ಕೊರೊನಾಗೆ ಬಲಿಯಾದ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ
ಕೊರೊನದಿಂದ ನಿಧನ ಹೊಂದಿದ ಕುಟುಂಬಕ್ಕೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ. ಈ ಕುರಿತು ಅದು ನಿರ್ದೇಶನಗಳನ್ನು ನೀಡಿದೆ.
ಕೊರೊನಾಗೆ ಬಲಿಯಾದ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರ ಗೈಡ್‌ಲೈನ್ಸ್‌ನಂತೆ ಪರಿಹಾರ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ 30 ದಿನದೊಳಗೆ ಪರಿಹಾರವನ್ನು ನೀಡಬೇಕು ಮತ್ತು ಪರಿಹಾರ ನೀಡುವ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಹೆಚ್ಚಾಗಿ ಪ್ರಚಾರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಸುಪ್ರೀಂಕೋರ್ಟ್ ನ್ಯಾ. ಎಂ.ಆರ್.ಶಾ ನೇತೃತ್ವದ ಪೀಠ ಆದೇಶ ನೀಡಿದೆ.
‘‘ಮರಣ ಪ್ರಮಾಣಪತ್ರದಲ್ಲಿ ಸಾವಿಗೆ ಕಾರಣ ಕೋವಿಡ್ -19 ಎಂಬುದು ನಮೂದಾಗಿಲ್ಲ ಎಂಬ ಕಾರಣಕ್ಕೆ ಯಾವುದೇ ರಾಜ್ಯವು 50,000 ರೂ.ಗಳ ಪ್ರಯೋಜನವನ್ನು ನಿರಾಕರಿಸುವಂತಿಲ್ಲ. ಸಾವಿನ ಕಾರಣವನ್ನು ಸರಿಪಡಿಸಲು ಜಿಲ್ಲಾ ಅಧಿಕಾರಿಗಳು ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಾರೆ. ಜಿಲ್ಲಾ ಮಟ್ಟದ ಸಮಿತಿಯ ವಿವರಗಳನ್ನು ಮುದ್ರಣ ಮಾಧ್ಯಮದಲ್ಲಿ ಪ್ರಕಟಿಸಬೇಕು”ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಹಣವನ್ನು ಪಾವತಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದ್ದು, ಪರಿಹಾರದ ಮೊತ್ತವನ್ನು ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ವಿತರಿಸಬೇಕು ಮತ್ತು ಸಾವಿಗೆ ಕಾರಣವನ್ನು ಕೋವಿಡ್ -19 ಎಂದು ಪ್ರಮಾಣೀಕರಿಸಬೇಕು ಎಂದು ತಿಳಿಸಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (NDMA) ಕೋವಿಡ್ -19 ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ರೂ .50,000 ನೀಡುವಂತೆ ಶಿಫಾರಸು ಮಾಡಿದೆ ಎಂದು ಕೇಂದ್ರವು ಕಳೆದ ತಿಂಗಳು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿ, ನಿಧನ ಹೊಂದಿದ ಕುಟುಂಬದವರಿಗೂ ಪರಿಹಾರ ನೀಡಲಾಗುವುದು ಎಂದು ಕೇಂದ್ರ ತಿಳಿಸಿತ್ತು.
ಇದನ್ನೂ ಓದಿ:
ಕೊರೊನಾಗೆ ಬಲಿಯಾದವರ ಕುಟುಂಬಗಳಿಗೆ ಪರಿಹಾರ ಇಲ್ಲ; ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ
Published On - 12:01 pm, Mon, 4 October 21