AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕ್ಷಿ ನೀಡಿ; ಕಳ್ಳಬೇಟೆ ಆರೋಪದ ಮೇಲೆ ಕೇಜ್ರಿವಾಲ್ ಅವರಿಗೆ ದೆಹಲಿಯ ಎಸಿಬಿ ನೋಟಿಸ್ ಜಾರಿ

ಬಿಜೆಪಿ ವಿರುದ್ಧ 15 ಕೋಟಿ ರೂ. ಕಳ್ಳಬೇಟೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತನ್ನ ಮುಂದೆ ತನಿಖೆಗೆ ಹಾಜರಾಗುವಂತೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಎಸಿಬಿ ಸಮನ್ಸ್ ಜಾರಿ ಮಾಡಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಎಎಪಿ ನಾಯಕ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಸಿಬಿ ತನಿಖೆಗೆ ಶಿಫಾರಸು ಮಾಡಿದ್ದರು.

ಸಾಕ್ಷಿ ನೀಡಿ; ಕಳ್ಳಬೇಟೆ ಆರೋಪದ ಮೇಲೆ ಕೇಜ್ರಿವಾಲ್ ಅವರಿಗೆ ದೆಹಲಿಯ ಎಸಿಬಿ ನೋಟಿಸ್ ಜಾರಿ
Arvind Kejriwal
ಸುಷ್ಮಾ ಚಕ್ರೆ
|

Updated on: Feb 07, 2025 | 6:24 PM

Share

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಸೂಚನೆ ನೀಡಿದ್ದರು. ಅವರ ನಿರ್ದೇಶನದ ಮೇರೆಗೆ ಎಸಿಬಿ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ಭೇಟಿ ನೀಡಿತ್ತು. ಆದರೆ, ಎಸಿಬಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಲು ಎಎಪಿ ನಾಯಕರು ನಿರಾಕರಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನವಾಯಿತು. ಎಸಿಬಿ ಅಧಿಕಾರಿಗಳು ಬಿಜೆಪಿ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆಪ್ ಆರೋಪಿಸಿತ್ತು.

ದೆಹಲಿಯಲ್ಲಿ ಮತ ಎಣಿಕೆಗೂ ಮುನ್ನ ಆಮ್ ಆದ್ಮಿ ಪಕ್ಷದ 16 ಅಭ್ಯರ್ಥಿಗಳನ್ನು ಬಿಜೆಪಿಗೆ ಸೇರಿಸಿಕೊಳ್ಳಲು ತಲಾ 15 ಕೋಟಿ ರೂ. ಆಮಿಷವೊಡ್ಡಲಾಗಿತ್ತು ಎಂಬ ಆರೋಪ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಸಾಕ್ಷಿಗಳನ್ನು ನೀಡುವಂತೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ.

ಕೇಜ್ರಿವಾಲ್ ಅವರ ಆರೋಪಗಳ ಬಗ್ಗೆ ಎಸಿಬಿ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಶಿಫಾರಸು ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯ ಮುನ್ನಾದಿನ ಎಸಿಬಿ ತಂಡವು ಇಂದು ಸಂಜೆಯೊಳಗೆ ಅರವಿಂದ್ ಕೇಜ್ರಿವಾಲ್, ಸಂಜಯ್ ಸಿಂಗ್ ಮತ್ತು ಮುಖೇಶ್ ಅಹ್ಲಾವತ್ ಅವರ ನಿವಾಸಗಳಿಗೆ ಭೇಟಿ ನೀಡಿ ತಮ್ಮ ಆರೋಪಗಳಿಗೆ ಪುರಾವೆ ಕೋರಿದೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಕಳ್ಳಬೇಟೆ ಆರೋಪ; ದೆಹಲಿ ಲೆಫ್ಟಿನೆಂಟ್ ಗವರ್ನರ್ ಎಸಿಬಿ ತನಿಖೆಗೆ ಆದೇಶ

ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಲಾಗಿದ್ದು, ಲಂಚದ ಆಮಿಷ ಸ್ವೀಕರಿಸಿದ 16 ಎಎಪಿ ಅಭ್ಯರ್ಥಿಗಳ ವಿವರಗಳು ಮತ್ತು ಅವರಿಗೆ ಕರೆಗಳು ಬಂದ ಫೋನ್ ಸಂಖ್ಯೆಗಳ ವಿವರಗಳನ್ನು ಎಸಿಬಿ ಕೋರಿದೆ. ಭ್ರಷ್ಟಾಚಾರ ನಿಗ್ರಹ ಸಂಸ್ಥೆಯು ಅರವಿಂದ್ ಕೇಜ್ರಿವಾಲ್ ಅವರನ್ನು ಆರೋಪಗಳನ್ನು ಬೆಂಬಲಿಸಲು ಸಾಕ್ಷ್ಯಗಳು ಮತ್ತು ಪುರಾವೆಗಳನ್ನು ಒದಗಿಸುವಂತೆ ಕೇಳಿದೆ.

ಬಿಜೆಪಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಪುರಾವೆಗಳನ್ನು ಸಂಗ್ರಹಿಸಲು ಎಸಿಬಿ ಅಧಿಕಾರಿಗಳು ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ, ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರ ಮನೆಯೊಳಗೆ ಪ್ರವೇಶಿಸಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು.

ಇದನ್ನೂ ಓದಿ: ತನಿಖೆಗೆ ಬಂದ ಎಸಿಬಿ ಅಧಿಕಾರಿಗಳಿಗೆ ನೋ ಎಂಟ್ರಿ; ಅರವಿಂದ್ ಕೇಜ್ರಿವಾಲ್ ಮನೆ ಮುಂದೆ ಹೈಡ್ರಾಮಾ

ಎಸಿಬಿ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ಬಂದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್ ಅವರ ವಕೀಲ ರಿಷಿಕೇಶ್ ಕುಮಾರ್, ಎಸಿಬಿ ಅಧಿಕಾರಿಗಳು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಎಎಪಿ ಮುಖ್ಯಸ್ಥರ ನಿವಾಸಕ್ಕೆ ಬಂದರು. ತನಿಖೆ ಅಥವಾ ಶೋಧಕ್ಕಾಗಿ ಯಾರದ್ದಾದರೂ ನಿವಾಸವನ್ನು ಪ್ರವೇಶಿಸಲು, ಸಂಬಂಧಪಟ್ಟ ಸಂಸ್ಥೆಯು ಹಾಗೆ ಮಾಡಲು ಲಿಖಿತ ಆದೇಶಗಳನ್ನು ಹೊಂದಿರಬೇಕು. ಕಾನೂನು ಆದೇಶಗಳಿಲ್ಲದೆ ಯಾರೊಬ್ಬರ ಆಸ್ತಿಯನ್ನು ಪ್ರವೇಶಿಸುವುದನ್ನು ಕಾನೂನುಬಾಹಿರ ಮತ್ತು ಅತಿಕ್ರಮಣವೆಂದು ಪರಿಗಣಿಸಲಾಗುತ್ತದೆ. ಅವರು ಆ ಹಳದಿ ಲಕೋಟೆಯಲ್ಲಿ ಸ್ಟೇಷನರಿ ವಸ್ತುಗಳನ್ನು ಸಾಗಿಸುತ್ತಿದ್ದರು. ಅರವಿಂದ್ ಕೇಜ್ರಿವಾಲ್ ಅವರ ನಿವಾಸವನ್ನು ಅವರು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಪ್ರವೇಶಿಸಿದರು” ಎಂದು ಅವರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ