PMLA ಹಿಂದಿನ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸಮ್ಮತಿ

| Updated By: ಸುಷ್ಮಾ ಚಕ್ರೆ

Updated on: Aug 22, 2022 | 1:05 PM

ಜುಲೈ 27ರಂದು ಸುಪ್ರೀಂ ಕೋರ್ಟ್ ಪಿಎಂಎಲ್‌ಎಯ ಕೆಲವು ನಿಬಂಧನೆಗಳ ಸಿಂಧುತ್ವವನ್ನು ಎತ್ತಿ ಹಿಡಿದಿತ್ತು. ಇದು ಸಾಮಾನ್ಯ ಅಪರಾಧ ಅಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿತ್ತು.

PMLA ಹಿಂದಿನ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸಮ್ಮತಿ
ಸುಪ್ರೀಂಕೋರ್ಟ್
Follow us on

ನವದೆಹಲಿ: ಅಕ್ರಮ ಹಣ ವರ್ಗಾವಣೆ (money laundering) ಕಾಯ್ದೆಯಡಿಯಲ್ಲಿ ಅಕ್ರಮ ಹಣ ವರ್ಗಾವಣೆಯಲ್ಲಿರುವ ಆಸ್ತಿಯನ್ನು ವಶಪಡಿಸಿಕೊಳ್ಳುವ, ಶೋಧ ನಡೆಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಎತ್ತಿ ಹಿಡಿಯುವ ತನ್ನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ. ಆ ಅರ್ಜಿಗಳನ್ನು ನಾವು ಪಟ್ಟಿ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್​ (Supreme Court) ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ.

ಮನಿ ಲಾಂಡರಿಂಗ್ ಹಣಕಾಸು ವ್ಯವಸ್ಥೆಯ ಉತ್ತಮ ಕಾರ್ಯ ನಿರ್ವಹಣೆಗೆ ತಡೆಯಾಗಬಹುದು. ಜುಲೈ 27ರಂದು ಸುಪ್ರೀಂ ಕೋರ್ಟ್ ಪಿಎಂಎಲ್‌ಎಯ ಕೆಲವು ನಿಬಂಧನೆಗಳ ಸಿಂಧುತ್ವವನ್ನು ಎತ್ತಿ ಹಿಡಿದಿತ್ತು. ಇದು ಸಾಮಾನ್ಯ ಅಪರಾಧ ಅಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿತ್ತು. ಇದು ರಾಷ್ಟ್ರೀಯ ಭದ್ರತೆಗೆ ಗಂಭೀರ ಅಪಾಯವಾಗಿದೆ ಎಂದು ಹೇಳಿತ್ತು.

ಇದನ್ನೂ ಓದಿ: Big News: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ; ವಿರೋಧ ಪಕ್ಷಗಳಿಗೆ ಭಾರೀ ಹಿನ್ನಡೆ

ಪ್ರತಿ ಪ್ರಕರಣದಲ್ಲಿ ಇಸಿಐಆರ್ ಪ್ರತಿಯನ್ನು ಸಂಬಂಧಪಟ್ಟ ವ್ಯಕ್ತಿಗೆ ಸರಬರಾಜು ಮಾಡುವುದು ಕಡ್ಡಾಯವಲ್ಲ. ಬಂಧನದ ಸಮಯದಲ್ಲಿ ಇಡಿ ಯಾವ ಕಾರಣಕ್ಕೆ ಬಂಧಿಸಲಾಗುತ್ತಿದೆ ಎಂಬ ಕಾರಣವನ್ನು ಬಹಿರಂಗಪಡಿಸಿದರೆ ಸಾಕು ಎಂದು ಪೀಠವು ಹೇಳಿದೆ. ಈ ಪ್ರಕರಣದ ಅರ್ಜಿದಾರರು ಆರೋಪಿಗಳಿಗೆ ಇಸಿಐಆರ್‌ನ ವಿಷಯಗಳನ್ನು ಬಹಿರಂಗಪಡಿಸದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು.

ಪಿಎಂಎಲ್‌ಎಯ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿ ವ್ಯಕ್ತಿಗಳು ಮತ್ತು ಇತರ ಘಟಕಗಳು ಸಲ್ಲಿಸಿದ 200ಕ್ಕೂ ಹೆಚ್ಚು ಅರ್ಜಿಗಳ ಕ್ಲಚ್‌ನ ಮೇಲೆ ನ್ಯಾಯಾಲಯದ ತೀರ್ಪು ಬಂದಿದೆ. ಈ ಕಾನೂನನ್ನು ತನ್ನ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು ಸರ್ಕಾರವು ಅಸ್ತ್ರಗೊಳಿಸಿದೆ ಎಂದು ಪ್ರತಿಪಕ್ಷಗಳು ಆಗಾಗ ಆರೋಪಿಸಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Mon, 22 August 22