ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಆತ್ಮಹತ್ಯೆ, ವರ್ಷದಲ್ಲಿ 8ನೇ ಘಟನೆ

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (NEET) ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಜಸ್ಥಾನದ ಕೋಟಾದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಾವುImage Credit source: Manorama
Follow us
ನಯನಾ ರಾಜೀವ್
|

Updated on: Mar 28, 2024 | 9:58 AM

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (NEET) ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಜಸ್ಥಾನದ ಕೋಟಾದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದು ಈ ವರ್ಷ ಎಂಟನೇ ಆತ್ಮಹತ್ಯೆಯಾಗಿದ್ದು, ಎರಡು ದಿನಗಳಲ್ಲಿ ದೇಶದ ಪ್ರಸಿದ್ಧ ಕೋಚಿಂಗ್ ಹಬ್​ನಲ್ಲಿ ನಡೆದ ಎರಡನೇ ಘಟನೆಯಾಗಿದೆ. ಮೃತ ಸೌಮ್ಯಾ ಲಕ್ನೋ ನಿವಾಸಿ. ನೀಟ್​ ಪರೀಕ್ಷೆಯ ತಯಾರಿಯ ಭಾಗವಾಗಿ ಆಕೆ ಖಾಸಗಿ ಕೋಚಿಂಗ್ ತರಗತಿಗಳಿಗೆ ಹಾಜರಾಗುತ್ತಿದ್ದಳು.

ಆಕೆಯ ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಆಕೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಸೌಮ್ಯಾಳ ಕುಟುಂಬದವರು ಕೋಟಾಕ್ಕೆ ಬಂದ ನಂತರ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಮಾರ್ಚ್ 25 ರಂದು, NEET ಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಉರುಜ್ ಖಾನ್ (20) ಕೋಟಾದಲ್ಲಿನ ತನ್ನ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ, ಆತ ಉತ್ತರ ಪ್ರದೇಶದ ಕನೌಜ್‌ ಮೂಲದವರಾಗಿದ್ದಾರೆ.

ಮತ್ತಷ್ಟು ಓದಿ: ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಸಾವಿಗೆ ಶರಣು, ವರ್ಷದಲ್ಲಿ 7ನೇ ಘಟನೆ

ಕಳೆದ ವರ್ಷ ಕೋಟಾದಲ್ಲಿ ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 29 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್‌ನಂತಹ ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ತಮ್ಮ ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುತ್ತಿರುವುದು ಪೋಷಕರೇ ಹೊರತು ಸಂಸ್ಥೆಗಳಲ್ಲ ಎಂದು ಸುಪ್ರೀಂ ಕೋರ್ಟ್​ ಹೇಳಿತ್ತು. ಖಾಸಗಿ ಕೋಚಿಂಗ್ ಸಂಸ್ಥೆಗಳ ನಿಯಂತ್ರಣಕ್ಕೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಆಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ