AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SulliDeals ಸುಲ್ಲಿ ಡೀಲ್ಸ್ ಅಪ್ಲಿಕೇಶನ್ ಕ್ರಿಯೇಟರ್ ಓಂಕಾರೇಶ್ವರ ಠಾಕೂರ್ ಬಂಧನ

Aumkareshwar Thakur ಮಧ್ಯಪ್ರದೇಶದ ನ್ಯೂಯಾರ್ಕ್ ನಗರದ ನಿವಾಸಿ ಓಂಕಾರೇಶ್ವರ ಠಾಕೂರ್​​ನ್ನು ಬಂಧಿಸಲಾಗಿದೆ ಪ್ರಾಥಮಿಕ ವಿಚಾರಣೆ ವೇಳೆ ತಾನು ಮುಸ್ಲಿಂ ಮಹಿಳೆಯರನ್ನು ಟ್ರೋಲ್ ಮಾಡುವ, ಅವಮಾನಿಸುವ ಉದ್ದೇಶ ಹೊಂದಿರುವ ಟ್ವಿಟರ್ ಗುಂಪೊಂದರ ಸದಸ್ಯನಾಗಿದ್ದೇನೆ ಎಂದು ಆತ ಒಪ್ಪಿಕೊಂಡಿದ್ದಾನೆ.

SulliDeals ಸುಲ್ಲಿ ಡೀಲ್ಸ್ ಅಪ್ಲಿಕೇಶನ್ ಕ್ರಿಯೇಟರ್ ಓಂಕಾರೇಶ್ವರ ಠಾಕೂರ್ ಬಂಧನ
ಓಂಕಾರೇಶ್ವರ್ ಠಾಕೂರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 09, 2022 | 10:48 AM

Share

ದೆಹಲಿ: ಸುಲ್ಲಿ ಡೀಲ್ಸ್ ಅಪ್ಲಿಕೇಶನ್ (SulliDeals app)ಕ್ರಿಯೇಟರ್ ಮತ್ತು ಮಾಸ್ಟರ್‌ಮೈಂಡ್ ಓಂಕಾರೇಶ್ವರ ಠಾಕೂರ್​​ನ್ನು(Aumkareshwar Thakur) ಇಂದೋರ್​​ನಲ್ಲಿ ಭಾನುವಾರ ಬಂಧಿಸಲಾಗಿದೆ. ಠಾಕೂರ್ ಅವರು ಮುಸ್ಲಿಂ ಮಹಿಳೆಯರನ್ನುಟ್ವಿಟರ್‌ನಲ್ಲಿ ಟ್ರೋಲ್ ಮಾಡಲು ಮಾಡಿದ  ಟ್ರಾಡ್-ಗ್ರೂಪ್‌ನ ಸದಸ್ಯರಾಗಿದ್ದರು ಎಂದು ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್‌ಎಸ್‌ಒ), ದೆಹಲಿ ಪೊಲೀಸ್ ವಿಶೇಷ ಸೆಲ್ ನ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ.ಈ ಆ್ಯಪ್ ಕಳೆದ ವರ್ಷ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ದೊಡ್ಡ ಕೋಲಾಹಲವನ್ನು ಸೃಷ್ಟಿಸಿತ್ತು. ‘ಸುಲ್ಲಿ ಡೀಲ್ಸ್’ ಆ್ಯಪ್‌ನ ನಿಕಟವಾಗಿ ಕಂಡುಬರುವ ‘ಬುಲ್ಲಿ ಬಾಯ್’ ಪ್ರಕರಣದ ಇತ್ತೀಚಿನ ವಿವಾದದಿಂದ ಮತ್ತೆ ಸುದ್ದಿಯಲ್ಲಿದೆ. ಮಧ್ಯಪ್ರದೇಶದ ನ್ಯೂಯಾರ್ಕ್ ನಗರದ ನಿವಾಸಿ ಓಂಕಾರೇಶ್ವರ ಠಾಕೂರ್​​ನ್ನು ಬಂಧಿಸಲಾಗಿದೆ ಪ್ರಾಥಮಿಕ ವಿಚಾರಣೆ ವೇಳೆ ತಾನು ಮುಸ್ಲಿಂ ಮಹಿಳೆಯರನ್ನು ಟ್ರೋಲ್ ಮಾಡುವ, ಅವಮಾನಿಸುವ ಉದ್ದೇಶ ಹೊಂದಿರುವ ಟ್ವಿಟರ್ ಗುಂಪೊಂದರ ಸದಸ್ಯನಾಗಿದ್ದೇನೆ ಎಂದು ಆತ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಠಾಕೂರ್ GitHub ನಲ್ಲಿ ಕೋಡ್ ಅನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ಗಿಟ್​​ಹಬ್​​ನ ಪ್ರವೇಶವನ್ನು ಗುಂಪಿನ ಎಲ್ಲಾ ಸದಸ್ಯರಿಗೆ ನೀಡಲಾಯಿತು. ಈತ ತಮ್ಮ ಟ್ವಿಟರ್ ಖಾತೆಯಲ್ಲಿ ಅಪ್ಲಿಕೇಶನ್ ಅನ್ನು ಹಂಚಿಕೊಂಡಿದ್ದು. ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಗುಂಪಿನ ಸದಸ್ಯರು ಅಪ್‌ಲೋಡ್ ಮಾಡಿದ್ದಾರೆ ಎಂದು ವರದಿಯಲ್ಲಿ ಹೇಳಿದೆ.

ಠಾಕೂರ್ ಅವರು ಜನವರಿ 2020 ರಲ್ಲಿ @gangescion ಹ್ಯಾಂಡಲ್ ಅನ್ನು ಬಳಸಿಕೊಂಡು ಟ್ವಿಟರ್‌ನಲ್ಲಿ ಟ್ರಾಡ್ ಮಹಾಸಭಾ (Tradmahasabha) ಎಂಬ ಹೆಸರಿನ ಗುಂಪನ್ನು ಸೇರಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿವಿಧ ಗುಂಪು ಚರ್ಚೆಗಳಲ್ಲಿ, ಈ ಸದಸ್ಯರು ಮುಸ್ಲಿಂ ಮಹಿಳೆಯರನ್ನು ಟ್ರೋಲ್ ಮಾಡುವ ಬಗ್ಗೆ ಚರ್ಚಿಸಿದರು. ಅವರು GitHub ನಲ್ಲಿ ಕೋಡ್/ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದರು.

ಸುಲ್ಲಿ ಡೀಲ್ಸ್ ಅಪ್ಲಿಕೇಶನ್‌ ವಿವಾದ ನಂತರ ಠಾಕೂರ್ ತಮ್ಮ ಎಲ್ಲಾ ಸಾಮಾಜಿಕ ಮಾಧ್ಯಮದ ಎಲ್ಲ ಖಾತೆಗಳನ್ನು ಅಳಿಸಿದ್ದರು. ಸುಲ್ಲಿ ಡೀಲ್ಸ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಕೋಡ್‌ಗಳು/ಚಿತ್ರಗಳನ್ನು ಕಂಡುಹಿಡಿಯಲು ತಾಂತ್ರಿಕ ಗ್ಯಾಜೆಟ್‌ಗಳ ವಿಶ್ಲೇಷಣೆ ಸೇರಿದಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸುಲ್ಲಿ ಡೀಲ್ಸ್ ಮತ್ತು ಬುಲ್ಲಿ ಬಾಯ್ ರಚಿಸಲು ಬಳಸಿದ ವೆಬ್‌ಸೈಟ್; ಏನಿದು ಗಿಟ್​​ಹಬ್?

Published On - 10:02 am, Sun, 9 January 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ