Ram Setu: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

|

Updated on: Mar 20, 2023 | 3:09 PM

ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ಸಮ್ಮತಿ ನೀಡಿದೆ.

Ram Setu: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ರಾಮಸೇತು
Follow us on

ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ಸಮ್ಮತಿ ನೀಡಿದೆ. ಈ ಕುರಿತು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರವು 9 ವರ್ಷಗಳಿಂದ ಈ ವಿಷಯದಲ್ಲಿ ವಿಳಂಬ ಮಾಡುತ್ತಿದೆ ಎಂದು ಸ್ವಾಮಿ ಹೇಳಿದರು. ಜನವರಿ 19 ರಂದು, ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವೆಂದು ಘೋಷಿಸುವ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ನಾವು ಈ ವಿಚಾರವನ್ನು ವಿಚಾರಣೆಗೆ ಮೊದಲೇ ಪಟ್ಟಿ ಮಾಡುತ್ತೇವೆ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠವು, ಸರ್ಕಾರವು ಇಲ್ಲಿಯವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದ ಬಿಜೆಪಿ ನಾಯಕರ ಮನವಿಗಳನ್ನು ಗಮನಿಸಿತು.

ಮತ್ತಷ್ಟು ಓದಿ: ಈ ಎರಡು ಭಾರತೀಯ ತಾಣಗಳು ಟೈಮ್‌​ನ ‘2023 ರ ವಿಶ್ವದ ಶ್ರೇಷ್ಠ ಸ್ಥಳಗಳ’ ಪಟ್ಟಿಯಲ್ಲಿ ಸೇರಿವೆ

ರಾಮಸೇತುವನ್ನು ಆಡಮ್‌ನ ಸೇತುವೆ ಎಂದೂ ಕರೆಯಲಾಗುತ್ತದೆ, ಇದು ತಮಿಳುನಾಡಿನ ಆಗ್ನೇಯ ಕರಾವಳಿಯಲ್ಲಿರುವ ಪಂಬನ್ ದ್ವೀಪ ಮತ್ತು ಶ್ರೀಲಂಕಾದ ವಾಯುವ್ಯ ಕರಾವಳಿಯ ಮನ್ನಾರ್ ದ್ವೀಪದ ನಡುವಿನ ಸುಣ್ಣದ ಕಲ್ಲುಗಳ ಸರಪಳಿಯಾಗಿದೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಬಗ್ಗೆ ನಿರ್ಧಾರಕ್ಕೆ ಬರಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದ ಪೀಠವು, ಇದರಲ್ಲಿ ಸ್ವಾಮಿ ಅವರಿಗೆ ಅಸಮಾಧಾನವಿದ್ದರೆ ಮತ್ತು ಅವರ ಮಧ್ಯಂತರ ಅರ್ಜಿ ವಿಲೇವಾರಿ ಮಾಡಿದರೆ ಅವರು ಮುಂದಿನ ಹಂತಕ್ಕೆ ಹೋಗಲು ಸ್ವತಂತ್ರರು ಎಂದು ಕೂಡ ಹೇಳಿದೆ.

ತಮಿಳುನಾಡಿನ ಆಗ್ನೇಯ ಕರಾವಳಿಯಲ್ಲಿರುವ ಪಂಬನ್ ದ್ವೀಪ ಮತ್ತು ಶ್ರೀಲಂಕಾದ ವಾಯುವ್ಯ ಕರಾವಳಿಯ ಮನ್ನಾರ್ ದ್ವೀಪದ ನಡುವಿನ ಸುಣ್ಣದ ಕಲ್ಲುಗಳ ಸರಪಳಿಯನ್ನು ರಾಮಸೇತು ಮತ್ತು ಆಡಮ್‍ನ ಸೇತುವೆ ಎಂದೂ ಕರೆಯುತ್ತಾರೆ. ಇದು ರಾಮಸೇತು ಅಸ್ತಿತ್ವವನ್ನು ಕೇಂದ್ರ ಸರ್ಕಾರ ಈಗಾಗಲೇ ಒಪ್ಪಿಕೊಂಡಿರುವುದರಿಂದ ನಾನು ಈಗಾಗಲೇ ವ್ಯಾಜ್ಯದಲ್ಲಿ ಜಯಗಳಿಸಿದ್ದೇನೆ ಎಂದು ಸ್ವಾಮಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ