ಕೋಟಾ ಆಗಸ್ಟ್ 3: ವೈದ್ಯಕೀಯ ಪ್ರವೇಶ ಪರೀಕ್ಷೆಗೆ (medical entrance exams) ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಇಂದು(ಗುರುವಾರ) ರಾಜಸ್ಥಾನದ (Rajasthan) ಕೋಟಾದಲ್ಲಿ (Kota)ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವರ್ಷ ಇದೇ ಶಿಕ್ಷಣ ಕೇಂದ್ರದಲ್ಲಿ ಇಲ್ಲಿವರೆಗೆ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಮಂಜೋತ್ ಛಾಬ್ರಾ ಉತ್ತರ ಪ್ರದೇಶದ ರಾಂಪುರದವನು. ಈ ವರ್ಷದ ಆರಂಭದಲ್ಲಿ ಕೋಟಾಕ್ಕೆ ಬಂದಿದ್ದು, ನೀಟ್ ಪರೀಕ್ಷೆಗೆ ತಯಾರಿ ನಡೆಸಲು ಕೋಚಿಂಗ್ ಸೆಂಟರ್‌ಗೆ ದಾಖಲಾಗಿದ್ದು, ಗುರುವಾರ ಬೆಳಗ್ಗೆ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ.
ಈ ಘಟನೆಯು ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರವೃತ್ತಿಯನ್ನು ಪರಿಶೀಲಿಸುವಂತೆ ಮಾಡಿದೆ. ಪ್ರತಿ ವರ್ಷ ದೇಶದ ಉನ್ನತ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ದೇಶದಾದ್ಯಂತದ ಲಕ್ಷಾಂತರ ವಿದ್ಯಾರ್ಥಿಗಳು ಪ್ರಮುಖ ಶಿಕ್ಷಣ ಕೇಂದ್ರಕ್ಕೆ ಸೇರುತ್ತಾರೆ.
ಇದನ್ನೂ ಓದಿ: ಇಂಗ್ಲಿಷ್ನಲ್ಲಿ ಮಾತನಾಡಲು ವಿಫಲವಾದ ವಿದ್ಯಾರ್ಥಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಶಿಕ್ಷಕ
ಕಳೆದ ಕೆಲವು ವರ್ಷಗಳಿಂದ, ಕೋಟಾದಲ್ಲಿ ವಿದ್ಯಾರ್ಥಿಗಳ ಒತ್ತಡ ಮತ್ತು ವೈಫಲ್ಯದ ನಿರಾಶೆಯಿಂದ ಆತ್ಮಹತ್ಯೆ ಮಾಡುತ್ತಿದ್ದಾರೆ. ಕಳೆದ ವರ್ಷ ಕೋಟಾದಲ್ಲಿ ಕನಿಷ್ಠ 15 ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದವು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ