ಕೆಆರ್​ಎಸ್ ಸುತ್ತಮುತ್ತಲ ಗಣಿಗಾರಿಕೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆದ ಸುಮಲತಾ

ಕೆಆರ್​ಎಸ್​ ಜಲಾಶಯಕ್ಕೆ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಸುಮಲತಾ ವಿವರಿಸಿದರು. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದರು.

ಕೆಆರ್​ಎಸ್ ಸುತ್ತಮುತ್ತಲ ಗಣಿಗಾರಿಕೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆದ ಸುಮಲತಾ
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ದೆಹಲಿಯಲ್ಲಿ ಮಂಗಳವಾರ ಮಂಡ್ಯ ಸಂಸದೆ ಸುಮಲತಾ ಕೆಆರ್​ಎಸ್​ ಸುರಕ್ಷೆ ಬಗ್ಗೆ ಕ್ರಮವಹಿಸುವಂತೆ ಮನವಿ ಪತ್ರ ನೀಡಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 20, 2021 | 5:16 PM

ದೆಹಲಿ: ಕೃಷ್ಣರಾಜ ಸಾಗರ ಜಲಾಶಯ (ಕೆಆರ್​ಎಸ್ ಡ್ಯಾಂ) ಸುತ್ತಮುತ್ತ ನಡೆಯುತ್ತಿದೆ ಎನ್ನಲಾದ ಅಕ್ರಮ ಗಣಿ ವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳಕ್ಕೆ ಬಂದಿದೆ. ಈ ಸಂಬಂಧ ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಕೆಆರ್​ಎಸ್​ ಜಲಾಶಯಕ್ಕೆ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ಸಮಿತಿ ರಚಿಸಿ, ತನಿಖೆ ನಡೆಸಬೇಕು ಎಂದು ಕೋರಿದರು.

ಸಚಿವ ಪ್ರಲ್ಹಾದ್ ಜೋಷಿಗೆ ಸುಮಲತಾ ಮನವಿ ಕೇಂದ್ರ ಗಣಿ ಸಚಿವ ಪ್ರಲ್ಹಾದ್​ ಜೋಷಿ ಅವರಿಗೂ ಮನವಿ ಪತ್ರ ಸಲ್ಲಿಸಿದ ಮಂಡ್ಯ ಸಂಸದೆ ಸುಮಲತಾ, ಕೆಆರ್​ಎಸ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ತಡೆಗೆ ಒತ್ತಾಯಿಸಿದರು. ಸತ್ಯಶೋಧನೆ ಮಾಡಲು ಡ್ರೋನ್ ಮೂಲಕ ಸಮೀಕ್ಷೆ ನಡೆಸಬೇಕು. ಅಕ್ರಮ ಗಣಿಗಾರಿಕೆ ಪತ್ತೆ ಹಚ್ಚಲು ಮತ್ತು ಶಿಸ್ತುಕ್ರಮ ಜರುಗಿಸಲು ಕೇಂದ್ರ ಸರ್ಕಾರ ಗಟ್ಟಿ ನಿಲುವು ತೆಗೆದುಕೊಳ್ಳ ಬೇಕು ಎಂದು ಒತ್ತಾಯಿಸಿದರು.

ಕೆಆರ್​ಎಸ್​ ಸುರಕ್ಷೆ ಬಗ್ಗೆ ಪ್ರಶ್ನೆ ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಕೆಆರ್​ಎಸ್​ ಜಲಾಶಯದ ಸುರಕ್ಷೆ ದೊಡ್ಡ ಚರ್ಚೆಯ ವಿಷಯವಾಗಿದೆ. ಕೆಆರ್​ಎಸ್ ಜಲಾಶಯ ಅಪಾಯದಲ್ಲಿದೆ ಎಂದು ಸಂಸದೆ ಸುಮಲತಾ ಹೇಳಿದ್ದರೆ, ಜಲಾಶಯ ಸುರಕ್ಷಿತವಾಗಿದೆ ಎಂದು ಜೆಡಿಎಸ್​ನ ಹಲವು ಶಾಸಕರು ಸಮರ್ಥಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಮತ್ತು ಕರ್ನಾಟಕ ರಾಜಕಾರಣದಲ್ಲಿ ಹಲವು ಕೆಸರೆರಚಾಟಗಳಿಗೆ ಕಾರಣವಾಗಿದ್ದ ಈ ಪ್ರಕರಣ ಇದೀಗ ಕೇಂದ್ರ ಸರ್ಕಾರದ ಅಂಗಳ ಪ್ರವೇಶಿಸಿದೆ.

ಕಳೆದ ವಾರ ಮಂಡ್ಯ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಚರಿಸಿದ ನಂತರ ಮಾತನಾಡಿದ್ದ ಸಂಸದೆ ಸುಮಲತಾ, ಅಪಾಯ ಆಗುವ ಮುನ್ನ ಎಚ್ಚೆತ್ತುಕೊಳ್ಳುವುದು ಜವಾಬ್ದಾರಿಯುತ ನಾಗರಿಕರ ಲಕ್ಷಣ. ನಾವೆಲ್ಲರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ನಿಶ್ಚಿತ. ಕೆಆರ್​ಎಸ್ ಡ್ಯಾಂನಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಬೇಕಾಗಿದೆ. ಈ ಸಂಬಂಧ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಆಗ್ರಹಿಸುವೆ ಎಂದು ಹೇಳಿದ್ದರು.

ಮಹಾರಾಜರ ತ್ಯಾಗದಿಂದ ಕೆಆರ್​ಎಸ್​ ಡ್ಯಾಮ್ ನಿರ್ಮಾಣವಾಗಿದೆ. ಇಂತಹ ಆಸ್ತಿಯನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ. ಸದ್ಯಕ್ಕೆ ಯಾವುದೇ ಸಮಸ್ಯೆಯಿಲ್ಲವೆಂಬ ತಾತ್ಸಾರ ಸಲ್ಲದು. ಒಂದು ವೇಳೆ ಸಮಸ್ಯೆಯಾದರೆ ಹೊಣೆ ಹೊರುವವಱರು, ಮತ್ತೆ ನಾವು ಇಂತಹ ಜಲಾಶಯ ನಿರ್ಮಿಸಲು ಸಾಧ್ಯವೇ? ಡ್ಯಾಂನಲ್ಲಿ ಸಣ್ಣಪುಟ್ಟ ಬಿರುಕು ಕಾಣಿಸಿಕೊಂಡಿದ್ದರಿಂದ ₹ 67 ಕೋಟಿ ರೂಪಾಯಿ ವೆಚ್ಚದಲ್ಲಿ ದುರಸ್ತಿ ಮಾಡಿದ್ದಾರೆ. ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸುಮಲತಾ ತಿಳಿಸಿದ್ದರು.

ಕೆಆರ್​ಎಸ್​ ಡ್ಯಾಮ್ ಸುರಕ್ಷೆಯ ಪರಿಶೀಲನೆಗಾಗಿ ಕಾರ್ಯಪಡೆ ರಚಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗೆ 3 ತಿಂಗಳ ಹಿಂದೇ ಸೂಚಿಸಿದ್ದೆ. ಈವರೆಗೆ ಪ್ರತಿಕ್ರಿಯೆ ನೀಡಿಲ್ಲ. ಎಲ್ಲಾ ವಿಭಾಗದ ಅಧಿಕಾರಿಗಳನ್ನು ಒಗ್ಗೂಡಿಸಿ ಕಾರ್ಯಪಡೆ ರಚಿಸುವುದು ಅನಿವಾರ್ಯ. ನನ್ನ ಹೇಳಿಕೆಗೆ ಬೇರೆ ಬೇರೆ ಅರ್ಥ ಕಲ್ಪಿಸುತ್ತಿರುವುದು ಯಾಕೆ? ಕನ್ನಂಬಾಡಿ ಕಟ್ಟೆಯಲ್ಲಿ ಬಿರುಕು ಬಿಟ್ಟಿದ್ದಕ್ಕೆ ದುರಸ್ತಿ ಮಾಡಿದ್ದಾರೆ. ಮಹಾರಾಜರ ದೂರಾಲೋಚನೆಗೆ ದೇಗುಲ ಕಟ್ಟಿ ಪೂಜಿಸಬೇಕು. ಆದರೆ, ನಮ್ಮಲ್ಲಿ ಬರೀ ದುರಾಲೋಚನೆಯೇ ತುಂಬಿದೆ. ಕೆಆರ್​ಎಸ್​ ಅಣೆಕಟ್ಟೆ ಬಗ್ಗೆ ಹಲವರ ಪ್ರತಿಕ್ರಿಯೆಗೆ ಬೇಸರ ಉಂಟಾಗಿದೆ. ಜನರ ಗಮನ ಬೇರೆಡೆ ಸೆಳೆಯಲು ಹೀಗೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸುಮಲತಾ ಬೇಸರ ವ್ಯಕ್ತಪಡಿಸಿದ್ದರು.

(Sumalatha Requests Central govt to Intervene in KRS Dam Safety Issue)

ಇದನ್ನೂ ಓದಿ: Sumalatha Press Meet: ಮಂಡ್ಯದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ: ಸಂಸದೆ ಸುಮಲತಾ

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಹತ್ತಿಕ್ಕಲು ರಾಜಭವನದ ಕದ ತಟ್ಟಿದ ಸುಮಲತಾ; ರಾಜ್ಯಪಾಲರಿಗೆ ದೂರು

Published On - 4:57 pm, Tue, 20 July 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್