AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಸುಖೋಯ್ Su-30 MKI ಯುದ್ಧ ವಿಮಾನ ನಾಪತ್ತೆ; ಐಎಎಫ್​​ನಿಂದ ಶೋಧ ಕಾರ್ಯಾಚರಣೆ ಆರಂಭ

ಅಸ್ಸಾಂನ ಜೋರ್ಹತ್‌ನಿಂದ ಹಾರಾಟ ನಡೆಸಿದ ನಂತರ Su-30 MKI ಯುದ್ಧ ವಿಮಾನವು ನಾಪತ್ತೆಯಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಐಎಎಫ್ ವಿಮಾನವು ಕೊನೆಯದಾಗಿ ಇಂದು ಸಂಜೆ 7.42ಕ್ಕೆ ಸಂಪರ್ಕಕ್ಕೆ ಸಿಕ್ಕಿತ್ತು. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಸುಖೋಯ್ Su-30 MKI ಯುದ್ಧ ವಿಮಾನ ನಾಪತ್ತೆ; ಐಎಎಫ್​​ನಿಂದ ಶೋಧ ಕಾರ್ಯಾಚರಣೆ ಆರಂಭ
Sukhoi Su 30
ಸುಷ್ಮಾ ಚಕ್ರೆ
|

Updated on:Mar 05, 2026 | 10:40 PM

Share

ನವದೆಹಲಿ, ಮಾರ್ಚ್ 5: ಭಾರತೀಯ ವಾಯುಪಡೆಯ (ಐಎಎಫ್) ಸುಖೋಯ್ Su-30 MKI ಫೈಟರ್ ಜೆಟ್ ರಾಡಾರ್‌ನಿಂದ ಕಣ್ಮರೆಯಾಗಿದೆ. ಅದರ ಸ್ಥಳವನ್ನು ಕಂಡುಹಿಡಿಯಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಭಾರತೀಯ ಯುದ್ಧ ವಿಮಾನವಾದ Su-30 MKI ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಾರಾಟ ನಡೆಸುತ್ತಿದ್ದಾಗ ಇಂದು ಸಂಜೆ 7 ಗಂಟೆ ಸುಮಾರಿಗೆ ನಾಪತ್ತೆಯಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಕೆಲವು ವರದಿಗಳು ವಿಮಾನ ಅಪಘಾತಕ್ಕೀಡಾಗಿದೆ ಮತ್ತು ಸ್ಥಳೀಯರು ದೊಡ್ಡ ಸ್ಫೋಟವನ್ನು ಸಹ ಕೇಳಿದ್ದಾರೆ ಎಂದು ಕೂಡ ತಿಳಿಸಿವೆ.

ಭಾರತೀಯ ವಾಯುಪಡೆ ಅಥವಾ ರಕ್ಷಣಾ ಸಚಿವಾಲಯ ಇದನ್ನು ಇನ್ನೂ ದೃಢಪಡಿಸಿಲ್ಲ. ಪೈಲಟ್ ಕೂಡ ನಾಪತ್ತೆಯಾಗಿದ್ದು, ಪ್ರಸ್ತುತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

2024ರ ಜೂನ್ ತಿಂಗಳಲ್ಲಿ ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯಲ್ಲಿ ಸುಖೋಯ್ Su-30 MKI ಕಾಣೆಯಾದ ನಂತರವೂ ಇದೇ ರೀತಿಯ ಘಟನೆ ಸಂಭವಿಸಿತ್ತು. ನಿಫಾದ್ ತಹಸಿಲ್‌ನ ಶಿರಸ್ಗಾಂವ್ ಗ್ರಾಮದ ಬಳಿ ವಿಮಾನ ಅಪಘಾತಕ್ಕೀಡಾಗಿತ್ತು. ಆದರೆ ಪೈಲಟ್ ಮತ್ತು ಸಹ-ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ

ಸುಖೋಯ್ Su-30MKI ಎರಡು ಆಸನಗಳ, ಟ್ವಿನ್‌ಜೆಟ್ 4.5 ಪೀಳಿಗೆಯ ವಿಮಾನವಾಗಿದ್ದು, ಇದನ್ನು ರಷ್ಯಾದ ಸುಖೋಯ್ ಅಭಿವೃದ್ಧಿಪಡಿಸಿದೆ. ಭಾರತದಲ್ಲಿ HAL ಸ್ಥಳೀಯವಾಗಿ ನಿರ್ಮಿಸಿದೆ. ಸುಮಾರು 3,000 ಕಿ.ಮೀ ದೂರ ಹಾರುವ ಮತ್ತು ಬ್ರಹ್ಮೋಸ್‌ಗಳನ್ನು ಸಹ ಹಾರಿಸಬಲ್ಲ Su-30 ವಿಮಾನಗಳು ಭಾರತೀಯ ವಾಯುಪಡೆಯ ಬೆನ್ನೆಲುಬಾಗಿವೆ.

ಪ್ರಸ್ತುತ, ಭಾರತೀಯ ವಾಯುಪಡೆಯು ಸುಮಾರು 270 ಸುಖೋಯ್ Su-30 ಎಂಕೆಐಗಳನ್ನು ನಿರ್ವಹಿಸುತ್ತಿದೆ. ಭಾರತವು Su-30 ವಿಮಾನಗಳಿಗಾಗಿ ಪ್ರಮುಖ ಆಧುನೀಕರಣ ಕಾರ್ಯಕ್ರಮವನ್ನು ಯೋಜಿಸುತ್ತಿದೆ, ಇದನ್ನು ‘ಸೂಪರ್ ಸುಖೋಯ್’ ಎಂದು ಕರೆಯಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Thu, 5 March 26

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು