ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ ಸುತ್ತ ಗಣಿಗಾರಿಕೆ ನಿಷೇಧ; ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Sariska Tiger Reserve: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಸಂದೀಪ್ ಮೆಹ್ತಾ ಮತ್ತು ಎಸ್‌ವಿಎನ್ ಭಟ್ಟಿ ಅವರ ನ್ಯಾಯಪೀಠವು ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ ಸುತ್ತ ಗಣಿಗಾರಿಕೆಯನ್ನು ನಿಷೇಧ ಮಾಡುವಂತೆ ಆದೇಶಿಸಿದೆ. ಇದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ ಸುತ್ತ ಗಣಿಗಾರಿಕೆ ನಿಷೇಧ; ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ
ಹುಲಿImage Credit source: istock
Follow us
ಸುಷ್ಮಾ ಚಕ್ರೆ
|

Updated on: May 15, 2024 | 6:30 PM

ನವದೆಹಲಿ: ರಾಜಸ್ಥಾನದ ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ (Sariska Tiger Reserve) ಕ್ರಿಟಿಕಲ್ ಟೈಗರ್ ಆವಾಸಸ್ಥಾನದ 1 ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಗಣಿಗಾರಿಕೆ ಚಟುವಟಿಕೆಗಳನ್ನು (Mining Activities) ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಇಂದು (ಬುಧವಾರ) ಮಹತ್ವದ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಸಂದೀಪ್ ಮೆಹ್ತಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಯೋಜನೆಯನ್ನು ರೂಪಿಸಲು ಅಥವಾ ಅದರ ಆದೇಶಗಳ ಅನುಸರಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.

ಈ ವಿಷಯದ ಕುರಿತು ಹೆಚ್ಚಿನ ವಿಚಾರಣೆ ನಡೆಸಲು ಜುಲೈನಲ್ಲಿ ದಿನಾಂಕ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆಯಿಲ್ಲದೆ ಸರಿಸ್ಕಾ ವನ್ಯಜೀವಿ ಅಭಯಾರಣ್ಯದ 10 ಕಿ.ಮೀ ಪ್ರದೇಶದಲ್ಲಿ ಮತ್ತು ಸಿಟಿಎಚ್‌ನ 1 ಕಿ.ಮೀ ಪ್ರದೇಶದೊಳಗೆ ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲು ರಾಜ್ಯಕ್ಕೆ ನಿರ್ದೇಶನದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶವಾಗಿದೆ.

ಇದನ್ನೂ ಓದಿ: ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ

ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ CTH ಪ್ರದೇಶಗಳನ್ನು ಒಳಗೊಂಡಿರುವ ಪರಿಸರ ಸೂಕ್ಷ್ಮ ವಲಯಗಳಲ್ಲಿ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಜಸ್ಥಾನದ ಬಹು ಗಣಿ ಕಂಪನಿಗಳು ಸುಪ್ರೀಂ ಕೋರ್ಟ್ ನೀಡಿದ ವಿವಿಧ ಆದೇಶಗಳು ಮತ್ತು ನಿರ್ದೇಶನಗಳನ್ನು ಉಲ್ಲಂಘಿಸುತ್ತಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪತಂಜಲಿ ಜಾಹೀರಾತು: ರಾಮದೇವ್ ವಿರುದ್ಧದ ಪ್ರಕರಣದ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ವಿವಿಧ ವ್ಯಕ್ತಿಗಳು ಮತ್ತು ಕಂಪನಿಗಳು ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯುಎಲ್) ಅನುಮೋದನೆಯನ್ನು ಪಡೆಯದೆ ಮತ್ತು ಪರಿಸರ ಸೂಕ್ಷ್ಮ ವಲಯದ ಒಳಗೆ ಅಥವಾ ಹೊರಗೆ ಕಾರ್ಯ ನಿರ್ವಹಿಸಲು ಪರಿಸರ ಇಲಾಖೆಯ ಅನುಮತಿ ತೆಗೆದುಕೊಳ್ಳದೆ ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ನಡೆಸುತ್ತಿವೆ, ಕಳೆದ ವರ್ಷಗಳಲ್ಲಿ ನ್ಯಾಯಾಲಯ ನೀಡಿದ ಸ್ಪಷ್ಟ ನಿರ್ದೇಶನದ ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ