Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಿತ್ ಶಾ

ಭಯೋತ್ಪಾದನೆಯ ಬೆದರಿಕೆಯನ್ನು ತೊಡೆದುಹಾಕಲು ಜಮ್ಮು ಮತ್ತು ಕಾಶ್ಮೀರ ಭದ್ರತಾ ಏಜೆನ್ಸಿಗಳ ಪ್ರದೇಶದ ಪ್ರಾಬಲ್ಯ ಯೋಜನೆಯನ್ನು ಅಮಿತ್ ಶಾ ಪರಿಶೀಲಿಸಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಲು ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಅಗತ್ಯವನ್ನು ಅಮಿತ್ ಶಾ ಒತ್ತಿ ಹೇಳಿದ್ದಾರೆ.

ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Jan 02, 2024 | 9:05 PM

ಶ್ರೀನಗರ ಜನವರಿ 02: ಡಿಸೆಂಬರ್ 21 ರಂದು ಪಾಕಿಸ್ತಾನ (Pakistan) ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮುಹಮ್ಮದ್‌ನ ಪ್ರಾಕ್ಸಿ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ (PAFF) ಭಯೋತ್ಪಾದಕರ ಹೊಂಚುದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ದಿನಗಳ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೇರಿದಂತೆ ಗುಪ್ತಚರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ  ಭಯೋತ್ಪಾದನೆಯ ಬೆದರಿಕೆಯನ್ನು ತೊಡೆದುಹಾಕಲು ಜಮ್ಮು ಮತ್ತು ಕಾಶ್ಮೀರ ಭದ್ರತಾ ಏಜೆನ್ಸಿಗಳ ಪ್ರದೇಶದ ಪ್ರಾಬಲ್ಯ ಯೋಜನೆಯನ್ನು ಅಮಿತ್ ಶಾ ಪರಿಶೀಲಿಸಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಲು ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ದುರ್ಬಲ ಪ್ರದೇಶಗಳಲ್ಲಿ ಸೂಕ್ತ ನಿಯೋಜನೆಗಾಗಿ ಅವರು ಭದ್ರತಾ ಏಜೆನ್ಸಿಗಳಿಗೆ ಸಲಹೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರವು ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅನುಸರಿಸುವುದನ್ನು ಮುಂದುವರಿಸುತ್ತದೆ ಎಂದು ಗೃಹ ಸಚಿವರು ಪುನರುಚ್ಚರಿಸಿದ್ದಾರೆ.

ಹೊಂಚುದಾಳಿ ನಡೆದ ಕೆಲವೇ ದಿನಗಳ ನಂತರ, ಪೂಂಚ್ ಹೊಂಚುದಾಳಿಗೆ ಸಂಬಂಧಿಸಿದಂತೆ ಭದ್ರತಾ ಪಡೆಗಳು ಮೂರು ನಾಗರಿಕರನ್ನು ವಿಚಾರಣೆಗೆ ಒಳಪಡಿಸಿದವು. ಬಂಧನದಲ್ಲಿ ಮೂವರು ಕೊಲ್ಲಲ್ಪಟ್ಟರು ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ, ಇದರ ಪರಿಣಾಮವಾಗಿ ಸೇನೆಯು ತನಿಖೆಯನ್ನು ಪ್ರಾರಂಭಿಸಿತು. ಈ ಘಟನೆಗಳ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪೂಂಚ್‌ಗೆ ಭೇಟಿ ನೀಡಿದ್ದರು. 2023 ರ ಆರಂಭದಿಂದಲೂ ಜಮ್ಮು ಮತ್ತು ಕಾಶ್ಮೀರದನಲ್ಲಿ ವಿರಳವಾದ ಹಿಂಸಾಚಾರದ ಘಟನೆಗಳು ಮುಂದುವರೆದವು. ಆರ್ಟಿಕಲ್ 370 ರ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು 2019 ರಲ್ಲಿ ಕೇಂದ್ರವು ರದ್ದುಗೊಳಿಸಿತು.

ಇದನ್ನೂ ಓದಿ: ತಮಿಳುನಾಡಿನಲ್ಲಿ ₹20,000 ಕೋಟಿಗೂ ಅಧಿಕ ಮೊತ್ತದ ಯೋಜನೆ ಉದ್ಘಾಟಿಸಿದ ಮೋದಿ

ಕಳೆದ ವರ್ಷ, ಕೇಂದ್ರಾಡಳಿತ ಪ್ರದೇಶದ ರಾಜೌರಿ, ಪೂಂಚ್ ಮತ್ತು ರಿಯಾಸಿ ಜಿಲ್ಲೆಗಳಲ್ಲಿ ನಡೆದ ಸರಣಿ ಎನ್‌ಕೌಂಟರ್‌ಗಳಲ್ಲಿ 28 ಭಯೋತ್ಪಾದಕರು ಮತ್ತು 19 ಭದ್ರತಾ ಸಿಬ್ಬಂದಿ ಸೇರಿದಂತೆ 54 ಜನರು ಸಾವಿಗೀಡಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ಗಡಿಯಾಚೆಗಿನ ಹತಾಶ ಪ್ರಯತ್ನಗಳಿಂದ ಹಿಂಸಾಚಾರದ ಹೆಚ್ಚಳವಾಗಿದೆ. ರಾಜೌರಿಯಲ್ಲಿ 10 ಭಯೋತ್ಪಾದಕರು ಮತ್ತು 14 ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ 31 ಜನರು ಸಾವನ್ನಪ್ಪಿದ್ದಾರೆ. ಪೂಂಚ್‌ನಲ್ಲಿ 15 ಭಯೋತ್ಪಾದಕರು ಮತ್ತು ಐವರು ಭದ್ರತಾ ಸಿಬ್ಬಂದಿ ಹತರಾಗಿದ್ದಾರೆ. ರಿಯಾಸಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಗಡಿಯ ಈ ಭಾಗಕ್ಕೆ ನುಸುಳಲು ಯತ್ನಿಸಿದಾಗ ಹೆಚ್ಚಿನ ಉಗ್ರರು ಕೊಲ್ಲಲ್ಪಟ್ಟರು. ಕಳೆದ ವರ್ಷ ಮೇ ತಿಂಗಳಲ್ಲಿ ಚಮ್ರೆರ್ ಅರಣ್ಯದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಸೇನಾ ಸಿಬ್ಬಂದಿಗಳು ಸಾವಿಗೀಡಾಗಿದ್ದು, ಪ್ರಮುಖ ಶ್ರೇಣಿಯ ಅಧಿಕಾರಿ ಗಾಯಗೊಂಡಿದ್ದರು. ಈ ಕಾರ್ಯಾಚರಣೆಯಲ್ಲಿ ವಿದೇಶಿ ಭಯೋತ್ಪಾದಕನೂ ಹತನಾಗಿದ್ದಾನೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ