ಕೊವಿಡ್​ 19 ಲಸಿಕೆ ವಿಚಾರದಲ್ಲಿ ರಾಜಕೀಯ, ವಿವಾದ ಮಾಡುವುದನ್ನು ನಿಲ್ಲಿಸಿ: ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಟ್ವೀಟ್​

ದೇಶದಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಈ ಮೂಲಕ ಕೊರೊನಾದಿಂದ ಪಾರಾಗುವ ಜತೆ ನಮ್ಮಲ್ಲಿನ ತಜ್ಞರು, ವಿಜ್ಞಾನಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಮಾಯಾವತಿ ಹೇಳಿದ್ದಾರೆ.

ಕೊವಿಡ್​ 19 ಲಸಿಕೆ ವಿಚಾರದಲ್ಲಿ ರಾಜಕೀಯ, ವಿವಾದ ಮಾಡುವುದನ್ನು ನಿಲ್ಲಿಸಿ: ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಟ್ವೀಟ್​
ಮಾಯಾವತಿ
Follow us
| Updated By: Lakshmi Hegde

Updated on: Jun 22, 2021 | 3:45 PM

ಲಖನೌ: ಕೊರೊನಾ ಸೋಂಕು ನಿಯಂತ್ರಣದ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸದ್ಯ ದೇಶದ ಎಲ್ಲ ಜನರೂ ಕೊವಿಡ್​ ವ್ಯಾಕ್ಸಿನ್ ಪಡೆಯುವುದು ತುಂಬ ಮುಖ್ಯ ಎಂದು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಕೊರೊನಾ ದೇಶಕ್ಕೆ ಕಾಲಿಟ್ಟಾಗಿನಿಂದಲೂ ಒಂದಲ್ಲ ಒಂದು ವಿಚಾರದಲ್ಲಿ ರಾಜಕೀಯದೊಂದಿಗೆ ತಳುಕು ಹಾಕಿಕೊಳ್ಳುತ್ತಲೇ ಬಂದಿದೆ. ಹಾಗೇ, ಲಸಿಕೆ ಅಭಿವೃದ್ಧಿಯಾದ ಮೇಲೆ ಕೂಡ ಪ್ರತಿಪಕ್ಷಗಳು ಅದರೊಂದಿಗೆ ರಾಜಕೀಯ ಬೆರೆಸಿದ್ದು ಗೊತ್ತೇ ಇದೆ. ಕೊರೊನಾ ಲಸಿಕೆ ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿವಿಧ ರೀತಿಯ ರಾಜಕೀಯ ಆರೋಪ-ಪ್ರತ್ಯಾರೋಪಗಳು, ವಿವಾದಗಳು ಎದ್ದಿದ್ದವು. ಈಗಲೂ ಸಹ ಮುಂದುವರಿಯುತ್ತಲೇ ಇದೆ.

ಹೀಗಿರುವಾಗ ಮಾಯಾವತಿ ಈ ರಾಜಕೀಯ ಕೊನೆಗೊಳಿಸುವಂತೆ ಟ್ವೀಟ್​ ಮೂಲಕ ಕರೆ ಕೊಟ್ಟಿದ್ದಾರೆ. ಕೊರೊನಾ ಲಸಿಕೆಗಳ ಸಂಬಂಧ ರಾಜಕೀಯ, ವಿವಾದಗಳನ್ನು ಅಂತ್ಯಗೊಳಿಸಬೇಕು. ಲಸಿಕೆಗಳು ದೇಶದ ಪ್ರತಿಯೊಬ್ಬನಿಗೂ ಸಿಗುವಂತಾಗಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಮಾಯಾವತಿ ಹೇಳಿದ್ದಾರೆ.

ದೇಶದಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಈ ಮೂಲಕ ಕೊರೊನಾದಿಂದ ಪಾರಾಗುವ ಜತೆ ನಮ್ಮಲ್ಲಿನ ತಜ್ಞರು, ವಿಜ್ಞಾನಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಇನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಲಸಿಕೆ ಪೂರೈಕೆ ಮಾಡುವ ಜತೆಗೆ, ಅಗತ್ಯವಿರುವ ವೈದ್ಯಕೀಯ ಸೌಕರ್ಯಗಳನ್ನೂ ಒದಗಿಸಬೇಕು. ಈ ಮೂಲಕ ದೇಶದ ವೈದ್ಯಕೀಯ ಕ್ಷೇತ್ರವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯ್ಯೋ ಪಾಪ ಎನ್ನುವ ಮುನ್ನ ಪೂರ್ತಿ ವಿಡಿಯೋ ನೋಡಿ; ವೈರಲ್​ ಸುದ್ದಿಯ ಅಸಲಿ ಕರಾಮತ್ತು ಇಲ್ಲಿದೆ

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ