ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ನೀಡಿದ 2 ವರ್ಷ ಜೈಲು ಶಿಕ್ಷೆ ಆದೇಶ ತಡೆ ನೀಡುವಂತೆ ಗುಜರಾತ್ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್ 4ರಂದು ವಿಚಾರಣೆ ನಡೆಸುದಾಗಿ ಸುಪ್ರೀಂ ಹೇಳಿದೆ.
ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ನೀಡಿತ್ತು, ಆದರೆ ರಾಹುಲ್ ಗಾಂಧಿ ಈ ಶಿಕ್ಷೆಯನ್ನು ತಡೆಯುವಂತೆ ಗುಜರಾತ್ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜುಲೈ 15ರಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು. ಸುಪ್ರೀಂ ಅವರ ಅರ್ಜಿಯನ್ನು ವಿಚಾರಣೆ ಮಾಡುವುದಾಗಿ ಜುಲೈ 18ರಂದು ಒಪ್ಪಿಗೆ ನೀಡಿತ್ತು, ಆದರೆ ಸುಪ್ರೀಂ ಇಂದು ಈ ವಿಚಾರಣೆಯನ್ನು ಆ.4ಕ್ಕೆ ಸುಪ್ರೀಂ ಮುಂದೂಡಿದೆ.
ಡಾ. ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಪಿಕೆ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ ರಾಹುಲ್ ಗಾಂಧಿ ಪರ ವಾದ ಮಂಡಿಸಿದ್ದಾರೆ. ಈ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ಮಾಡುವಂತೆ ಮನವಿ ಮಾಡಿದರು, ಇದಕ್ಕೆ ಒಪ್ಪಿದ ಮುಖ್ಯನ್ಯಾಯಮೂರ್ತಿ ಡಿ,ವೈ ಚಂದ್ರಚೂಡ ಜುಲೈ 21ರಂದು ವಿಚಾರಣೆ ನಡೆಸುದಾಗಿ ತಿಳಿಸಿದರು, ಇದೀಗ ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದೆ ಎಂದು ಡಾ. ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮನೆಯನ್ನು ಬಾಡಿಗೆಗೆ ಪಡೆಯುವ ಸಾಧ್ಯತೆ
ಇನ್ನೂ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ನೀಡಿದ್ದು, 10 ದಿನದ ಒಳಗೆ ಉತ್ತರ ನೀಡುವಂತೆ ತಿಳಿಸಿದೆ. ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರ ಮೋದಿ ಉಪನಾಮದ ಬಗ್ಗೆ ಭಾಷಣ ಮಾಡಿದ್ದು, ಇದು ಮೊಕದ್ದಮೆಯನ್ನು ಪ್ರಚೋದಿಸಲಾಗಿತ್ತು. ಅವರು ತಮ್ಮ ಭಾಷಣದಲ್ಲಿ ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರನ್ನು ಉಲ್ಲೇಖಿಸಿ, ಇಬ್ಬರೂ ಭಾರತದಲ್ಲಿ ಬೇಕಾಗಿರುವ ಪ್ರಮುಖ ಉದ್ಯಮಿಗಳು, ದೇಶಕ್ಕೆ ದ್ರೋಹ ಮಾಡಿ ಪರಾರಿಯಾಗಿದ್ದಾರೆ. ಈ “ಮೋದಿ” ಎಂಬ ಉಪನಾಮವು ಕಳ್ಳರಲ್ಲಿ ಸಾಮಾನ್ಯವಾಗಿದೆ ಎಂಬ ಹೇಳಿಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:39 am, Fri, 21 July 23