ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಗಲಿಲ್ಲ ಅವಕಾಶ, ವಿದ್ಯಾರ್ಥಿ ಆತ್ಮಹತ್ಯೆ

|

Updated on: Mar 01, 2024 | 9:03 AM

ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ತೆಲಂಗಾಣದಲ್ಲಿ ನಡೆದಿದೆ. ಆದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದೆ.

ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಗಲಿಲ್ಲ ಅವಕಾಶ, ವಿದ್ಯಾರ್ಥಿ ಆತ್ಮಹತ್ಯೆ
ವಿದ್ಯಾರ್ಥಿ
Image Credit source: India Today
Follow us on

ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ವಿಚಾರಗಳನ್ನು ವಿದ್ಯಾರ್ಥಿಗಳು ಮನಸ್ಸಿಗೆ ತೆಗೆದುಕೊಂಡು ಬಿಡುತ್ತಿದ್ದಾರೆ. ಕೇವಲ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿ ಜೀವವನ್ನೇ ಕಳೆದುಕೊಂಡಿರುವ ಮನಕಲಕುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ವಿದ್ಯಾರ್ಥಿಯೊಬ್ಬ ಪರೀಕ್ಷಾ ಹಾಲ್​ಗೆ ತಡವಾಗಿ ಬಂದಿದ್ದ ಹೀಗಾಗಿ ಪರೀಕ್ಷೆ ಬರೆಯಲು ಅವಕಾಶವನ್ನು ನೀಡಿರಲಿಲ್ಲ. ಆದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಪತ್ರವನ್ನು ಬರೆದಿಟ್ಟು ವಿದ್ಯಾರ್ಥಿ ನೀರಾವರಿ ಕಾಲುವೆಗೆ ಹಾರಿದ್ದಾನೆ.

17 ವರ್ಷದ ವಿದ್ಯಾರ್ಥಿ ಬೆಳಗ್ಗೆ 9.15 ಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಿದ್ದಾನೆ ಎಂದು ವರದಿಯಾಗಿದೆ, ಆದರೆ ಪರೀಕ್ಷೆಯು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ನಡೆಯುತ್ತಿತ್ತು.

ವಿದ್ಯಾರ್ಥಿಯು ತನ್ನ ಆತ್ಮಹತ್ಯೆ ಪತ್ರದಲ್ಲಿ ಪರೀಕ್ಷೆ ಕೇಂದ್ರಕ್ಕೆ ತಡವಾಗಿ ತಲುಪಿದ್ದರಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಕ್ಕಾಗಿ ತನ್ನ ತಂದೆಗೆ ಕ್ಷಮೆಯಾಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ವಿದ್ಯಾಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು

ವಿದ್ಯಾರ್ಥಿಗಳು ಒಂದು ನಿಮಿಷ ತಡವಾದರೂ ಪರೀಕ್ಷೆಗೆ ಅವಕಾಶ ನೀಡಬಾರದು ಎಂಬ ನಿಯಮವನ್ನು ಇಂಟರ್ ಮೀಡಿಯೇಟ್ ಬೋರ್ಡ್ ಜಾರಿಗೊಳಿಸುತ್ತದೆ. ಬೆಳಗ್ಗೆ 9.30 ರ ಸುಮಾರಿಗೆ ವಿದ್ಯಾರ್ಥಿ ತನ್ನ ಗ್ರಾಮಕ್ಕೆ ಹೋಗಿದ್ದ ಆದರೆ ಮನೆಗೆ ಹಿಂದಿರುಗದೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಿಂದ ಅವರ ಕೈಗಡಿಯಾರ ಮತ್ತು ವಾಲೆಟ್ ವಶಪಡಿಸಿಕೊಳ್ಳಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ.

ಮತ್ತೊಂದು ಘಟನೆ
ಬೆಂಗಳೂರಿನ NTTF ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ, ಎಚ್ಒಡಿ ಕಿರುಕುಳ ಆರೋಪ
ನಗರದ ಬಾಗಲಗುಂಟೆ ಬಳಿಯ ಡಿಫೆನ್ಸ್ ಕಾಲೋನಿಯಲ್ಲಿ NTTF ಕಾಲೇಜಿನ ಎಚ್​​ಒಡಿ ಕಿರುಕುಳಕ್ಕೆ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿ ಋಷ್ಯಂತ್ (18) ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತ ಫೈನಲ್ ಇಯರ್ ಡಿಪ್ಲೋಮಾ ಇನ್ ಮ್ಯಾಕೇನಿಕ್ ಓದುತ್ತಿದ್ದ. ಈ

ವೇಳೆ ಇಂಡಸ್ಟ್ರಿಯಲ್ ಮ್ಯಾನೇಜ್ಮೆಂಟ್ ಎಚ್ಒಡಿ ಶಿಜು ಗಂಗಧರ್ ಎಂಬುವವರು ಪ್ರಾಜೆಕ್ಟ್ ವರ್ಕ್​ಗೆ ಸಂಬಂಧ ಪಟ್ಟಂತೆ ‘ನೀನು ನೋಡೊದಕ್ಕೆ ಶವದ ರೀತಿ ಇದೀಯಾ, ನಿನ್ನ ಪ್ರಾಜೆಕ್ಟ ವರ್ಕ್ ಕೂಡ ಹಾಗೆ ಇದೆ ಎಂದು ಬೈದಿದ್ದರಂತೆ.

ಈ ಹಿನ್ನಲೆ ಅವರ ಕಿರುಕುಳಕ್ಕೆ ಬೇಸತ್ತ ಮಗ, ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಇದೀಗ ಮಗನ ಶವ ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ರೀತಿಯ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತು ಬಾಗಲುಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ