ್ಲ. ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಇದ್ದಕ್ಕಿದ್ದಂತೆ ಈ ಚಿತ್ರಗಳನ್ನು ಏಕೆ ಪ್ರದರ್ಶಿಸಲಾಗಿದೆ? ಅದು ಸಂಭವಿಸುವುದಿಲ್ಲ. ಇದು ಕೇವಲ ಕಾಕತಾಳೀಯವಾಗಿರಲು ಸಾಧ್ಯವಿಲ್ಲದ ಕಾರಣ, ನಾವು ಈ ಬಗ್ಗೆ ಗಂಭೀರ ರೀತಿಯಲ್ಲಿ ಚಿಂತಿಸಬೇಕು ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.
ಇದನ್ನೂ ಓದಿ: ಇದು ಅವರ ಕನಸಾಗಿತ್ತು; ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಸಿಸೋಡಿಯಾ ನೆನೆದು ಭಾವುಕರಾದ ಕೇಜ್ರಿವಾಲ್
ರಾಜ್ಯವನ್ನು ಆಳುವವರು ಕಾನೂನು ಮತ್ತು ಸುವ್ಯವಸ್ಥೆಯನ್ನು ಸ್ಥಾಪಿಸುವ ಜವಾಬ್ದಾರರು ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಫಡ್ನವೀಸ್ ಅವರ ಹೇಳಿಕೆ ಬಂದಿದೆ. ಆಡಳಿತ ಪಕ್ಷಗಳು ಮತ್ತು ಅವರ ಜನರು ರಸ್ತೆಗೆ ಬಂದು ಎರಡು ಧರ್ಮಗಳ ನಡುವೆ ಬಿರುಕು ಮೂಡಿಸಿದರೆ ಅದು ಒಳ್ಳೆಯ ಲಕ್ಷಣವಲ್ಲ. ಎಲ್ಲಾ ನಾಯಕರು ಒಂದೇ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಜನರು ಅವರಿಗೆ ಸಹಾಯ ಮಾಡುತ್ತಿದ್ದಾರೆ ಮತ್ತು ಔರಂಗಜೇಬನನ್ನು ವೈಭವೀಕರಿಸುತ್ತಿದ್ದಾರೆ. ಒಂದು ನಿರ್ದಿಷ್ಟ ಸಮುದಾಯದ ಜನರು ಔರಂಗಜೇಬನನ್ನು ವೈಭವೀಕರಿಸುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಗಲಭೆಯಂತಹ ಪರಿಸ್ಥಿತಿ ನಡೆಯುತ್ತಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:16 pm, Wed, 7 June 23