Breaking News ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ವಿವಿಗಳಲ್ಲಿ ಕಲಿಕೆ ಮುಂದುವರಿಸುವ ಅವಕಾಶ ನೀಡಲು ಸಾಧ್ಯವಿಲ್ಲ: ಸುಪ್ರೀಂನಲ್ಲಿ ಕೇಂದ್ರ ಸರ್ಕಾರ

| Updated By: ರಶ್ಮಿ ಕಲ್ಲಕಟ್ಟ

Updated on: Sep 15, 2022 | 6:47 PM

ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಕಲಿಕೆ ಮುಂದುವರಿಸುವ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

Breaking News ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ವಿವಿಗಳಲ್ಲಿ ಕಲಿಕೆ ಮುಂದುವರಿಸುವ ಅವಕಾಶ ನೀಡಲು ಸಾಧ್ಯವಿಲ್ಲ: ಸುಪ್ರೀಂನಲ್ಲಿ ಕೇಂದ್ರ ಸರ್ಕಾರ
ಸುಪ್ರೀಂಕೋರ್ಟ್
Follow us on

ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆಯಲ್ಲಿ (National Medical Commission Act) ಯಾವುದೇ ಅವಕಾಶವಿಲ್ಲದ ಕಾರಣ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಕಲಿಕೆ ಮುಂದುವರಿಸುವ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ (Supreme Court) ತಿಳಿಸಿದೆ. ಅಲ್ಲದೆ, ಇಂತಹ ಸಡಿಲಿಕೆಯು ಭಾರತದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟಕ್ಕೆ ಅಡ್ಡಿಯಾಗುತ್ತದೆ. ಇಂತಹ ಸಡಿಲಿಕೆಯನ್ನು ಅನುಮತಿಸುವುದರಿಂದ ಭಾರತದ ವೈದ್ಯಕೀಯ ಶಿಕ್ಷಣದ ಗುಣಮಟ್ಟಕ್ಕೆ ಅಡ್ಡಿಯಾಗುತ್ತದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪ್ರತಿ ಅಫಿಡವಿಟ್‌ನಲ್ಲಿ ತಿಳಿಸಿದೆ. ಫೆಬ್ರವರಿ-ಮಾರ್ಚ್ 2022 ರಲ್ಲಿ ರಷ್ಯಾದ ದಾಳಿಯ ನಂತರ ಉಕ್ರೇನ್‌ನಲ್ಲಿ ತಮ್ಮ ವೈದ್ಯಕೀಯ ಕೋರ್ಸ್‌ಗಳನ್ನು ಮಧ್ಯದಲ್ಲಿ ತ್ಯಜಿಸಬೇಕಾದ ಭಾರತೀಯ ವಿದ್ಯಾರ್ಥಿಗಳಿಗೆ ಪರಿಹಾರ ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಪ್ರತಿಕ್ರಿಯಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ಈ ಅಫಿಡವಿಟ್ ಅನ್ನು ಸಲ್ಲಿಸಿದ್ದಾರೆ.

ನೀಟ್​ನಲ್ಲಿ ಕಳಪೆ ಅರ್ಹತೆ ಮತ್ತು ಅಲ್ಲಿ ಕಲಿಕೆಯ ವೆಚ್ಚ ಕಡಿಮೆ ಎರಡು ಕಾರಣಗಳಿಂದ ವಿದ್ಯಾರ್ಥಿಗಳು ವಿದೇಶಗಳಿಗೆ ಹೋಗಿದ್ದಾರೆ ಎಂದು ಕೇಂದ್ರ ಹೇಳಿದೆ. ಭಾರತದ ಪ್ರಧಾನ ವೈದ್ಯಕೀಯ ಕಾಲೇಜುಗಳಲ್ಲಿ ಕಳಪೆ ಮೆರಿಟ್ ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ಇತರ ದಾವೆಗಳಿಗೆ ಕಾರಣವಾಗಬಹುದು. ಅಲ್ಲದೆ, ಅವರು ಭಾರತೀಯ ಕಾಲೇಜುಗಳಲ್ಲಿನ ಶುಲ್ಕ ರಚನೆಯನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹೇಳಿದೆ
ಸೆಪ್ಟೆಂಬರ್ 6 ರಂದು ರಾಷ್ಟ್ರೀಯ ವೈದ್ಯಕೀಯ ಆಯೋಗವು ಹೊರಡಿಸಿದ ಸಾರ್ವಜನಿಕ ಸೂಚನೆಯು ಉಕ್ರೇನ್‌ನಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ತಮ್ಮ ಕೋರ್ಸ್ ಅನ್ನು ಪೂರ್ಣಗೊಳಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳ ನಡುವಿನ ಶೈಕ್ಷಣಿಕ ಬದಲಾವಣಗೆ ಯಾವುದೇ ಆಕ್ಷೇಪಣೆಯಿಲ್ಲ ಎಂದು ಕೇಂದ್ರವು ತಿಳಿಸಿದೆ.

ಆದಾಗ್ಯೂ, ಆ ಸಾರ್ವಜನಿಕ ಸೂಚನೆಯನ್ನು “ಯುಜಿ ಕೋರ್ಸ್‌ಗಳನ್ನು ನೀಡುವ ಭಾರತೀಯ ಕಾಲೇಜುಗಳಲ್ಲಿ ಹಿಂಬಾಗಿಲ ಪ್ರವೇಶ ಎಂದು ಬಳಸಲಾಗುವುದಿಲ್ಲ ಎಂದು ಕೇಂದ್ರ ಹೇಳಿದೆ. ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಅಗತ್ಯ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಸಮತೋಲನಗೊಳಿಸುವುದರ ಜತೆಗೆ ಕೇಂದ್ರವು ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸರ್ಕಾರ ಹೇಳಿದೆ.

ಆದಾಗ್ಯೂ, ಈ ರೀತಿ ಹಿಂತಿರುಗಿದ ವಿದ್ಯಾರ್ಥಿಗಳನ್ನು ಭಾರತದಲ್ಲಿನ ವೈದ್ಯಕೀಯ ಕಾಲೇಜುಗಳಿಗೆ ವರ್ಗಾಯಿಸಲು ಕೋರುವ ಮನವಿ ಸೇರಿದಂತೆ ಈ ನಿಟ್ಟಿನಲ್ಲಿ ಯಾವುದೇ ಹೆಚ್ಚಿನ ಸಡಿಲಿಕೆಯು ಭಾರತೀಯ ವೈದ್ಯಕೀಯ ಮಂಡಳಿಯ ಕಾಯಿದೆ 1956 ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019 ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಬಂಧನೆಗಳು ಅನುಮತಿಸುವುದಿಲ್ಲ ಎಂದು ಕೇಂದ್ರ ಹೇಳಿದೆ.

ನಾಳೆ ವಿಚಾರಣೆ

ಕೇಂದ್ರ ಸಚಿವಾಲಯವು ಅಫಿಡವಿಟ್ ಸಲ್ಲಿಸಿದೆ ಎಂದು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ತಿಳಿಸಿದ ನಂತರ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಗುರುವಾರ ವಿಚಾರಣೆಯನ್ನು ನಾಳೆಗೆ ಮುಂದೂಡಿತು.

Published On - 4:45 pm, Thu, 15 September 22