ಒಡಿಶಾ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ಶಿಕ್ಷಕರು, ಬಾಲಕ ಸಾವು

ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಒಡಿಶಾದ ಬಾಲಸೋರ್​ನಲ್ಲಿ ನಡೆದಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ 15 ವರ್ಷದ ಬಾಲಕನೊಬ್ಬನನ್ನು ಶಾಲಾ ಶಿಕ್ಷಕರು ಥಳಿಸಿದ್ದರು. ಅಕ್ಟೋಬರ್ 7 ರಂದು ಬಾಲಸೋರ್‌ನ ಬನ್ಸಿಧರ್ ವಿದ್ಯಾಪೀಠದಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಸುಮಂತ ದಾಸ್​ನನ್ನು ಶಿಕ್ಷಕರು ಥಳಿಸಿದ್ದರು.

ಒಡಿಶಾ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ಶಿಕ್ಷಕರು, ಬಾಲಕ ಸಾವು
ಸಾವು

Updated on: Oct 10, 2023 | 11:31 AM

ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಒಡಿಶಾದ ಬಾಲಸೋರ್​ನಲ್ಲಿ ನಡೆದಿದೆ.
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ 15 ವರ್ಷದ ಬಾಲಕನೊಬ್ಬನನ್ನು ಶಾಲಾ ಶಿಕ್ಷಕರು ಥಳಿಸಿದ್ದರು. ಅಕ್ಟೋಬರ್ 7 ರಂದು ಬಾಲಸೋರ್‌ನ ಬನ್ಸಿಧರ್ ವಿದ್ಯಾಪೀಠದಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಸುಮಂತ ದಾಸ್​ನನ್ನು ಶಿಕ್ಷಕರು ಥಳಿಸಿದ್ದರು.

ತನ್ನ ಅನುಮತಿಯಿಲ್ಲದೆ ತನ್ನ ಬೈಸಿಕಲ್ ತೆಗೆದುಕೊಂಡು ಹೋಗಿದ್ದಾನೆ ಎಂದು ತನ್ನ ಸಹಪಾಠಿಯೊಬ್ಬರು ದೂರಿದ ನಂತರ ದಾಸ್​ನನ್ನು ಶಿಕ್ಷಕರು ಥಳಿಸಿದ್ದರು ಎಂದು ದಾಸ್ ಅವರ ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಮನೆಗೆ ಹಿಂದಿರುಗಿದ ನಂತರ, ದಾಸ್ ತೀವ್ರ ಎದೆನೋವು ಎಂದು ಅಳುತ್ತಿದ್ದ, ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಆರೋಪಿ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಾಸ್ ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿದರು. ಪ್ರಕರಣದ ಕುರಿತು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಪ್ರಕರಣದಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ತನ್ನ ಸಹಪಾಠಿಯೊಬ್ಬರಿಂದ ದೂರನ್ನು ಸ್ವೀಕರಿಸಿದ ನಂತರ ದಾಸ್​ನನ್ನು ಶಿಕ್ಷಕರು ಪ್ರಶ್ನಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನ: ಆಟವಾಡುವಾಗ ಜೋಕಾಲಿಯ ಹಗ್ಗ ಕೊರಳಿಗೆ ಸುತ್ತಿಕೊಂಡು ಬಾಲಕ ಸಾವು

ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us