ಕೊವಿಡ್ ಉಲ್ಬಣದ ನಡುವೆ ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿನ ಪರಿಸ್ಥಿತಿಯ ಕುರಿತು ಚುನಾವಣಾ ಆಯೋಗಕ್ಕೆ ಕೇಂದ್ರ ವಿವರಣೆ

ಕೊವಿಡ್ ಉಲ್ಬಣದ ನಡುವೆ ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿನ ಪರಿಸ್ಥಿತಿಯ ಕುರಿತು ಚುನಾವಣಾ ಆಯೋಗಕ್ಕೆ ಕೇಂದ್ರ ವಿವರಣೆ
ವಿ.ಕೆ.ಪೌಲ್

ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದೆ. ಗೋವಾ, ಪಂಜಾಬ್, ಉತ್ತರಾಖಂಡ ಮತ್ತು ಮಣಿಪುರ ವಿಧಾನಸಭೆ ಚುನಾವಣೆ ಮಾರ್ಚ್ ತಿಂಗಳ ವಿವಿಧ ದಿನಾಂಕಗಳಲ್ಲಿ ನಡೆಯಲಿದ್ದು ಉತ್ತರ ಪ್ರದೇಶ ಮೇನಲ್ಲಿ ತಿಂಗಳಲ್ಲಿ ನಡೆಯುವ ನಿರೀಕ್ಷೆ ಇದೆ.

TV9kannada Web Team

| Edited By: Rashmi Kallakatta

Jan 06, 2022 | 2:12 PM

ದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ (Assembly Election) ಮುನ್ನ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ (Rajesh Bhushan) ಮತ್ತು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ ವಿಕೆ ಪೌಲ್ (Dr VK Paul) ಭಾರತೀಯ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಡಾ.ಪೌಲ್, ದೊಡ್ಡ ರ್ಯಾಲಿಗಳು ಮತ್ತು ರೋಡ್‌ಶೋಗಳನ್ನು ನಡೆಸಬಾರದು ಎಂದು ಹೇಳಿದರು. ಹೆಚ್ಚುತ್ತಿರುವ ಸೋಂಕುಗಳ ನಡುವೆ ದೊಡ್ಡ ಚುನಾವಣಾ ರ್ಯಾಲಿಗಳ ಬಗ್ಗೆ ಕಳವಳದ ಮಧ್ಯೆ, ಫೆಬ್ರವರಿ-ಮಾರ್ಚ್‌ನಲ್ಲಿ ಮತದಾನ ನಡೆಯಲಿರುವ ಐದು ರಾಜ್ಯಗಳಲ್ಲಿ ಕೊವಿಡ್ ಪರಿಸ್ಥಿತಿಯ ಕುರಿತು ಸರ್ಕಾರ ಇಂದು ಚುನಾವಣಾ ಆಯೋಗಕ್ಕೆ ವಿವರಿಸಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಒಮಿಕ್ರಾನ್ (Omicron) ರೂಪಾಂತರದಿಂದ ಉಂಟಾಗುವ ಅಪಾಯದ ಬಗ್ಗೆ ಚುನಾವಣಾ ಆಯೋಗಕ್ಕೆ ವಿವರಿಸಿದರು. ಭಾರತವು ಗುರುವಾರ ಹೊಸ ಪ್ರಕರಣಗಳಲ್ಲಿ ಶೇಕಡಾ 56 ರಷ್ಟು ಏರಿಕೆ ವರದಿ ಮಾಡಿದೆ. ಚುನಾವಣೆಗೆ ಒಳಪಟ್ಟ ರಾಜ್ಯಗಳಲ್ಲಿನ ರಾಜಕೀಯ ರ್ಯಾಲಿಗಳಲ್ಲಿ ಕೊವಿಡ್ ಪ್ರೋಟೋಕಾಲ್‌ಗಳ ಉಲ್ಲಂಘನೆಯು ಚುನಾವಣೆಗಳಲ್ಲಿ ವಿಳಂಬವನ್ನು ಕೋರಿ ಹೊಸ ಕರೆಗಳಿಗೆ ಕಾರಣವಾಗಿದೆ.

ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ಈ ಐದು ರಾಜ್ಯಗಳಲ್ಲಿ ಫೆಬ್ರವರಿ-ಮಾರ್ಚ್‌ನಲ್ಲಿ ಮತದಾನ ನಡೆಯಲಿದೆ. ವ್ಯಾಕ್ಸಿನೇಷನ್ ಡ್ರೈವ್ ಅನ್ನು ಹೆಚ್ಚಿಸಲು ಮತ್ತು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಕಾದ ಸಿಬ್ಬಂದಿಗೆ “ಡಬಲ್ ಲಸಿಕೆ” ನೀಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಚುನಾವಣೆಗೆ ಒಳಪಡುವ ರಾಜ್ಯಗಳನ್ನು ಕೇಳಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್‌ನ ಮುಖ್ಯ ಕಾರ್ಯದರ್ಶಿಗಳಿಗೆ ಇತ್ತೀಚೆಗೆ ಪತ್ರ ಬರೆದಿರುವ ಚುನಾವಣಾ ಆಯೋಗವು, ಚುನಾವಣಾ ಸಿಬ್ಬಂದಿ ಮುಂಚೂಣಿಯ ಕಾರ್ಯಕರ್ತರ ವರ್ಗಕ್ಕೆ ಬರುತ್ತಾರೆ. ಕೊವಿಡ್ ಲಸಿಕೆಗಳ “ಮುಂಜಾಗರೂಕತೆ ಡೋಸ್” ಗೆ ಅರ್ಹರು ಎಂದು ಹೇಳಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಡಿಸೆಂಬರ್ 27 ರ ಸಭೆಯ ನಂತರ ಕೇಂದ್ರ ಆರೋಗ್ಯ ಕಾರ್ಯದರ್ಶಿಯವರು ಒಮಿಕ್ರಾನ್ ಸಾಂಕ್ರಾಮಿಕ ಸಮಯದಲ್ಲಿ ಮತದಾನವನ್ನು ಸುರಕ್ಷಿತ ರೀತಿಯಲ್ಲಿ ನಡೆಸಲು ಬೇಕಾದ ಕ್ರಮಗಳ ಕುರಿತು ಚುನಾವಣಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಚುನಾವಣಾ ಪ್ರಚಾರ ಮತದಾನದ ದಿನಗಳು ಮತ್ತು ಎಣಿಕೆಯ ದಿನಾಂಕಗಳಿಗಾಗಿ ಅದರ ಕೊವಿಡ್-19 ಪ್ರೋಟೋಕಾಲ್ ಅನ್ನು ಸುಧಾರಿಸುವ ಕುರಿತು ಅಧಿಕಾರಿಗಳು ಸಲಹೆಗಳನ್ನು ಮತ್ತು ವಿವರವಾದ ವರದಿಯನ್ನು ಕೇಂದ್ರ ಆರೋಗ್ಯ ಕಾರ್ಯದರ್ಶಿ ಭೂಷಣ್ ಅವರಿಂದ ಕೇಳಿದರು.

ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದೆ. ಗೋವಾ, ಪಂಜಾಬ್, ಉತ್ತರಾಖಂಡ ಮತ್ತು ಮಣಿಪುರ ವಿಧಾನಸಭೆ ಚುನಾವಣೆ ಮಾರ್ಚ್ ತಿಂಗಳ ವಿವಿಧ ದಿನಾಂಕಗಳಲ್ಲಿ ನಡೆಯಲಿದ್ದು ಉತ್ತರ ಪ್ರದೇಶ ಮೇನಲ್ಲಿ ತಿಂಗಳಲ್ಲಿ ನಡೆಯುವ ನಿರೀಕ್ಷೆ ಇದೆ.

ತಾವು ಲಖನೌಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಎಲ್ಲಾ ಕೊವಿಡ್-19 ಪ್ರೋಟೋಕಾಲ್‌ಗಳನ್ನು ಅನುಸರಿಸಿ ಸಮಯಕ್ಕೆ ಸರಿಯಾಗಿ ಅಸೆಂಬ್ಲಿ ಚುನಾವಣೆಗಳನ್ನು ನಡೆಸಬೇಕು ಎಂದು ಸೂಚಿಸುವ ಮೂಲಕ ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಚುನಾವಣೆಗಳನ್ನು ಮುಂದೂಡಲಾಗುವುದಿಲ್ಲ ಎಂದು ಹೇಳಿರುವುದಾಗಿ ಡಿಸೆಂಬರ್ 30 ರಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುಶೀಲ್ ಚಂದ್ರ ಅವರು ಹೇಳಿದ್ದರು.

ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮತದಾನ ಕೇಂದ್ರಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುವುದು ಮತ್ತು ಅವರಿಗೆ ಅಂಚೆ ಮತಪತ್ರಗಳ ಆಯ್ಕೆಯನ್ನು ನೀಡಲಾಗುವುದು. ಅದರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಸಿಇಸಿ ಘೋಷಿಸಿತು.

ಇದನ್ನೂ ಓದಿ: ಕೊವಿಡ್-19 ರೋಗಿಗಳಿಗೆ ಇನ್ನೂ 14 ದಿನಗಳ ಕ್ವಾರಂಟೈನ್ ಅಗತ್ಯವಿದೆಯೇ?: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

Follow us on

Related Stories

Most Read Stories

Click on your DTH Provider to Add TV9 Kannada