ಜಮ್ಮು-ಕಾಶ್ಮೀರ: ಇನ್‌ಸ್ಪೆಕ್ಟರ್ (SI) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಮ್ಮು, ಶ್ರೀನಗರ, ಕರ್ನಾಲ್, ಮಹೇಂದರ್‌ಗಢ, ಹರಿಯಾಣದ ರೇವಾರಿ, ಗುಜರಾತ್‌ನ ಗಾಂಧಿನಗರ, ಉತ್ತರ ಪ್ರದೇಶದ ಗಾಜಿಯಾಬಾದ್, ಕರ್ನಾಟಕದ ಬೆಂಗಳೂರು ಮತ್ತು ದೆಹಲಿ ಸೇರಿದಂತೆ ದೇಶದಾದ್ಯಂತ ಸುಮಾರು 33 ಸ್ಥಳಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ದಾಳಿ ನಡೆಸುತ್ತಿದೆ.
JKSSB ಮಾಜಿ ಅಧ್ಯಕ್ಷ ಖಾಲಿದ್ ಜಹಾಂಗೀರ್, JKSSB ನ ಪರೀಕ್ಷಾ ನಿಯಂತ್ರಕ ಅಶೋಕ್ ಕುಮಾರ್ ಮತ್ತು DSP ಮತ್ತು CRPF ಸೇರಿದಂತೆ J&K ಪೊಲೀಸ್‌ನ ಕೆಲವು ಅಧಿಕಾರಿಗಳ ಆವರಣದಲ್ಲಿ ದಾಳಿ ನಡೆಸಲಾಗುತ್ತಿದೆ. ಜಮ್ಮುವಿನ 14, ಶ್ರೀನಗರದ ಒಂದು, ಹರಿಯಾಣದ 13, ಗಾಂಧಿನಗರದ ಒಂದು ಮತ್ತು ಬೆಂಗಳೂರಿನಲ್ಲಿ ಒಂದು ಸೇರಿದಂತೆ 33 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸುತ್ತಿದೆ.
ಜಮ್ಮು – ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಯ್ಕೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆಗೆ ಆದೇಶಿಸಿದ್ದರು. ಬಳಿಕ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ. ಜಮ್ಮುವಿನ 28 ಸ್ಥಳಗಳು, ಶ್ರೀನಗರದ ಒಂದು ಮತ್ತು ಬೆಂಗಳೂರಿನ ಮನೆಯೊಂದರಲ್ಲಿ ದಾಳಿ ನಡೆಸಲಾಗಿದೆ ಎಂದು ಹಿರಿಯ ಸಿಬಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಎಫ್‌ಐಆರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಸೇವಾ ಆಯ್ಕೆ ಮಂಡಳಿಯ ಅಧಿಕಾರಿಗಳೊಂದಿಗೆ ಗಡಿ ಭದ್ರತಾ ಪಡೆಯ ವೈದ್ಯಕೀಯ ಅಧಿಕಾರಿ ಡಾ ಕರ್ನೈಲ್ ಸಿಂಗ್ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ ಹೇಳಿದರು. ಜಮ್ಮುವಿನ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಅಭ್ಯರ್ಥಿಗಳು ಮೆರಿಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ನಂತರ ಈ ಪ್ರಕರಣ ಹೊರಬಿದ್ದಿವೆ. ಆನ್‌ಲೈನ್ ಪರೀಕ್ಷೆಯನ್ನು ನಡೆಸಿದ ಏಜೆನ್ಸಿಯನ್ನು ಸಹ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಒಟ್ಟು 33 ಆರೋಪಿಗಳಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.
ಮನೋಜ್ ಸಿನ್ಹಾ ಅವರು ಕಳೆದ ತಿಂಗಳು ರಾಜ್ಯದಲ್ಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ್ದರು ಮತ್ತು ಆಯ್ಕೆ ಪ್ರಕ್ರಿಯೆಯ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ಜೆಕೆಪಿ ಸಬ್-ಇನ್‌ಸ್ಪೆಕ್ಟರ್ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ. ತಪ್ಪಿತಸ್ಥರನ್ನು ಶೀಘ್ರದಲ್ಲೇ ನ್ಯಾಯಾಂಗಕ್ಕೆ ತರಲಾಗುವುದು. ಇದು ನಮ್ಮ ಯುವಜನರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಮೊದಲ ದೊಡ್ಡ ಹೆಜ್ಜೆಯಾಗಿದೆ ಮತ್ತು ಸರ್ಕಾರವು ಈ ಹೊಸ ಕ್ರಮವನ್ನು ಶೀಘ್ರದಲ್ಲೇ ನಿರ್ಧರಿಸುತ್ತಾರೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. ಜೂನ್ 4 ರಂದು, ಜಮ್ಮು ಮತ್ತು ಕಾಶ್ಮೀರ ಆಯ್ಕೆ ಮಂಡಳಿಯು 1,200 ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತು. 97,000ಕ್ಕೂ ಹೆಚ್ಚು ಜನರು ಹುದ್ದೆಗಳಿಗೆ ಪರೀಕ್ಷೆಯನ್ನು ಬರೆದಿದ್ದಾರೆ. ಆನ್‌ಲೈನ್‌ನಲ್ಲಿ ಫಲಿತಾಂಶಗಳನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ, ಆಯ್ಕೆಯಾಗದಿರುವ ಅಭ್ಯರ್ಥಿಗಳು ಈ ಆಯ್ಕೆಯಲ್ಲಿ ಮೋಸ ನಡೆದಿದೆ ಎಂದು ಆರೋಪಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
Published On - 1:07 pm, Tue, 13 September 22