AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದ ಸುಪ್ರೀಂ

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್​ಲೋಡ್  ಮಾಡುವುದು ಮತ್ತು ನೋಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್​ ಹೇಳಿದೆ.  ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸಂಗ್ರಹ ಮಾಡುವುದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್ ನ ಈ ಹಿಂದಿನ ತೀರ್ಪನ್ನು ಬದಿಗೊತ್ತಿ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ.

ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದ ಸುಪ್ರೀಂ
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on: Sep 23, 2024 | 12:38 PM

Share

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್​ಲೋಡ್  ಮಾಡುವುದು ಮತ್ತು ನೋಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್​ ಹೇಳಿದೆ.  ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸಂಗ್ರಹ ಮಾಡುವುದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್ ನ ಈ ಹಿಂದಿನ ತೀರ್ಪನ್ನು ಬದಿಗೊತ್ತಿ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇರುವ ತ್ರಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ. ಮದ್ರಾಸ್ ಹೈಕೋರ್ಟ್‌ನ ಆದೇಶವು ಆಘಾತಕಾರಿ ಎಂದು ಹೇಳಿದ್ದ ತ್ರಿಸದಸ್ಯ ಪೀಠವು, ಆ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಈ ಹಿಂದೆ ಒಪ್ಪಿತ್ತು.

ಮೊಬೈಲ್ ಫೋನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋಗಳನ್ನು ಡೌನ್‌ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಾಗ ಮದ್ರಾಸ್‌ ಹೈಕೋರ್ಟ್ ಈ ಆದೇಶವನ್ನು ನೀಡಿತ್ತು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಅಶ್ಲೀಲ ಚಿತ್ರಗಳನ್ನು ನೋಡುವ ಗಂಭೀರ ಮಾನಸಿಕ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದಾರೆ. ಅವರನ್ನು ಶಿಕ್ಷಿಸುವ ಬದಲು ಸಮಾಜವು ಅವರಲ್ಲಿ ಅರಿವು ಮೂಡಿಸುವ ಅಗತ್ಯತೆ ಬಹಳಷ್ಟಿದೆ ಎಂದು ಹೇಳಿತ್ತು.

ಮಕ್ಕಳ ಅಶ್ಲೀಲತೆಯ ಕಂಟೆಂಟ್ ನಿರ್ಮಿಸುವುದು ಮತ್ತು ಡೌನ್‌ಲೋಡ್ ಮಾಡುವುದು ಮಾತ್ರವಲ್ಲದೆ, ಅವುಗಳನ್ನು ಪ್ರಕಟಿಸುವುದು ಮತ್ತು ಹಂಚಿಕೊಳ್ಳುವುದು ಕೂಡಾ ಅಪರಾಧವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಮತ್ತಷ್ಟು ಓದಿ: ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ವೀಕ್ಷಣೆ; ದೂರು ದಾಖಲು

ಮಕ್ಕಳ ಅಶ್ಲೀಲತೆ ಪದವನ್ನು ಮಕ್ಕಳ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯ ವಸ್ತು ಎಂದು ಬದಲಿಸಲು ತಿದ್ದುಪಡಿ ತರುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರವನ್ನು ಕೇಳಿದೆ. ಇನ್ನು ಮುಂದೆ ಪ್ರಕರಣಗಳಲ್ಲಿ ಮಕ್ಕಳ ಅಶ್ಲೀಲತೆ ಎಂಬ ಪದವನ್ನು ಬಳಸದಂತೆ ಇತರ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ.

ಮದ್ರಾಸ್​ ಹೈಕೋರ್ಟ್‌ ನೀಡಿರುವ ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌, ಮೊಬೈಲ್​ ಸೇರಿದಂತೆ ಇತರೆ ಸಾಧನದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಸಂಗ್ರಹ ಮಾಡಿಟ್ಟುಕೊಳ್ಳುವುದೂ ಕೂಡಾ ಪೊಕ್ಸೋ ಕಾಯ್ದೆಯಡಿ ಅಪರಾಧ ಎಂದು ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ