AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ನಿಧನರಾದ 1 ತಿಂಗಳ ನಂತರ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಎನ್‌ಸಿಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್‌ಸಿಪಿ ಮುಖ್ಯಸ್ಥರಾಗಿದ್ದ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ ಎಂದು ಹಿರಿಯ ನಾಯಕ ಪ್ರಫುಲ್ ಪಟೇಲ್ ಪ್ರಕಟಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸಿರುವುದಾಗಿ ಪಟೇಲ್ ಹೇಳಿದ್ದಾರೆ. ಅಲ್ಲಿ ಎಲ್ಲಾ ಸದಸ್ಯರಿಂದ ಸರ್ವಾನುಮತದ ಅನುಮೋದನೆ ಪಡೆಯಲಾಯಿತು.

ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ
Sunetra Pawar
ಸುಷ್ಮಾ ಚಕ್ರೆ
|

Updated on: Feb 26, 2026 | 10:19 PM

Share

ಮುಂಬೈ, ಫೆಬ್ರವರಿ 26: ಮಹಾರಾಷ್ಟ್ರದ ಬಾರಾಮತ್‌ನಲ್ಲಿ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟ ಒಂದು ತಿಂಗಳ ಬಳಿಕ ಇಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್​ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರನ್ನು ಆಯ್ಕೆ ಮಾಡಲಾಗಿದೆ. ಎನ್​ಸಿಪಿ ಕಾರ್ಯಕಾರಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮತ್ತು ಸುನೇತ್ರಾ ಪವಾರ್ ಅವರು ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ಮಂಡಿಸಿದ್ದ ಹಿರಿಯ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಇಂದು ಈ ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರ ಸ್ಥಾನವನ್ನು ವಹಿಸಿಕೊಂಡ ಸುನೇತ್ರಾ ಪವಾರ್ ಅವರು ಎನ್‌ಸಿಪಿಯ ರಾಷ್ಟ್ರೀಯ ಮುಖ್ಯಸ್ಥರಾಗಲಿದ್ದಾರೆ ಎಂಬ ಸುದ್ದಿ ಕಳೆದ ವಾರ ಪಕ್ಷದ ಶಾಸಕರು ಅವರ ನಾಮನಿರ್ದೇಶನವನ್ನು ಬೆಂಬಲಿಸಿದ ನಂತರ ಹೊರಹೊಮ್ಮಿತ್ತು. ಇಂದು ಅಧಿಕೃತ ಘೋಷಣೆ ಹೊರಬಿದ್ದಿದೆ.

ಇದನ್ನೂ ಓದಿ: “ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ?

ಈ ತಿಂಗಳ ಆರಂಭದಲ್ಲಿ ಸುನೇತ್ರಾ ಪವಾರ್ ಅವರು ತಮ್ಮ ಪತಿ ಮರಣ ಹೊಂದಿದ 13 ದಿನಗಳ ನಂತರ ಉಪ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರ ವಹಿಸಿಕೊಂಡರು.

“ಅಜಿತ್ ಪವಾರ್ ಅವರ ಅಪೂರ್ಣ ಕನಸುಗಳನ್ನು ನನಸಾಗಿಸುವುದು, ರೈತರು, ಮಹಿಳೆಯರು, ಯುವಕರು ಮತ್ತು ಸಾಮಾನ್ಯ ನಾಗರಿಕರ ನಿರೀಕ್ಷೆಗಳಿಗೆ ನ್ಯಾಯ ಒದಗಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ. ಅವರ ಪರಂಪರೆಯನ್ನು ಉಳಿಸಿಕೊಳ್ಳಲು ಮತ್ತು ಬಲವಾದ ಮತ್ತು ಹೆಚ್ಚು ಸಮರ್ಥ ಮಹಾರಾಷ್ಟ್ರವನ್ನು ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಸುನೇತ್ರಾ ಪವಾರ್ ಇಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us