ಕಾಲೇಜು ವಿದ್ಯಾರ್ಥಿನಿಯ ಅಪಹರಿಸಿ ಕೂಡಿ ಹಾಕಿ 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ

ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಇಬ್ಬರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಹೋಟೆಲ್​ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯ ಅಪಹರಿಸಿ ಕೂಡಿ ಹಾಕಿ 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ
ಕ್ರೈಂ
Image Credit source: Hindustan Times

Updated on: Jul 19, 2024 | 10:34 AM

ಗಾಜಿಯಾಬಾದ್​ನ ಕಾಲೇಜು ವಿದ್ಯಾರ್ಥಿನಿಯನ್ನು ಆರೋಪಿಗಳು ಅಪಹರಿಸಿ ಹೋಟೆಲ್​ನಲ್ಲಿ ಬಂಧಿಯಾಗಿರಿಸಿ 12 ದಿನಗಳ ಕಾಲ ಸಾಮೂಹಿತ ಅತ್ಯಾಚಾರವೆಸಗಿರುವ ಘಟನೆ ವರದಿಯಅಗಿದೆ.
ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಹೋಟೆಲ್​ನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ. ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ. ಜುಲೈ 6 ರಂದು ಗಾಜಿಯಾಬಾದ್​ನ ಭೋಜ್​ಪುರ್ ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ.

ಗಾಜಿಯಾಬಾದ್​ ಹಾಗೂ ಮೀರತ್​ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ ಕುಟುಂಬದವರು ಎಸ್​ಎಸ್​ಪಿಗೆ ದೂರು ನೀಡಿದ್ದು, ತನಿಖೆ ಆರಂಭಿಸಲಾಗಿದೆ.

ಮೋದಿನಗರ ಗ್ರಾಮದ ನಿವಾಸಿಯಾಗಿರುವ ಬಾಲಕಿ ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಳು. ಜೂನ್ 24ರಂದು ಕಾಲೇಜಿಗೆ ಹೋದವಳು ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಟ ನಡೆಸಿ, ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಇದೀಗ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ, ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನನ್ನು ಇಬ್ಬರು ಅಪಹರಿಸಿದ್ದರು ಎಂದು ಆಕೆ ತಿಳಿಸಿದ್ದಾಳೆ. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ವಿದ್ಯಾರ್ಥಿನಿಯನ್ನು ಇರಿಸಿದ್ದ ಹೋಟೆಲ್​ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ಇಬ್ಬರೂ ಆರೋಪಿಗಳು ವಿದ್ಯಾರ್ಥಿನಿಯನ್ನು ಜಮ್ಮುವಿಗೆ ಕರೆದೊಯ್ದು ಆರು ದಿನಗಳ ಕಾಲ ಅಲ್ಲಿನ ಹೋಟೆಲ್​ನಲ್ಲಿ ಒತ್ತೆಯಾಳಾಗಿ ಇರಿಸಿದ್ದರು. ಇಲ್ಲಿ ನಾಲ್ವರು ಯುವಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us