ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ; 12 ಮಂದಿ ಸಿಲುಕಿರುವ ಶಂಕೆ
ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿದಿದ್ದು 12 ಮಂದಿ ಸಿಲುಕಿರುವ ಶಂಕೆ ಇದೆ ಎಂದು ಮೂಲಗಳು ವರದಿ ಮಾಡಿವೆ
ಗುವಾಹಟಿ: ಮಿಜೋರಾಂನಲ್ಲಿ(Mizoram)ಸೋಮವಾರ ಕಲ್ಲು ಕ್ವಾರಿಯೊಂದು(stone quarry) ಕುಸಿದು ಬಿದ್ದಿದ್ದು ಬಿಹಾರದ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಮೂಲಗಳ ಪ್ರಕಾರ, ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್‌ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ತಮ್ಮ ಊಟದ ವಿರಾಮದಿಂದ ಮರಳಿದಾಗ ಕಲ್ಲು ಕ್ವಾರಿ ಕುಸಿದು ಬಿದ್ದಿದೆ.12 ಕಾರ್ಮಿಕರು, ಐದು ಹಿಟಾಚಿ ಅಗೆಯುವ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಕ್ವಾರಿಯ ಅಡಿಯಲ್ಲಿ ಹೂತುಹೋಗಿವೆ ಎಂದು ಮೂಲಗಳು ವರದಿ ಮಾಡಿವೆ. ಲೀಟ್ ಗ್ರಾಮ ಮತ್ತು ಹ್ನಾಹಿಯಾಲ್ ಪಟ್ಟಣದ ಸ್ವಯಂಸೇವಕರು ತಕ್ಷಣ ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿದರು. ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಕರೆ ನೀಡಲಾಗಿದೆ.
Published On - 6:57 pm, Mon, 14 November 22