ಕಾಲೇಜು ವಿದ್ಯಾರ್ಥಿನಿಯ ಅಪಹರಿಸಿ ಕೂಡಿ ಹಾಕಿ 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ

ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಇಬ್ಬರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಹೋಟೆಲ್​ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯ ಅಪಹರಿಸಿ ಕೂಡಿ ಹಾಕಿ 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ
ಕ್ರೈಂImage Credit source: Hindustan Times
Follow us
ನಯನಾ ರಾಜೀವ್
|

Updated on: Jul 19, 2024 | 10:34 AM

ಗಾಜಿಯಾಬಾದ್​ನ ಕಾಲೇಜು ವಿದ್ಯಾರ್ಥಿನಿಯನ್ನು ಆರೋಪಿಗಳು ಅಪಹರಿಸಿ ಹೋಟೆಲ್​ನಲ್ಲಿ ಬಂಧಿಯಾಗಿರಿಸಿ 12 ದಿನಗಳ ಕಾಲ ಸಾಮೂಹಿತ ಅತ್ಯಾಚಾರವೆಸಗಿರುವ ಘಟನೆ ವರದಿಯಅಗಿದೆ. ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಹೋಟೆಲ್​ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ. ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ. ಜುಲೈ 6 ರಂದು ಗಾಜಿಯಾಬಾದ್​ನ ಭೋಜ್​ಪುರ್ ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ.

ಗಾಜಿಯಾಬಾದ್​ ಹಾಗೂ ಮೀರತ್​ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ ಕುಟುಂಬದವರು ಎಸ್​ಎಸ್​ಪಿಗೆ ದೂರು ನೀಡಿದ್ದು, ತನಿಖೆ ಆರಂಭಿಸಲಾಗಿದೆ.

ಮೋದಿನಗರ ಗ್ರಾಮದ ನಿವಾಸಿಯಾಗಿರುವ ಬಾಲಕಿ ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಳು. ಜೂನ್ 24ರಂದು ಕಾಲೇಜಿಗೆ ಹೋದವಳು ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಟ ನಡೆಸಿ, ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಇದೀಗ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ, ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನನ್ನು ಇಬ್ಬರು ಅಪಹರಿಸಿದ್ದರು ಎಂದು ಆಕೆ ತಿಳಿಸಿದ್ದಾಳೆ. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ವಿದ್ಯಾರ್ಥಿನಿಯನ್ನು ಇರಿಸಿದ್ದ ಹೋಟೆಲ್​ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ಇಬ್ಬರೂ ಆರೋಪಿಗಳು ವಿದ್ಯಾರ್ಥಿನಿಯನ್ನು ಜಮ್ಮುವಿಗೆ ಕರೆದೊಯ್ದು ಆರು ದಿನಗಳ ಕಾಲ ಅಲ್ಲಿನ ಹೋಟೆಲ್​ನಲ್ಲಿ ಒತ್ತೆಯಾಳಾಗಿ ಇರಿಸಿದ್ದರು. ಇಲ್ಲಿ ನಾಲ್ವರು ಯುವಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ