ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ನಾಯಿಯೊಂದು ಸರ್ಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ನುಗ್ಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯ ಪಕ್ಕದಲ್ಲಿ ಇಟ್ಟಿದ್ದ ಆಹಾರ ತಿಂದು ಹಾಲನ್ನೂ ಕುಡಿದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
30 ಸೆಕೆಂಡುಗಳ ವೀಡಿಯೊದಲ್ಲಿ, ರೋಗಿಯು ಅದರ ಪಕ್ಕದ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವಾಗ, ಮೇಜಿನ ಮೇಲೆ ಇಟ್ಟಿದ್ದ ಆಹಾರ ಮತ್ತು ಹಾಲಿನ ಪ್ಯಾಕೆಟ್‌ನಿಂದ ಬೀದಿ ನಾಯಿ ತಿನ್ನುತ್ತಿರುವುದನ್ನು ನೋಡಬಹುದಾಗಿದೆ. ಈ ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.ಆಸ್ಪತ್ರೆಯ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ.
ಭದ್ರತಾ ಸಿಬ್ಬಂದಿಗಳಿದ್ದಾರೆ, ಸಿಸಿಟಿವಿ ಕ್ಯಾಮರಾಗಳಿವೆ, ತಂತ್ರಜ್ಞಾನಗಳಿದ್ದರೂ ನಾಯಿಯನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂಬುದನ್ನು ವಿಡಿಯೋ ತೋರಿಸುತ್ತದೆ. ಮೊರಾದಾಬಾದ್‌ನ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಕುಲದೀಪ್ ಸಿಂಗ್ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ.
ಮತ್ತಷ್ಟು ಓದಿ: Uttar Pradesh: ಆಸ್ಪತ್ರೆಯ ಲಿಫ್ಟ್ನಲ್ಲಿ ಸಿಲುಕಿಕೊಂಡ 12 ರೋಗಿಗಳು, 20 ನಿಮಿಷಗಳ ಬಳಿಕ ರಕ್ಷಣೆ
ತನಿಖೆ ನಡೆಸಲು ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕರಿಗೆ (CMS) ಆದೇಶಿಸಿದ್ದೇನೆ ಎಂದಿದ್ದಾರೆ. ಕಳೆದ ತಿಂಗಳು, ಕೋತಿಯೊಂದು ಆಪರೇಷನ್ ಥಿಯೇಟರ್‌ಗೆ ಪ್ರವೇಶಿಸಿ ದೆಹಲಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ (ಆರ್‌ಎಂಎಲ್) ಅವ್ಯವಸ್ಥೆ ಉಂಟಾಗಿತ್ತು.
ಆಪರೇಷನ್ ಥಿಯೇಟರ್‌ಗೆ ನುಗ್ಗಿದ ಕೋತಿಯನ್ನು ಓಡಿಸಲು ಆಸ್ಪತ್ರೆಯ ಸಿಬ್ಬಂದಿ ಪ್ರಯತ್ನಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಸ್ಪತ್ರೆ ಆವರಣಕ್ಕೆ ಕೋತಿ ನುಗ್ಗುವ ಸಮಸ್ಯೆ ಹೆಚ್ಚಿದೆ. ಆದಾಗ್ಯೂ, ಭವಿಷ್ಯದಲ್ಲಿ ಅಂತಹ ಯಾವುದೇ ಘಟನೆ ನಡೆಯದಂತೆ ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಅದು ಸೇರಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:56 pm, Wed, 11 October 23