ಮಹಾರಾಷ್ಟ್ರ ಚುನಾವಣೆ ಮಧ್ಯೆ ಸಂಚಲನ ಮೂಡಿಸಿದ ಬಿಟ್​ಕಾಯಿನ್ ಹಗರಣ, ಸುಪ್ರಿಯಾ ಸುಳೆ ವಿರುದ್ಧ ಗಂಭೀರ ಆರೋಪ

|

Updated on: Nov 20, 2024 | 1:55 PM

ಒಂದೆಡೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಡೆಯುತ್ತಿದ್ದು, ಇನ್ನೊಂದೆಡೆ ಬಿಟ್​ ಕಾಯಿನ್ ಹಗರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಪುಣೆಯ ಮಾಜಿ-ಐಪಿಎಸ್ ಅಧಿಕಾರಿ ರವೀಂದ್ರನಾಥ ಪಾಟೀಲ್ ಅವರು ಎನ್ಸಿಪಿ-(ಎಸ್ಪಿ) ನಾಯಕಿ ಮತ್ತು ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಿರುದ್ಧ ಗಂಭೀರವಾದ ಆರೋಪ ಮಾಡಿ, 2018ರ ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಹಣ ಹೂಡಲು ಅದನ್ನೇ ಬಳಸಿಕೊಂಡಿದ್ದಾರೆ ಎಂದು ಹೇಳಿದ್ದರು.

ಮಹಾರಾಷ್ಟ್ರ ಚುನಾವಣೆ ಮಧ್ಯೆ ಸಂಚಲನ ಮೂಡಿಸಿದ ಬಿಟ್​ಕಾಯಿನ್ ಹಗರಣ, ಸುಪ್ರಿಯಾ ಸುಳೆ ವಿರುದ್ಧ ಗಂಭೀರ ಆರೋಪ
ಸುಪ್ರಿಯಾ ಸುಳೆ
Image Credit source: The Hindu
Follow us on

ಒಂದೆಡೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಡೆಯುತ್ತಿದ್ದು, ಇನ್ನೊಂದೆಡೆ ಬಿಟ್​ ಕಾಯಿನ್ ಹಗರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಪುಣೆಯ ಮಾಜಿ-ಐಪಿಎಸ್ ಅಧಿಕಾರಿ ರವೀಂದ್ರನಾಥ ಪಾಟೀಲ್ ಅವರು ಎನ್ಸಿಪಿ-(ಎಸ್ಪಿ) ನಾಯಕಿ ಮತ್ತು ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಿರುದ್ಧ ಗಂಭೀರವಾದ ಆರೋಪ ಮಾಡಿ, 2018ರ ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಹಣ ಹೂಡಲು ಅದನ್ನೇ ಬಳಸಿಕೊಂಡಿದ್ದಾರೆ ಎಂದು ಹೇಳಿದ್ದರು.

ಇದೇ ಸನ್ನಿವೇಶ ಬಳಸಿಕೊಂಡ ಬಿಜೆಪಿ, ನಾನಾ ಪಟೋಲೆ ಹಾಗೂ ಸುಪ್ರಿಯಾ ಸುಳೆ ಅವರು ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವುದಕ್ಕೆ ಪುರಾವೆ ಇದೆ ಎಂದು ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದರು. ಆದರೆ ಆಡಿಯೋ ಕ್ಲಿಪ್ ನನ್ನದಲ್ಲ ಎಂದು ಸುಪ್ರಿಯಾ ಸುಳೆ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಲೋಕಸಭಾ ಸಂಸದೆ ಮತ್ತು ಎನ್‌ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಅವರು ಪುಣೆಯ ಚುನಾವಣಾ ಆಯೋಗ ಮತ್ತು ಸೈಬರ್ ಸೆಲ್‌ಗೆ ಔಪಚಾರಿಕ ದೂರು ಸಲ್ಲಿಸಿದ್ದು, ತಮ್ಮ ಬಗ್ಗೆ ಸುಳ್ಳು ಮತ್ತು ಮಾನಹಾನಿಕರ ಮಾಹಿತಿಯನ್ನು ಹರಡಿದ ಆರೋಪದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಚುನಾವಣಾ ನಿಧಿ ವಿತರಣೆಗಾಗಿ ಸುಪ್ರಿಯಾ ಸುಳೆ ಮತ್ತು ನಾನಾ ಪಟೋಲೆ ಅವರು ಕೆಲವು ಬಿಟ್‌ಕಾಯಿನ್‌ಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಸೇರಿವೆ.

ಮತ್ತಷ್ಟು ಓದಿ: ಸುಪ್ರಿಯಾ ಸುಳೆ ವಾಟ್ಸಾಪ್​ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಹ್ಯಾಕರ್ಸ್​

ಪುಣೆಯ ಮಾಜಿ ಐಪಿಎಸ್ ಅಧಿಕಾರಿ ಗೌರವ್ ಮೆಹ್ತಾ ಮತ್ತು ರವೀಂದ್ರನಾಥ್ ಪಾಟೀಲ್ ಹೆಸರುಗಳನ್ನು ಬಳಸಿಕೊಂಡು ಇಬ್ಬರು ವ್ಯಕ್ತಿಗಳು ನಕಲಿ ಮತ್ತು ದುರುದ್ದೇಶಪೂರಿತ ಮಾಹಿತಿಯನ್ನು ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಹಾರಾಷ್ಟ್ರ ತನ್ನ 288 ಸದಸ್ಯ ಬಲದ ವಿಧಾನಸಭೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಡಿಯೋ ಕ್ಲಿಪ್ ನಾನು ಕೂಡ ಕೇಳಿದ್ದೇನೆ, ಅವರಲ್ಲಿರುವವರಲ್ಲಿ ಒಬ್ಬರು ನನ್ನ ಸಹೋದರಿ ಮತ್ತು ಇನ್ನೊಬ್ಬರ ಜೊತೆ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಆಡಿಯೋ ಕ್ಲಿಪ್ ನಲ್ಲಿರುವುದು ಅವರ ಧ್ವನಿ ಹೌದು ಅದರಲ್ಲಿ ಅನುಮಾನವಿಲ್ಲ. ಈ ಬಗ್ಗೆ ತನಿಖೆ ನಡೆಯಲಿದೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಕ್ರಿಪ್ಟೋಕರೆನ್ಸಿ ವಂಚನೆಗೆ ಸಂಬಂಧಿಸಿದಂತೆ ತಮ್ಮ ಪುತ್ರಿ ಮತ್ತು ಪಕ್ಷದ ಸಂಸದೆ ಸುಪ್ರಿಯಾ ಸುಳೆ ವಿರುದ್ಧ ಬಿಜೆಪಿ ಆರೋಪಗಳನ್ನು ಮಾಡಿದೆ ಎಂದು ಹೇಳಿದ್ದಾರೆ. ಬಿಜೆಪಿಯು ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುತ್ತದೆ ಎಂದುಕೊಂಡಿರಲಿಲ್ಲ, ಸುಪ್ರಿಯಾ ಸುಳೆ ವಿರುದ್ಧ ದೂರು ಹಾಗೂ ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಈ ಹಿಂದೆ ಜೈಲು ಸೇರಿದ್ದರು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ