‘ಸಿಎಂಗೆ ಮನೆಯಲ್ಲಿ ಮಾಡಿದ ಅಡುಗೆಯನ್ನೇ ಬಡಿಸಲಾಗಿತ್ತು; ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಎಲ್‌ಜಿ ಪತ್ರ

ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯಕ್ಕೆ 'ತೀವ್ರ' ಅಪಾಯವಿದೆ ಎಂದು ಆಮ್ ಆದ್ಮಿ ಪಕ್ಷ ನಿರಂತರವಾಗಿ ಆರೋಪಿಸುತ್ತಿದೆ. ಸಿಎಂ ತೀವ್ರ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದ್ದು, ಅವರ ಸಕ್ಕರೆ ಪ್ರಮಾಣ ಅಪಾಯಕಾರಿಯಾಗಿ ಕುಸಿದಿದೆ ಎನ್ನಲಾಗಿದೆ.

'ಸಿಎಂಗೆ ಮನೆಯಲ್ಲಿ ಮಾಡಿದ ಅಡುಗೆಯನ್ನೇ ಬಡಿಸಲಾಗಿತ್ತು; ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಎಲ್‌ಜಿ ಪತ್ರ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Jul 20, 2024 | 1:00 PM

ನವದೆಹಲಿ: ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ದಿನೇದಿನೆ ಹದಗೆಡುತ್ತಿದೆ, ಅವರಿಗೆ ಜೈಲಿನಲ್ಲಿ ಸರಿಯಾದ ಆಹಾರ ನೀಡುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷ ಆರೋಪಿಸುತ್ತಲೇ ಇದೆ. ಆದರೆ, ಈ ಕುರಿತು ಪತ್ರ ಬರೆದಿರುವ ದೆಹಲಿ ಲೆಫ್ಟಿನೆಂಟ್ ಜನರಲ್ ವಿಕೆ ಸಕ್ಸೇನಾ, ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆಯಲ್ಲೇ ತಯಾರಿಸಿದ ಉತ್ತಮ ಗುಣಮಟ್ಟದ ಆಹಾರವನ್ನೇ ನೀಡಲಾಗುತ್ತಿದೆ. ಆದರೂ ಅವರು ಉದ್ದೇಶಪೂರ್ವಕವಾಗಿಯೇ ಕಡಿಮೆ ಕ್ಯಾಲೊರಿ ಇರುವ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೆಹಲಿ ಎಲ್‌ಜಿ ಮತ್ತು ಎಎಪಿ ಸರ್ಕಾರದ ನಡುವಿನ ಮತ್ತೊಂದು ಸುತ್ತಿನ ಜಗಳದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಶಿಫಾರಸು ಮಾಡದ ವೈದ್ಯಕೀಯ ಆಹಾರ ಮತ್ತು ಔಷಧಗಳ ಸೇವನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಎಲ್​ಜಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಅವರು ದೆಹಲಿ ಮುಖ್ಯಮಂತ್ರಿಯ ಆರೋಗ್ಯ ಹದಗೆಡುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಹೇಳಿಕೆಗಳನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

“ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೋರಿ ಸೇವನೆಯನ್ನು ಮಾಡುತ್ತಿದ್ದಾರೆ ಎಂಬುದಕ್ಕೆ ಹಲವಾರು ನಿದರ್ಶನಗಳಿವೆ. ಅವರಿಗೆ ಮನೆಯಲ್ಲಿ ತಯಾರಿಸಿದ ಸಾಕಷ್ಟು ಆಹಾರವನ್ನು ಒದಗಿಸಲಾಗಿದೆ. ಸಿಎಂ ಕೇಜ್ರಿವಾಲ್ ನಿಗದಿತ ಆಹಾರವನ್ನು ಸೇವಿಸಿಲ್ಲ. ಕಡಿಮೆ ಕ್ಯಾಲೋರಿ ಸೇವನೆಯಿಂದ ಬಹಳ ತೂಕ ಕಡಿಮೆಯಾಗಿದೆ” ಎನ್ನಲಾಗಿದೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ 2 ಕೆಜಿಯಷ್ಟೇ ತೂಕ ಕಳೆದುಕೊಂಡಿರುವುದು: ಎಎಪಿ ಆರೋಪ ತಿರಸ್ಕರಿಸಿದ ತಿಹಾರ್ ಜೈಲು ಅಧಿಕಾರಿಗಳು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಡುವ ಮೂಲಕ ಅವರ ಆರೋಗ್ಯಕ್ಕೆ ಹಾನಿ ಮಾಡಲು ಬಿಜೆಪಿ ಪಿತೂರಿ ನಡೆಸುತ್ತಿದೆ ಮತ್ತು ಮಧುಮೇಹಿಯಾಗಿರುವ ಅವರಿಗೆ ವೈದ್ಯಕೀಯ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿರುವ ಎಲ್‌ಜಿಗೆ ಎಎಪಿ ನಾಯಕ ಸಂಜಯ್ ಸಿಂಗ್ ತಿರುಗೇಟು ನೀಡಿದ್ದಾರೆ. “ಎಲ್‌ಜಿ ಸರ್ ನೀವು ಯಾವ ರೀತಿಯ ತಮಾಷೆ ಮಾಡುತ್ತಿದ್ದೀರಿ? ಮನುಷ್ಯರಿಗೆ ರಾತ್ರಿಯಲ್ಲಿ ಮಾತ್ರ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ ಎಂದರೆ ಇದು ತುಂಬಾ ಅಪಾಯಕಾರಿ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​