Taj Mahal: ತಾಜ್ ಮಹಲ್​ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ನಿಷೇಧ; ಸುಪ್ರೀಂ ಕೋರ್ಟ್​ ಆದೇಶ

17ನೇ ಶತಮಾನದಲ್ಲಿ ಬಿಳಿ ಅಮೃತಶಿಲೆಯಲ್ಲಿ ನಿರ್ಮಿಸಲಾದ ಈ ತಾಜ್​ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

Taj Mahal: ತಾಜ್ ಮಹಲ್​ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ನಿಷೇಧ; ಸುಪ್ರೀಂ ಕೋರ್ಟ್​ ಆದೇಶ
ತಾಜ್ ಮಹಲ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 27, 2022 | 1:21 PM

ನವದೆಹಲಿ: ವಿಶ್ವವಿಖ್ಯಾತ ತಾಜ್ ಮಹಲ್‌ನ (Taj Mahal) 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಆದೇಶ ನೀಡಿದೆ. ಈ ನಿರ್ದೇಶನವನ್ನು ಪಾಲಿಸುವಂತೆ ಆಗ್ರಾ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೋರ್ಟ್​ ಸೂಚಿಸಿದೆ. 17ನೇ ಶತಮಾನದಲ್ಲಿ ಬಿಳಿ ಅಮೃತಶಿಲೆಯಲ್ಲಿ ನಿರ್ಮಿಸಲಾದ ಈ ತಾಜ್​ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಲು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

ತಾಜ್ ಮಹಲ್ ಬಳಿ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ಮೂಲಕ ಈ ಸ್ಮಾರಕದ ಸಂರಕ್ಷಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್​ಗೆ ಹಿರಿಯ ವಕೀಲ ಎಡಿಎನ್ ರಾವ್ ಅವರ ಸಲ್ಲಿಕೆಗಳನ್ನು ನ್ಯಾಯಪೀಠವು ಪರಿಶೀಲಿಸಿತು. 2000ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್​ ಇದೇ ರೀತಿಯ ಆದೇಶವನ್ನು ನೀಡಿತ್ತು. ಆದರೆ, ಸಮಯದ ದೀರ್ಘಾವಧಿಯ ದೃಷ್ಟಿಯಿಂದ ಆ ನಿರ್ದೇಶನವನ್ನು ಪುನರುಚ್ಚರಿಸುವುದು ಸೂಕ್ತವಾಗಿದೆ ಎಂದು ವಕೀಲ ರಾವ್ ಹೇಳಿದರು.

ಇದನ್ನೂ ಓದಿ
Image
Viral News: ಕೆಟ್ಟ ಕನಸಿಗೆ ಹೆದರಿ ಕದ್ದ ದೇವರ ವಿಗ್ರಹಗಳನ್ನು ವಾಪಾಸ್ ತಂದಿಟ್ಟ ಕಳ್ಳರು; ಅಂಥದ್ದೇನಾಯ್ತು?
Image
Vivek Agnihotri: ‘ದಿ ಕಾಶ್ಮೀರ್ ಫೈಲ್ಸ್’ ಕಾಲ್ಪನಿಕ ಕತೆ ಎಂದ ವಿಕಿಪೀಡಿಯಾ ಬರಹ; ವಿವೇಕ್ ಅಗ್ನಿಹೋತ್ರಿ ತೀವ್ರ ಆಕ್ಷೇಪ
Image
ಹೊರಬಿತ್ತು ‘ದಿ ಕಾಶ್ಮೀರ್ ಫೈಲ್ಸ್’ ಒಟಿಟಿ ರಿಲೀಸ್ ದಿನಾಂಕ; ಇಲ್ಲಿದೆ ವಿವರ

ಇದನ್ನೂ ಓದಿ: Taj Mahal Rooms Pictures ತಾಜ್ ಮಹಲ್​​ನ ಮುಚ್ಚಿದ ಕೊಠಡಿಗಳ ಚಿತ್ರ ಬಿಡುಗಡೆ ಮಾಡಿದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ

ಹಿರಿಯ ವಕೀಲರ ಮಾತಿಗೆ ಸಮ್ಮತಿಸಿದ ನ್ಯಾಯಪೀಠವು ತಾಜ್‌ಮಹಲ್‌ನ 500 ಮೀಟರ್ ವ್ಯಾಪ್ತಿಯನ್ನು ತಕ್ಷಣವೇ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಂದ ತೆರವುಗೊಳಿಸುವಂತೆ ಆಗ್ರಾ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ. 500 ಮೀಟರ್ ವ್ಯಾಪ್ತಿಯ ಹೊರಗೆ ಜಾಗ ಮಂಜೂರು ಮಾಡಿರುವ ಅಂಗಡಿ ಮಾಲೀಕರ ಗುಂಪಿನ ಅರ್ಜಿಯ ಮೇರೆಗೆ ಈ ಆದೇಶ ಬಂದಿದೆ. ಅರ್ಜಿದಾರರನ್ನು ಪ್ರತಿನಿಧಿಸಿದ ವಕೀಲ ಎಂಸಿ ಧಿಂಗ್ರಾ ಅವರು ಸ್ಮಾರಕದ ಪಶ್ಚಿಮ ದ್ವಾರದ ಬಳಿ ಅಕ್ರಮ ವ್ಯಾಪಾರ ಚಟುವಟಿಕೆಗಳು ಬೆಳಕಿಗೆ ಬಂದಿದ್ದರಿಂದ ಹಿಂದಿನ ನ್ಯಾಯಾಲಯದ ಆದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು ದೂರಿದ್ದಾರೆ. ವಾಣಿಜ್ಯ ಚಟುವಟಿಕೆಗಳನ್ನು ನಿಲ್ಲಿಸಲು ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲು ಸೂಕ್ತ ಆದೇಶಗಳನ್ನು ನೀಡುವಂತೆ ವಕೀಲ ಧಿಂಗ್ರಾ ಪೀಠವನ್ನು ಒತ್ತಾಯಿಸಿದ್ದಾರೆ.

1631ರಲ್ಲಿ ಮೊಘಲ್ ಚಕ್ರವರ್ತಿ ಷಹಜಹಾನ್ ಅವರ ಪತ್ನಿ ಮುಮ್ತಾಜ್ ಮಹಲ್ ಅವರ ಸ್ಮರಣಾರ್ಥವಾಗಿ ತಾಜ್ ಮಹಲ್ ಅನ್ನು ನಿರ್ಮಿಸಲಾಗಿತ್ತು. ಈ ಸ್ಮಾರಕ ಯುನೆಸ್ಕೋ ವಿಶ್ವ ಪರಂಪರೆಯ ತಾಣ ಕೂಡ ಆಗಿದೆ. ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಉತ್ತರ ಪ್ರದೇಶದ ಆಗ್ರಾ, ಫಿರೋಜಾಬಾದ್, ಮಥುರಾ, ಹತ್ರಾಸ್ ಮತ್ತು ಇಟಾ ಮತ್ತು ರಾಜಸ್ಥಾನದ ಭರತ್‌ಪುರ ಜಿಲ್ಲೆಗಳಲ್ಲಿ ವ್ಯಾಪಿಸಿರುವ ಸುಮಾರು 10,400 ಚದರ ಕಿ.ಮೀ ವಿಸ್ತೀರ್ಣವಿರುವ ಪರಿಸರ ಮಾಲಿನ್ಯದಿಂದ ಸ್ಮಾರಕವನ್ನು ರಕ್ಷಿಸಲು ತಾಜ್ ಟ್ರೆಪೆಜಿಯಂ ವಲಯವನ್ನು (ಟಿಟಿಜೆಡ್) ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗ ಅಲ್ಲ,ಕಾರಂಜಿ; ತಾಜ್ ಮಹಲ್​​ನ ಕಾರಂಜಿಗಳನ್ನು ಮುಚ್ಚಿ: ಅಸಾದುದ್ದೀನ್ ಓವೈಸಿ

ತಾಜ್ ಮಹಲ್ ಸ್ಮಾರಕದ 500 ಮೀಟರ್ ಸುತ್ತಲೂ ವಾಹನ ಸಂಚಾರದ ಮೇಲೆ ಕಟ್ಟುನಿಟ್ಟಾದ ನಿಯಮಗಳ ಜೊತೆಗೆ, ಬೇರೆ ಯಾವುದೇ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡುವಂತಿಲ್ಲ. ಈ ಸ್ಮಾರಕದ ಬಳಿ ಮರವನ್ನು ಸುಡುವುದನ್ನು ಮತ್ತು ಇಡೀ ಪ್ರದೇಶದಲ್ಲಿ ಪುರಸಭೆಯ ಘನತ್ಯಾಜ್ಯ ಮತ್ತು ಕೃಷಿ ತ್ಯಾಜ್ಯವನ್ನು ಸುಡುವುದನ್ನು ನಿಷೇಧಿಸಲಾಗಿದೆ. ತಾಜ್ ಮಹಲ್ ಬಳಿ ಅಕ್ರಮ ವ್ಯವಹಾರ ನಡೆಸಲಾಗುತ್ತಿದ್ದು, ಇದು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿದೆ ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Tue, 27 September 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್