AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನಿಮ್ಮ ಕೆಟ್ಟ ಕನಸು: ಕೇಜ್ರಿವಾಲ್, ಸತ್ಯೇಂದ್ರ ಜೈನ್‌ ವಿರುದ್ಧ ಜೈಲಿನಿಂದಲೇ ಸುಕೇಶ್ ಚಂದ್ರಶೇಖರ್ ಮತ್ತೊಂದು ಬೆದರಿಕೆ

ನೂರಾರು ಕೋಟಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜೈಲಿನಿಂದಲೇ ಅರವಿಂದ್ ಕೇಜ್ರಿವಾಲ್ ಮತ್ತು ಸತ್ಯೇಂದರ್ ಜೈನ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಆಪ್ ಸರ್ಕಾರದ ಇನ್ನೂ ಮೂರು ಪ್ರಮುಖ ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ ಎಂದು ಬೆದರಿಕೆ ಹಾಕಿದ್ದಾರೆ. ಆಪ್ ಅನ್ನು 'ಎನಿ ಟೈಮ್, ಆಲ್ವೇಸ್ ಸ್ಕ್ಯಾಮ್ ಪಾರ್ಟಿ' ಎಂದು ಜರೆದಿರುವ ಸುಕೇಶ್, ಹಿಂದಿನ ಆರೋಪಗಳು ಸಾಬೀತಾಗಿವೆ ಎಂದು ಹೇಳಿ, 'ನಾನು ನಿಮ್ಮ ಕೆಟ್ಟ ಕನಸು' ಎಂದು ಎಚ್ಚರಿಸಿದ್ದಾರೆ.

ನಾನು ನಿಮ್ಮ ಕೆಟ್ಟ ಕನಸು: ಕೇಜ್ರಿವಾಲ್, ಸತ್ಯೇಂದ್ರ ಜೈನ್‌ ವಿರುದ್ಧ ಜೈಲಿನಿಂದಲೇ ಸುಕೇಶ್ ಚಂದ್ರಶೇಖರ್ ಮತ್ತೊಂದು ಬೆದರಿಕೆ
ಸುಕೇಶ್
ನಯನಾ ರಾಜೀವ್
|

Updated on: Aug 20, 2026 | 2:12 PM

Share

ನವದೆಹಲಿ, ಆಗಸ್ಟ್ 20: ನೂರಾರು ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್, ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್(Arvind Kejriwal) ಮತ್ತು ಮಾಜಿ ಸಚಿವ ಸತ್ಯೇಂದ್ರ ಜೈನ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾನೆ. ಜೈಲಿನಿಂದಲೇ ಬರೆದಿರುವ ಹೊಸ ಪತ್ರದಲ್ಲಿ, ಆಪ್ ಸರ್ಕಾರದ ಇತರ ಮೂರು ಪ್ರಮುಖ ಇಲಾಖೆಗಳಲ್ಲಿ ನಡೆದಿರುವ ಇನ್ನೂ 3 ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿದ್ದು, ಅವು ಲೋಡಿಂಗ್ ಹಂತದಲ್ಲಿವೆ ಎಂದು ಬೆದರಿಕೆ ಹಾಕಿದ್ದಾನೆ.

ದೆಹಲಿ ಅಬಕಾರಿ ನೀತಿ ಹಾಗೂ ದೆಹಲಿ ಜಲ ಮಂಡಳಿ (DJB) ಪ್ರಕರಣಗಳಲ್ಲಿ ತಾನು ಈ ಹಿಂದೆ ಮಾಡಿದ್ದ ಆರೋಪಗಳು ಸಾಬೀತಾಗಿವೆ, ಇದೀಗ ಮುಂದಿನ ಮೂರು ಪ್ರಮುಖ ಇಲಾಖೆಗಳ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ಬಯಲು ಮಾಡುವುದಾಗಿ ಹೇಳಿದ್ದಾನೆ.

ಆಪ್ ಅನ್ನು ಎನಿ ಟೈಮ್, ಆಲ್ವೇಸ್ ಸ್ಕ್ಯಾಮ್ ಪಾರ್ಟಿ ಎಂದು ಜರೆದಿರುವ ಆತ, ದೆಹಲಿಯಲ್ಲಿ ಆದಂತೆ ಪಂಜಾಬ್‌ನಲ್ಲೂ ಜನತೆ ಆಪ್ ಪಕ್ಷದ ದುರಹಂಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾನೆ. ಯುವಜನತೆ ಮತ್ತು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ಕೇಜ್ರಿವಾಲ್ ಪ್ರಾಕ್ಸಿಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದು, 2015-16ರ ಅವಧಿಯ ಒಡನಾಟವನ್ನು ನೆನಪಿಸಿ ಆಪ್ ನಾಯಕರನ್ನು ಪೂರ್ಣವಾಗಿ ಬಯಲು ಮಾಡುವುದಾಗಿ ಎಚ್ಚರಿಸಿದ್ದಾನೆ.

ಮತ್ತಷ್ಟು ಓದಿ: ‘ಪ್ರಜಾಪ್ರಭುತ್ವದ ಗೆಲುವು’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷಗಳ ಪ್ರತಿಕ್ರಿಯೆ

ಪತ್ರದ ಕೊನೆಯಲ್ಲಿ ನಾನು ನಿಮ್ಮ ಕೆಟ್ಟ ಕನಸು, ನಿಮ್ಮೆಲ್ಲರನ್ನೂ ಬಯಲು ಮಾಡುತ್ತೇನೆ ಎಂದು ಸಹಿ ಹಾಕಿ ಎಚ್ಚರಿಕೆ ರವಾನಿಸಿದ್ದಾನೆ. ದೆಹಲಿ ಜಲ ಮಂಡಳಿ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ (ACB) ಇತ್ತೀಚೆಗೆ ಸತ್ಯೇಂದರ್ ಜೈನ್ ಅವರನ್ನು ಬಂಧಿಸಿದ ನಂತರ ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ವಾಕ್ಸಮರ ನಡೆಯುತ್ತಿರುವ ಹೊತ್ತಿನಲ್ಲೇ ಈ ಪತ್ರ ಹೊರಬಂದಿದೆ.

ಸುಕೇಶ್ ಚಂದ್ರಶೇಖರ್ ಅವರ ಪತ್ರಗಳು ಮತ್ತು ಆರೋಪಗಳನ್ನು ಆಮ್ ಆದ್ಮಿ ಪಕ್ಷವು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಪಿತೂರಿಗಳು ಎಂದು ಹೇಳಿದೆ. ಸುಕೇಶ್ ಹೊಸದಾಗಿ 3 ಹಗರಣಗಳು ಬಯಲಾಗಲಿವೆ ಎಂದು ಹೇಳಿಕೊಂಡಿದ್ದರೂ, ಅದಕ್ಕೆ ಸಂಬಂಧಿಸಿದ ಯಾವುದೇ ಇಲಾಖೆಯ ಹೆಸರುಗಳಾಗಲಿ ಅಥವಾ ನಿರ್ದಿಷ್ಟ ದಾಖಲೆಗಳನ್ನಾಗಲಿ ಪತ್ರದಲ್ಲಿ ಬಹಿರಂಗಪಡಿಸಿಲ್ಲ.

ಸುಕೇಶ್ ಚಂದ್ರಶೇಖರ್ 2022 ರಿಂದಲೂ ಜೈಲಿನಿಂದ ಲೆಫ್ಟಿನೆಂಟ್ ಗವರ್ನರ್ ಹಾಗೂ ಮಾಧ್ಯಮಗಳಿಗೆ ನಿರಂತರವಾಗಿ ಪತ್ರ ಬರೆಯುತ್ತಿದ್ದು, ಆಪ್ ನಾಯಕರು ತನಗೆ ರಕ್ಷಣೆ ನೀಡಲು ಹಣ ಪಡೆದಿದ್ದರು ಎಂದು ಆರೋಪಿಸುತ್ತಾ ಬಂದಿದ್ದಾನೆ.ಸುಮಾರು 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಸುಕೇಶ್ ವಿರುದ್ಧ ಜಾರಿ ನಿರ್ದೇಶನಾಲಯ (ED) ಮತ್ತು ದೆಹಲಿ ಪೊಲೀಸರ ತನಿಖೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!