AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudan Crisis: ಭಾರತೀಯರ ಭದ್ರತೆ ಬಗ್ಗೆ ಪರಿಶೀಲಿಸಲು ಉನ್ನತಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ಸುಡಾನ್​​ನಲ್ಲಿ ನಡೆಯುತ್ತಿರುವ ಕದನದ ಬಗ್ಗೆ ಮಾಹಿತಿ ಪಡೆದಿದ್ದು, ಭಾರತೀಯ ರಕ್ಷಣೆಯ ಬಗ್ಗೆ ಮತ್ತು ಭದ್ರತೆ ಪರಿಶೀಲನೆ ಬಗ್ಗೆ ಉನ್ನತಮಟ್ಟದ ಸಭೆಯನ್ನು ನಡೆಸಲಿದ್ದಾರೆ.

Sudan Crisis: ಭಾರತೀಯರ ಭದ್ರತೆ ಬಗ್ಗೆ ಪರಿಶೀಲಿಸಲು ಉನ್ನತಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 21, 2023 | 1:54 PM

Share

ದೆಹಲಿ: ಸುಡಾನ್​​ನಲ್ಲಿ (Sudan) ಸೇನೆಗಳ ಮಧ್ಯೆ ನಡೆಯುತ್ತಿರುವ ಕದನದಿಂದ ಭಾರತೀಯರ ಪರಿಸ್ಥಿತಿ ಹೇಗಿದೆ? ಎಂದು ಪರಿಶೀಲನೆ ನಡೆಸಲು ಪ್ರಧಾನಿ ಮೋದಿ ಮಹತ್ವದ ಸಭೆಯನ್ನು ಕರೆದಿದ್ದಾರೆ. ಕದನ ವಿರಾಮ ಘೋಷಣೆ ಮಾಡಿದ ಸುಡಾನ್ ಸೇನೆ, ಇದೀಗ ಪ್ರಧಾನಿ ಮೋದಿ, ಸುಡಾನ್​​ನಲ್ಲಿ ನಡೆಯುತ್ತಿರುವ ಕದನದ ಬಗ್ಗೆ ಮಾಹಿತಿ ಪಡೆದಿದ್ದು, ಭಾರತೀಯ ರಕ್ಷಣೆಯ ಬಗ್ಗೆ ಮತ್ತು ಭದ್ರತೆ ಪರಿಶೀಲನೆ ಬಗ್ಗೆ ಉನ್ನತಮಟ್ಟದ ಸಭೆಯನ್ನು ನಡೆಸಲಿದ್ದಾರೆ. ಸುಡಾನ್‌ನಲ್ಲಿ ಪರಿಸ್ಥಿತಿ “ತುಂಬಾ ಉದ್ವಿಗ್ನವಾಗಿದೆ” ಮತ್ತು ಅಲ್ಲಿ ಭಾರತೀಯರ ಸುರಕ್ಷತೆ ನಮ್ಮ ಮೊದಲ ಆದ್ಯತೆ, ಅವರನ್ನು ಸುರಕ್ಷತೆ ಸ್ಥಳಕ್ಕೆ ಸ್ಥಳಾಂತರಿಸುವಿಕೆ ಸೇರಿದಂತೆ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವತ್ತ ಗಮನಹರಿಸುತ್ತಿದೆ ಎಂದು ಭಾರತ ನಿನ್ನೆ ಹೇಳಿದೆ.

ವಿಶ್ವ  ಅನೇಕ ರಾಷ್ಟ್ರಗಳು ಕದನ ವಿರಾಮ ಘೋಷಣೆ ಮಾಡಿ ಎಂಭ ಮನವಿಯನ್ನು ನಿರ್ಲಕ್ಷಿಸಿ ದೇಶದ ಸೇನೆ ಮತ್ತು ಅರೆಸೇನಾ ಪಡೆಗಳ ಯುದ್ಧ ಮಾಡಿದೆ, ಇದೀಗ ಈ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಸುಡಾನ್ ರಾಜಧಾನಿ ಖಾರ್ಟೌಮ್ ಜಿಲ್ಲೆಗಳಲ್ಲಿ ವಾಯುದಾಳಿಗಳು ಮತ್ತು ಟ್ಯಾಂಕ್‌ಗಳ ಗುಂಡಿನ ದಾಳಿಯಿಂದ ಸುಡಾನ್​​ನಲ್ಲಿ ದೊಡ್ಡ ಹೋರಾಟವೇ ನಡೆಯುತ್ತಿದೆ ಎಂದು ಹೇಳಿದೆ. ಅಲ್ಲಿ ಐದು ಮಿಲಿಯನ್ ಹೆಚ್ಚಿನ ಜನರು ವಿದ್ಯುತ್, ಆಹಾರ, ನೀರು ಇಲ್ಲದೆ ಪರದಾಡುವ ಸ್ಥಿತಿ ಬಂದಿದೆ, ಈಗಾಗಲೇ ಭಾರತ ರಾಯಭಾರಿ ಕಚೇರಿ ಈಗಾಗಲೇ ಯಾರು ಭಾರತೀಯ ಮನೆಯಿಂದ ಹೊರಗಡೆ ಬರಬೇಡಿ ಎಂದು ಹೇಳಿದೆ.

ಇದನ್ನೂ ಓದಿ: Sudan Crisis: ಸುಡಾನ್​​ನಲ್ಲಿ 72 ಗಂಟೆಗಳ ಕದನ ವಿರಾಮ ಘೋಷಣೆ

ಸುಡಾನ್‌ನ ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳು (RSF) ಶುಕ್ರವಾರ ಬೆಳಿಗ್ಗೆ 6 ರಿಂದ (0400 GMT) ಮಾನವೀಯ ಆಧಾರದ ಮೇಲೆ 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಹೇಳಿದೆ, ಇದು ಮುಸ್ಲಿಂ ರಜಾದಿನವಾದ ಈದ್ ಅಲ್- ಫಿತರ್ ಇರುವ ಕಾರಣ ಕದನ ವಿರಾಮ ಘೋಷಣೆ ಮಾಡಿದೆ.

ಈದ್ ಅಲ್-ಫಿತರ್ ಆಚರಣೆ ಇರುವ ಕಾರಣ ಕದನ ವಿರಾಮವನ್ನು ಘೋಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಸಮಯದಲ್ಲಿ ನಾಗರಿಕರನ್ನು ಸ್ಥಳಾಂತರಿಸಲು ಮಾನವೀಯ ಕಾರಿಡಾರ್‌ಗಳನ್ನು ತೆರೆಯಲು ಅವಕಾಶವನ್ನು ನೀಡಲಾಗಿದೆ ಎಂದು ಆರ್‌ಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ.

Published On - 1:40 pm, Fri, 21 April 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್