AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಹುದ್ದೆಗೆ ಅಮಿತ್ ಶಾಗೆ ಮೋದಿ ದಾರಿ ಕ್ಲಿಯರ್ ಮಾಡುತ್ತಿದ್ದಾರೆ; ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಉತ್ತರಾಧಿಕಾರದ ಸಮರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 75 ವರ್ಷದ ನಂತರವೂ ಪ್ರಧಾನಿಯಾಗಿ ಉಳಿಯುತ್ತಾರೋ ಇಲ್ಲವೋ ಎಂಬುದನ್ನು ಪ್ರಧಾನಿ ಮೋದಿ ಹೇಳಲಿ ಎಂದು ಅವರು ಸವಾಲು ಹಾಕಿದ್ದಾರೆ.

ಪ್ರಧಾನಿ ಹುದ್ದೆಗೆ ಅಮಿತ್ ಶಾಗೆ ಮೋದಿ ದಾರಿ ಕ್ಲಿಯರ್ ಮಾಡುತ್ತಿದ್ದಾರೆ; ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: May 24, 2024 | 6:37 PM

ನವದೆಹಲಿ: ಬಿಜೆಪಿಯಲ್ಲಿ ಮುಂದಿನ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಆಂತರಿಕ ಸಮರ ನಡೆಯುತ್ತಿದೆ. ಆದರೆ, ಅವರು ಹೊರಗೆಲ್ಲೂ ಅದನ್ನು ತೋರಿಸಿಕೊಳ್ಳುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ತಮ್ಮ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಎಲ್ಲ ಮಾರ್ಗವನ್ನು ತೆರವುಗೊಳಿಸುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

ಅಮಿತ್ ಶಾ ಅವರೇ 2019ರಲ್ಲಿ 75 ವರ್ಷ ಮೇಲ್ಪಟ್ಟ ಎಲ್ಲರನ್ನು ನಿವೃತ್ತಿಗೊಳಿಸುವುದಾಗಿ ಹೇಳಿದ್ದರು. 2014ರಲ್ಲಿ ಪ್ರಧಾನಿಯಾದ ನಂತರ ಮೋದಿಯವರೇ 75 ವರ್ಷಗಳ ನಂತರ ಬಿಜೆಪಿ ಸಂಘಟನೆಯಲ್ಲಾಗಲೀ, ಸರಕಾರದಲ್ಲಾಗಲೀ ಯಾರಿಗೂ ಯಾವುದೇ ಹುದ್ದೆ ನೀಡಬಾರದು ಎಂಬ ನಿಯಮ ರೂಪಿಸಿದ್ದರು. ಇದರ ಅಡಿಯಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಶಿ, ಯಶವಂತ್ ಸಿನ್ಹಾ ನಿವೃತ್ತರಾದರು. ಎಷ್ಟು ಜನರ ಟಿಕೆಟ್ ಕ್ಯಾನ್ಸಲ್ ಆಗಿದೆಯೋ ಗೊತ್ತಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ಹೈಕೋರ್ಟ್ ತೀರ್ಪಿ​ನಿಂದ ಇಂಡಿಯ ಬಣಕ್ಕೆ ಕಪಾಳಮೋಕ್ಷ; ಪಿಎಂ ಮೋದಿ ಪ್ರತಿಕ್ರಿಯೆ

ನಿಸ್ಸಂಶಯವಾಗಿ ಅವರು ರೂಪಿಸಿದ ನಿಯಮಗಳನ್ನು ತಾವೇ ಜಾರಿಗೆ ತರುತ್ತಾರೆ. ಬಿಜೆಪಿಯವರೊಳಗೆ ಉತ್ತರಾಧಿಕಾರದ ಬಗ್ಗೆ ಭಾರೀ ಯುದ್ಧ ನಡೆಯುತ್ತಿದೆ. ಪ್ರಧಾನಿ ರೇಸ್​ನಿಂದ ಶಿವರಾಜ್ ಸಿಂಗ್, ವಸುಂಧರಾ ರಾಜೇ, ಖಟ್ಟರ್ ಸಾಹೇಬ್, ಡಾ. ರಮಣ್ ಸಿಂಗ್, ದೇವೇಂದ್ರ ಫಡ್ನವೀಸ್ ಅವರನ್ನೂ ತೆಗೆದುಹಾಕಲಾಗಿದೆ. ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಅಮಿತ್ ಶಾಗೆ ಹಾದಿ ಸುಗಮವಾಗಲು ಯೋಗಿ ಅವರನ್ನು ತೆಗೆದುಹಾಕುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ದ್ವೇಷ ನನ್ನೊಂದಿಗೆ, ನನ್ನ ಹೆತ್ತವರನ್ನು ಬಿಟ್ಟುಬಿಡಿ; ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಸಂದೇಶ

ಬಿಜೆಪಿಯಲ್ಲಿ ಉತ್ತರಾಧಿಕಾರದ ಯುದ್ಧ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ಮಾರ್ಗವನ್ನು ತೆರವುಗೊಳಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ನೀವು ಇಂಟರ್ನೆಟ್​ನಲ್ಲಿ ಪರಿಶೀಲಿಸಿ, 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಯಕರನ್ನು ನಾವು ನಿವೃತ್ತಿಗೊಳಿಸುತ್ತಿದ್ದೇವೆ ಮತ್ತು ಅದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಅಮಿತ್ ಶಾ ಸ್ವತಃ 2019ರಲ್ಲಿ ಹೇಳಿದ್ದರು. 2014ರಲ್ಲಿ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ 75 ವರ್ಷ ವಯಸ್ಸಿನ ಯುವಕರಿಗೆ ಅವಕಾಶ ಸಿಗಬೇಕು ಎಂಬ ನಿಯಮವನ್ನು ನರೇಂದ್ರ ಮೋದಿಯೇ ತಂದಿದ್ದರು. 75 ವಯಸ್ಸಿಗಿಂತ ಹೆಚ್ಚಿನವರಿಗೆ ಬಿಜೆಪಿ ಮತ್ತು ಸರ್ಕಾರದಲ್ಲಿ ಯಾವುದೇ ಜವಾಬ್ದಾರಿಯನ್ನು ನೀಡಲಾಗುವುದಿಲ್ಲ ಎಂದಿದ್ದರು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ