ಗುಜರಾತ್‌ನ ವಡೋದರಾದಲ್ಲಿ ದೋಣಿ ಮುಳುಗಿ ವಿದ್ಯಾರ್ಥಿಗಳು ಸಾವು; ಸಾವಿನ ಸಂಖ್ಯೆ16ಕ್ಕೆ ಏರಿಕೆ
ಗುರುವಾರ ಗುಜರಾತ್‌ನ ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ದುರಂತ ಸಂಭವಿಸಿದೆ. ಈ ದೋಣಿಯಲ್ಲಿ ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ
ವಡೋದರಾ ಜನವರಿ 18: ಗುಜರಾತ್‌ನ (Gujarat) ವಡೋದರಾದ (Vadodara) ಹರಣಿ ಸರೋವರದಲ್ಲಿ ದೋಣಿ ಮುಳುಗಿ (boat capsized)ಇಬ್ಬರು ಶಿಕ್ಷಕರು, 14 ವಿದ್ಯಾರ್ಥಿಗಳು ಸೇರಿದಂತೆ 16 ಮಂದಿ ಸಾವಿಗೀಡಾಗಿದ್ದಾರೆ. ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು, ಅವರಲ್ಲಿ ಯಾರೂ ಲೈಫ್ ಜಾಕೆಟ್ ಧರಿಸಿರಲಿಲ್ಲ. ಘಟನೆಯ ನಂತರ ಅಗ್ನಿಶಾಮಕ ದಳ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದೆ. ವಡೋದರಾದ ಹರಣಿ ಸರೋವರದಲ್ಲಿ ಮಕ್ಕಳನ್ನು ಸಾಗಿಸುತ್ತಿದ್ದ ದೋಣಿ ಮುಳುಗಿದ ದುರಂತ ಘಟನೆಯ ನಂತರ, ರಕ್ಷಿಸಲ್ಪಟ್ಟ ಮಕ್ಕಳನ್ನು ತಕ್ಷಣವೇ ಸಯಾಜಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ತಕ್ಷಣ ಚಿಕಿತ್ಸೆ ಆರಂಭಿಸಿದ್ದು, ಶಾಸಕರು ಸೇರಿದಂತೆ ಸ್ಥಳೀಯ ಮುಖಂಡರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ ಎಂದು ಸ್ಥಳೀಯ ಮೂಲಗಳು ಹೇಳಿವೆ.
ಈ ದುರಂತ ಘಟನೆಯ ನಂತರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ವಡೋದರಾದ ಹರಣಿ ಸರೋವರದಲ್ಲಿ ದೋಣಿ ಮುಳುಗಿ ಮಕ್ಕಳು ಮುಳುಗಿದ ಘಟನೆ ಅತ್ಯಂತ ಹೃದಯ ವಿದ್ರಾವಕವಾಗಿದೆ. ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಕರುಣಾಮಯಿ ಭಗವಂತ ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಬೋಟ್‌ನಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ರಕ್ಷಣಾ ಕಾರ್ಯಾಚರಣೆ ಪ್ರಸ್ತುತ ನಡೆಯುತ್ತಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಪರಿಹಾರ ಮತ್ತು ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
વડોદરાના હરણી તળાવમાં બોટ પલટી જતાં બાળકોના ડૂબવાની ઘટના અત્યંત હૃદયવિદારક છે. જાન ગુમાવનાર નિર્દોષ બાળકોના આત્માની શાંતિ માટે પ્રાર્થના કરું છું.
દુ:ખની આ ઘડીમાં તેમના પરિવારજનો પ્રત્યે આત્મીય સંવેદના વ્યક્ત કરું છું. પરમકૃપાળુ પરમાત્મા તેમને આ દુ:ખ સહન કરવાની શક્તિ આપે.…
— Bhupendra Patel (@Bhupendrapbjp) January 18, 2024
ಮಾಹಿತಿ ಪ್ರಕಾರ ಹರಣಿ ಕೆರೆಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬೋಟ್ ಪಲ್ಟಿಯಾಗಿದ್ದು, ಸ್ಥಳೀಯ ಈಜುಗಾರರು ಮತ್ತು ಅಗ್ನಿಶಾಮಕ ದಳದ ತಂಡ ಮಕ್ಕಳನ್ನು ರಕ್ಷಿಸಿದ್ದಾರೆ. ಕೆರೆಯಿಂದ ಹೊರತೆಗೆದ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಎಸ್‌ಎಸ್‌ಜಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಡಿಸಿಪಿ, ಎಸಿಪಿ ಸೇರಿದಂತೆ ಪೊಲೀಸ್ ಬೆಂಗಾವಲು ಪಡೆ ಸ್ಥಳಕ್ಕೆ ಆಗಮಿಸಿದೆ ಎಂದು ಟಿವಿ9 ಗುಜರಾತಿ ವರದಿ ಮಾಡಿದೆ.
ಗುಜರಾತ್ ಶಿಕ್ಷಣ ಸಚಿವ ಕುಬೇರ್ ದಿಂಡೋರ್, “ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಸರೋವರದಲ್ಲಿ ಮಗುಚಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ನನಗೆ ಈಗಷ್ಟೇ ತಿಳಿದು ಬಂದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.”ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇತರ ಏಜೆನ್ಸಿಗಳೊಂದಿಗೆ ರಕ್ಷಣಾ ಕಾರ್ಯದಲ್ಲಿದ್ದಾರೆಎಂದು ಅವರು ಹೇಳಿದರು.
#WATCH | Gujarat: A boat carrying children capsized in Vadodara’s Harni Motnath Lake. Rescue operations underway. pic.twitter.com/gC07EROBkh
— ANI (@ANI) January 18, 2024
ದೋಣಿಯಲ್ಲಿ 27 ಮಕ್ಕಳಿದ್ದರು ಎಂದು ವಡೋದರಾ ಜಿಲ್ಲಾಧಿಕಾರಿ ಎಬಿ ಗೋರ್ ತಿಳಿಸಿದ್ದಾರೆ. “ನಾವು ಇತರರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಅವರು ಹೇಳಿದರು.
“ವಿಹಾರಕ್ಕೆಂದು ಇಲ್ಲಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಹರಣಿ ಸರೋವರದಲ್ಲಿ ಪಲ್ಟಿಯಾಗಿದೆ. ಅಗ್ನಿಶಾಮಕ ದಳವು ಇದುವರೆಗೆ ಏಳು ವಿದ್ಯಾರ್ಥಿಗಳನ್ನು ರಕ್ಷಿಸಿದೆ, ನಾಪತ್ತೆಯಾದವರಿಗಾಗಿ ಶೋಧ ನಡೆಯುತ್ತಿದೆ” ಎಂದು ವಡೋದರದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಾರ್ಥ್ ಬ್ರಹ್ಮಭಟ್ ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮೊದಲು ಸ್ಥಳೀಯ ನಿವಾಸಿಗಳು ಕೆಲವು ಮಕ್ಕಳನ್ನು ರಕ್ಷಿಸಿದ್ದಾರೆ ಎಂದು ಅವರು ಹೇಳಿದರು.
ಸಾವಿಗೀಡಾದವರು ನ್ಯೂ ಸನ್‌ರೈಸ್ ಶಾಲೆಯ ವಿದ್ಯಾರ್ಥಿಗಳು. 16 ಮಂದಿ ಸಾಮರ್ಥ್ಯವಿರುವ ದೋಣಿಯಲ್ಲಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಈ ಘಟನೆಯಲ್ಲಿ ಛಾಯಾ ಸೂರ್ತಿ ಮತ್ತು ಫಲ್ಗುಣಿ ಪಟೇಲ್ ಎಂಬ ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, 3 ಮಕ್ಕಳು ಮತ್ತು 2 ಶಿಕ್ಷಕರು ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:23 pm, Thu, 18 January 24