AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗಾಗಲೇ ಇಡೀ ದೆಹಲಿಯ ಕತ್ತು ಹಿಸುಕಿದ್ದೀರಿ‘-ಪ್ರತಿಭಟನಾನಿರತ ರೈತರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್​

ಜಂತರ್​ ಮಂತರ್​​ನಲ್ಲಿ ಸತ್ಯಾಗ್ರಹ ನಡೆಸಲು ಅನುಮೋತಿ ಕೋರಿ ರೈತ ಸಂಘಟನೆ ಸಲ್ಲಿಸಿದ ಅರ್ಜಿ ಬಗ್ಗೆ ನ್ಯಾ.ಸಿ.ಟಿ.ರವಿ ಕುಮಾರ್​ ಮತ್ತು ಖಾನ್​ವಿಲ್ಕರ್​​ರನ್ನೊಳಗೊಂಡ ಪೀಠ ಅಚ್ಚರಿ ವ್ಯಕ್ತಪಡಿಸಿದೆ.

‘ಈಗಾಗಲೇ ಇಡೀ ದೆಹಲಿಯ ಕತ್ತು ಹಿಸುಕಿದ್ದೀರಿ‘-ಪ್ರತಿಭಟನಾನಿರತ ರೈತರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್​
ರೈತ ಪ್ರತಿಭಟನೆ ಚಿತ್ರ (ಪಿಟಿಐ)
TV9 Web
| Edited By: |

Updated on:Oct 02, 2021 | 9:56 AM

Share

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ (Farm Laws)ಗಳ ವಿರುದ್ಧ ಕಳೆದ 11 ತಿಂಗಳುಗಳಿಂದಲೂ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂಕೋರ್ಟ್​ (Supreme Court) ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಭಟನಾಕಾರ ರೈತರು ಇಡೀ ದೆಹಲಿಯ ಕತ್ತು ಹಿಸುಕುತ್ತಿದ್ದಾರೆ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.  ದೆಹಲಿಯ ಜಂತರ್​ ಮಂತರ್​​ನಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಲು ಅನುಮತಿ ನೀಡಬೇಕು ಎಂದು ರೈತ ಸಂಘಟನೆ ಕಿಸಾನ್ ಮಹಾಪಂಚಾಯತ್​ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿತ್ತು. ಅದನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಖಾನ್​ವಿಲ್ಕರ್​​ ನೇತೃತ್ವದ ಪೀಠ, ‘ಅತ್ತ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನೆಪದಲ್ಲಿ ಹೆದ್ದಾರಿಗಳನ್ನೆಲ್ಲ ಬಂದ್​ ಮಾಡುವ ಮೂಲಕ ಇಡೀ ನಗರದ ಕತ್ತು ಹಿಸುಕಿ, ಉಸಿರುಗಟ್ಟಿಸಿದ್ದೀರಿ..ಈಗ ನಗರದ ಒಳಗೂ ಬರಲು ಬಯಸುತ್ತಿದ್ದೀರಾ?’ ಎಂದು ಕಟುವಾಗಿ ಪ್ರಶ್ನಿಸಿದೆ. 

ಜಂತರ್​ ಮಂತರ್​​ನಲ್ಲಿ ಸತ್ಯಾಗ್ರಹ ನಡೆಸಲು ಅನುಮೋತಿ ಕೋರಿ ಸಲ್ಲಿಸಿದ ಅರ್ಜಿ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ನ್ಯಾ.ಸಿ.ಟಿ.ರವಿ ಕುಮಾರ್​ ಮತ್ತು ಖಾನ್​ವಿಲ್ಕರ್​​ರನ್ನೊಳಗೊಂಡ ಪೀಠ, ಒಂದು ಕಡೆ ಪ್ರತಿಭಟನೆ ನಡೆಸುತ್ತ, ಮತ್ತೆ ಅನುಮತಿ ಕೇಳಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದೇಕೆ ಎಂದೂ ಪ್ರಶ್ನಿಸಿದೆ. ಹಾಗೇ, ವ್ಯವಸ್ಥೆಯಲ್ಲಿ ನಂಬಿಕೆಯಿಡಿ ಎಂದೂ ಹೇಳಿದೆ. ‘ನೀವು ಪ್ರತಿಭಟನೆ ನಡೆಸುತ್ತಿರುವ ಜಾಗದ ಸುತ್ತಲಿನ ಜನರು ನಿಮ್ಮ ಪ್ರತಿಭಟನೆಯಿಂದಾಗಿ ಖುಷಿಯಾಗಿದ್ದಾರೆಯೇ?, ನೀವು ಹೆದ್ದಾರಿ, ಸ್ಥಳೀಯ ರಸ್ತೆಗಳನ್ನು ಬಂದ್​ ಮಾಡುವುದರಿಂದ ಜನರ ಓಡಾಟಕ್ಕೆ ಹಿಂಸೆಯಾಗುತ್ತಿದೆ. ನಿಮಗೆ ಹೇಗೆ ಪ್ರತಿಭಟನೆ ಮಾಡುವ ಹಕ್ಕಿದೆಯೋ, ಹಾಗೇ ಜನರಿಗೆ ಸಾರ್ವಜನಿಕರ ರಸ್ತೆಗಳಲ್ಲಿ ಸ್ವತಂತ್ರವಾಗಿ ಓಡಾಡುವ ಹಕ್ಕು ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ನ್ಯಾ.ಖಾನ್​ವಿಲ್ಕರ್​ ಹೇಳಿದ್ದಾರೆ.

ಪ್ರತಿಭಟನಾಕಾರರು ಭದ್ರತೆ ಮತ್ತು ರಕ್ಷಣಾ ಸಿಬ್ಬಂದಿ ಕೆಲಸಕ್ಕೂ ಅಡ್ಡಿ ಪಡಿಸುತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ ಎನ್ನುತ್ತೀರಿ, ನಂತರ ರೈಲುಹಳಿಗಳನ್ನೂ ಬ್ಲಾಕ್​ ಮಾಡಿ, ರೈಲು ಸಂಚಾರಕ್ಕೆ ಅಡ್ಡಿ ಮಾಡುತ್ತೀರಿ. ಇದೆಲ್ಲ ಕೊನೆಯಾಗಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಅದಕ್ಕೆ ಪ್ರತಿಕ್ರಿಯೆ ನೀಡಿದ ಕಿಸಾನ್​ ಮಹಾಪಂಚಾಯತ್​ ವಕೀಲ ಅಜಯ್​ ಚೌಧರಿ, ಕಿಸಾನ್​ ಮಹಾಪಂಚಾಯತ್​ ರೈತ ಸಂಘಟನೆ ಹೆದ್ದಾರಿ, ರಸ್ತೆಗಳನ್ನು ಬಂದ್​ ಮಾಡುವ ಪ್ರತಿಭಟನೆಯಲ್ಲಿ ತೊಡಗಿಕೊಂಡಿಲ್ಲ. ಆದರೆ ಬಂದ್​ ಮಾಡಿದ ರಸ್ತೆಗಳಲ್ಲಿ ಪೊಲೀಸರು ಈ ರೈತ ಸಂಘಟನೆಯ ರೈತರನ್ನು ಬಂಧಿಸಿದರು ಎಂದು ಹೇಳಿದ್ದಾರೆ. ಹಾಗೇ, ನಾವು ಶಾಂತಿಯುತವಾಗಿಯೇ ಸತ್ಯಾಗ್ರಹ ನಡೆಸುತ್ತೇವೆ, ಜಂತರ್​ ಮಂತರ್​​ನಲ್ಲಿ ಪ್ರತಿಭಟನೆ ನಡೆಸಬೇಕು ಎಂಬ ರೈತರ ಮನವಿಯನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸಿದರು.

ಅಷ್ಟಾದರೂ ಸುಪ್ರಿಂಕೋರ್ಟ್​ ಸದ್ಯದ ಮಟ್ಟಿಗೆ ಯಾವುದೇ ತೀರ್ಪು ನೀಡಲಿಲ್ಲ. ಕಿಸಾನ್​ ಮಹಾಪಂಚಾಯತ್​ ಹೆದ್ದಾರಿಗಳನ್ನು ಬಂದ್​ ಮಾಡುವ ಪ್ರತಿಭಟನೆಯಲ್ಲಿ ತೊಡಗಿಕೊಂಡಿಲ್ಲ ಎಂದರೆ, ಅದರ ಉಲ್ಲೇಖ ಮಾಡಿ, ಎಲ್ಲವನ್ನೂ ವಿವರಿಸಿದಂಥ ಅಫಿಡವಿಟ್​​ನ್ನು ಕೋರ್ಟ್​ಗೆ ಸಲ್ಲಿಸಬೇಕು. ಅದಾದ ಬಳಿಕವಷ್ಟೇ ಮತ್ತೆ ಅರ್ಜಿ ವಿಚಾಚರಣೆ ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: Death Note: ಯಾರಿಂದಲೂ ಸಹಾಯ ದೊರೆಯಲಿಲ್ಲ; ಇಂತ ಕೆಟ್ಟ ಪ್ರಪಂಚದಲ್ಲಿ ಬದುಕೋದು ಹೇಗೆ ಎಂಬ ಪ್ರಶ್ನೆಗೆ ನಮ್ಮ ಸಾವೇ ಉತ್ತರ!

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿಗೆ ಕಂಟಕ; ಕಾನೂನು ಹೋರಾಟಕ್ಕೆ ಟಿಎಪಿಸಿಎಂಎಸ್ ನಿರ್ಧಾರ

Published On - 9:46 am, Sat, 2 October 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ