ಗ್ವಾಲಿಯರ್: ಪೆಟ್ರೋಲ್ ಬಂಕ್ ಬಳಿ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಹೋಟೆಲ್​ನಲ್ಲಿ ಪತ್ತೆ

ಗ್ವಾಲಿಯರ್​ನ ಪೆಟ್ರೋಲ್​ ಬಂಕ್ ಬಳಿಯಿಂದ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಗುನಾದ ಹೋಟೆಲ್​ನಲ್ಲಿ ಪತ್ತೆಯಾಗಿದ್ದಾಳೆ. ಗ್ವಾಲಿಯರ್‌ನ ಹಿರಿಯ ಪೊಲೀಸ್ ಅಧೀಕ್ಷಕ ರಾಜೇಶ್ ಸಿಂಗ್ ಚಂದೇಲ್ ಮಾತನಾಡಿ, ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಲಹರ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಗ್ವಾಲಿಯರ್: ಪೆಟ್ರೋಲ್ ಬಂಕ್ ಬಳಿ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಹೋಟೆಲ್​ನಲ್ಲಿ ಪತ್ತೆ
ಅಪಹರಣ
Follow us
|

Updated on: Nov 21, 2023 | 10:27 AM

ಗ್ವಾಲಿಯರ್​ನ ಪೆಟ್ರೋಲ್​ ಬಂಕ್ ಬಳಿಯಿಂದ ಅಪಹರಣವಾಗಿದ್ದ ಕಾಲೇಜು ವಿದ್ಯಾರ್ಥಿನಿ ಗುನಾದ ಹೋಟೆಲ್​ನಲ್ಲಿ ಪತ್ತೆಯಾಗಿದ್ದಾಳೆ. ಗ್ವಾಲಿಯರ್‌ನ ಹಿರಿಯ ಪೊಲೀಸ್ ಅಧೀಕ್ಷಕ ರಾಜೇಶ್ ಸಿಂಗ್ ಚಂದೇಲ್ ಮಾತನಾಡಿ, ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಲಹರ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೋಮವಾರ ಗ್ವಾಲಿಯರ್‌ನ ನಾಕಾ ಚಂದ್ರವದ್​ನ ಪೆಟ್ರೋಲ್ ಬಂಕ್ ಬಳಿ ಅಪಹರಣಕ್ಕೊಳಗಾಗಿದ್ದ 19 ವರ್ಷದ ವಿದ್ಯಾರ್ಥಿನಿ ಗುನಾದಲ್ಲಿನ ಲಾಡ್ಜ್‌ನಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ಮೋಟರ್‌ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದರು. ಒಬ್ಬ ವ್ಯಕ್ತಿಯನ್ನು ಲಾಹರ್‌ನಲ್ಲಿ ಬಂಧಿಸಲಾಗಿದೆ, ಎಸ್‌ಎಸ್‌ಪಿ ಮಂಗಳವಾರ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಸೋಮವಾರ ಬೆಳಗ್ಗೆ ಗ್ವಾಲಿಯರ್‌ನ ಝಾನ್ಸಿ ರಸ್ತೆ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲಿ ಬಸ್‌ನಿಂದ ಇಳಿದಾಗ ಬೈಕ್‌ನಲ್ಲಿ ಬಂದ ಇಬ್ಬರು ಮಹಿಳೆಯನ್ನು ಅಪಹರಿಸಿದ್ದಾರೆ.

ಜಿಲ್ಲೆಯ ಝಾನ್ಸಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಪೆಟ್ರೋಲ್ ಪಂಪ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಸಂಪೂರ್ಣ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಯುವಕರು ಆಕೆಯನ್ನು ಬೈಕ್ ಮೇಲೆ ಕೂರಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಭಿಂಡ್ ಜಿಲ್ಲೆಯ ನಿವಾಸಿಯಾಗಿದ್ದು, ಆಕೆ ತನ್ನ ಕುಟುಂಬದೊಂದಿಗೆ ಬಸ್ ಮೂಲಕ ಅಲ್ಲಿಗೆ ಬಂದಿದ್ದಳು.

ಝಾನ್ಸಿ ರಸ್ತೆಯ ಬಸ್ ನಿಲ್ದಾಣದಲ್ಲಿ ಆಕೆ ಬಸ್‌ನಿಂದ ಕೆಳಗಿಳಿದಿದ್ದು, ಈ ವೇಳೆ ಮೋಟಾರ್‌ಸೈಕಲ್‌ನಲ್ಲಿ ಇಬ್ಬರು ಯುವಕರು ಅಲ್ಲಿಗೆ ಬಂದು ಆಕೆಯನ್ನು ಸ್ಥಳದಿಂದ ಕರೆದೊಯ್ದ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಅಪಹರಣಕ್ಕೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ